WhatsApp: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ತಪ್ಪಿಯೂ ಹೀಗೆ ಮಾಡಬೇಡಿ

| Updated By: Vinay Bhat

Updated on: Sep 03, 2022 | 6:48 AM

ಜುಲೈ 1 ರಿಂದ ಜುಲೈ 31 2022 ರ ನಡುವಿನ ಮಾಸಿಕ ವರದಿಯಲ್ಲಿ ಭಾರತದ 16 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್‌ ಮಾಡಿದೆ ಎಂದು ಬರೆಯಲಾಗಿದೆ. ಇನ್ನು ಈ ಮಾಸಿಕ ಬಳಕೆದಾರ-ಸುರಕ್ಷತಾ ವರದಿಯು ಬಳಕೆದಾರರಿಂದ ಸ್ವೀಕರಿಸಿದ ದೂರುಗಳು ಮತ್ತು ವಾಟ್ಸ್​​ಆ್ಯಪ್​​ ತೆಗೆದುಕೊಂಡ ಕ್ರಮಗಳ ವಿವರಗಳನ್ನು ವರದಿ ಮಾಡಿದೆ.

WhatsApp: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ತಪ್ಪಿಯೂ ಹೀಗೆ ಮಾಡಬೇಡಿ
WhatsApp Ban
Follow us on

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಸಾಕಷ್ಟು ಪ್ರಸಿದ್ಧಿ ಪಡೆದುಕೊಂಡಿದೆ. ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಸೆಳೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಆಕರ್ಷಕ ಫೀಚರ್​ಗಳನ್ನು ಪರಚಯಿಸುತ್ತಾ ಇರುವುದು. ಈ ವರ್ಷವಂತು ವಾಟ್ಸ್​ಆ್ಯಪ್ ಸಾಮಾನ್ಯರಿಗೆ ಹತ್ತಿರವಾಗುವಂತಹ ಅನೇಕ ಅಪ್ಡೇಟ್​ಗಳನ್ನು ನೀಡಿದೆ. ಇದರ ಜೊತೆಗೆ ಬಳಕೆದಾರರಿಂದ ಬರುತ್ತಿರುವ ದೂರುಗಳನ್ನು ಗಂಭೀರವಾಗಿ ಪರಗಣಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಐಟಿ ನಿಯಮಗಳಿಗೆ ಅನುಸಾರವಾಗಿ ಅಕೌಂಟ್‌ಗಳನ್ನು ಬ್ಯಾನ್‌ (Ban) ಮಾಡುತ್ತಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ 16.6 ಲಕ್ಷಕ್ಕೂ ಅಧಿಕ ಖಾತೆ, ಜೂನ್​ನಲ್ಲಿ 3 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ (WhatsApp) ಖಾತೆ ನಿಷೇಧವಾಗಿತ್ತು. ಇದೀಗ ಜುಲೈ ತಿಂಗಳ ವರದಿ ಬಿಡುಗಡೆ ಮಾಡಿದ್ದು ಭಾರತದ 23 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿರುವುದಾಗಿ ಹೇಳಿದೆ.

ಐಟಿ ನಿಯಮ 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗುತ್ತಿದ್ದು ಸಾಮಾಜಿಕ ಜಾಲತಾಣಗಳಿಂದ ತಿಂಗಳಿಗೆ 5 ಮಿಲಿನುಯನ್​ಗೂ ಅಧಿಕ ದೂರುಗಳು ಬರುತ್ತವೆಯಂತೆ. ವಾಟ್ಸ್​ಆ್ಯಪ್​ ನೀತಿಗಳ ಉಲ್ಲಂಘನೆಯಿಂದಾಗಿ ಹೆಚ್ಚಿನ ಖಾತೆಗಳನ್ನು ನಿಷೇಧಿಸಲಾಗಿದೆಯಾದರೂ, ಭಾರತದಲ್ಲಿನ ಇತರ ಬಳಕೆದಾರರು ವರದಿ ಮಾಡುವ ಕುಂದುಕೊರತೆಗಳ ಮೇಲೆ ಅಕೌಂಟ್‌ ಬ್ಯಾನ್‌ ಮಾಡುವ ಕ್ರಮ ತೆಗೆದುಕೊಳ್ಳುತ್ತದೆ. ಇತ್ತೀಚಿನ ವರದಿಯ ಪ್ರಕಾರ ಇದುವರೆಗೆ 2,069,000 ಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಕಂಪನಿ ಹೇಳಿದೆ.

ವಾಟ್ಸ್​ಆ್ಯಪ್​ ಜುಲೈ ತಿಂಗಳ ಮಾಸಿಕ ವರದಿಯಲ್ಲಿ, ಸೊಶೀಯಲ್‌ ಮೀಡಿಯಾ ನಿಯಮ ಉಲ್ಲಂಘನೆ ಜೊತೆಗೆ ವಾಟ್ಸ್​ಆ್ಯಪ್​​ನಿಯಮಗಳನ್ನು ಉಲ್ಲಂಘಿಸಿರುವವರ ಖಾತೆಗಳನ್ನು ನಿಷೇದಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ವಾಟ್ಸ್​ಆ್ಯಪ್​​ನಲ್ಲಿ ಬಳಕೆದಾರರು ಮಾಡುವ ರಿಪೋರ್ಟ್‌ ಆಧಾರದ ಮೇಲೂ ಕೂಡ ಅನೇಕ ಅಕೌಂಟ್‌ಗಳನ್ನು ನಿಷೇಧ ಮಾಡಿದೆ. ಭಾರತದಲ್ಲಿ ಹೊಸ ಐಟಿ ನಿಯಮ ಜಾರಿಗೆ ಬಂದ ನಂತರ ಪ್ರತಿ ತಿಂಗಳು ಕೂಡ ಕುಂದುಕೊರತೆಯ ವರದಿ ನೀಡುವುದು ಕಡ್ಡಾಯವಾಗಿದೆ. ಅದರಂತೆ ವಾಟ್ಸ್​ಆ್ಯಪ್​​ ಜುಲೈ ತಿಂಗಳ ಅವಧಿಯಲ್ಲಿ ತಾನು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ
WhatsApp: ಇನ್ಮುಂದೆ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸಲ್ಲ: ಐಫೋನ್ ಬಳಕೆದಾರರು ತಪ್ಪದೇ ಈ ಸ್ಟೋರಿ ಓದಿ
ಅತಿಯಾದ ಸ್ಮಾರ್ಟ್​ಫೋನ್, ಲ್ಯಾಪ್​ಟಾಪ್ ಬಳಕೆಯಿಂದ ಏನಾಗುತ್ತೇ?: ಅಚ್ಚರಿ ವಿಚಾರ ಬಹಿರಂಗ
iPhone 14: ಸೆಪ್ಟಂಬರ್​ನಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್​ಫೋನ್​ಗಳು ಯಾವುವು?: ಇಲ್ಲಿದೆ ನೋಡಿ ಲಿಸ್ಟ್
WhatsApp Tricks: ನಿಮ್ಮ ಸ್ನೇಹಿತರಿಗೆ ತಿಳಿಯದಂತೆ ವಾಟ್ಸ್​ಆ್ಯಪ್ ಮೆಸೇಜ್ ನೋಡಬಹುದು: ಹೇಗೆ ಗೊತ್ತೇ?

ಜುಲೈ 1 ರಿಂದ ಜುಲೈ 31 2022 ರ ನಡುವಿನ ಮಾಸಿಕ ವರದಿಯಲ್ಲಿ ಭಾರತದ 16 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್‌ ಮಾಡಿದೆ ಎಂದು ಬರೆಯಲಾಗಿದೆ. ಇನ್ನು ಈ ಮಾಸಿಕ ಬಳಕೆದಾರಸುರಕ್ಷತಾ ವರದಿಯು ಬಳಕೆದಾರರಿಂದ ಸ್ವೀಕರಿಸಿದ ದೂರುಗಳು ಮತ್ತು ವಾಟ್ಸ್​​ಆ್ಯಪ್​​ ತೆಗೆದುಕೊಂಡ ಕ್ರಮಗಳ ವಿವರಗಳನ್ನು ವರದಿ ಮಾಡಿದೆ. ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್ಟುಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ. ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.