WhatsApp: ಈ ಆಂಡ್ರಾಯ್ಡ್-ಐಫೋ​ನ್​ಗಳಲ್ಲಿ ವಾಟ್ಸ್​ಆ್ಯಪ್ ಬಂದ್

2023ರಿಂದ ವಾಟ್ಸ್​ಆ್ಯಪ್ ಹಳೆಯ ಸ್ಯಾಮ್​ಸಂಗ್ ಮತ್ತು ಆ್ಯಪಲ್​​ ಫೋನ್​ಗಳಿಗೆ ಕೆಲಸ ಮಾಡುವುದಿಲ್ಲ ಈ ಹಿಂದೆಯೇ ಹೇಳಿತ್ತು. ಅದರಂತೆ ಇದೀಗ 49 ಕ್ಕೂ ಹೆಚ್ಚು ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ ಎಂದು ವರದಿ ಆಗಿದೆ.

WhatsApp: ಈ ಆಂಡ್ರಾಯ್ಡ್-ಐಫೋ​ನ್​ಗಳಲ್ಲಿ ವಾಟ್ಸ್​ಆ್ಯಪ್ ಬಂದ್
ವಾಟ್ಸ್​ಆ್ಯಪ್
Follow us
TV9 Web
| Updated By: Vinay Bhat

Updated on:Jan 02, 2023 | 12:29 PM

ವಿಶ್ವದಲ್ಲಿ ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಮೆಸೇಜಿಂಗ್ ಆ್ಯಪ್ ಎಂದರೆ ಅದು ವಾಟ್ಸ್​ಆ್ಯಪ್ (WhatsApp). ತಿಂಗಳಲ್ಲಿ 2 ಬಿಲಿಯನ್​ಗೂ ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿದೆ. ಇದರಲ್ಲಿ 500 ಮಿಲಿಯನ್ ಅಕೌಂಟ್ ಭಾರತೀಯರದ್ದೇ ಆಗಿದೆ. ವಾಟ್ಸ್​ಆ್ಯಪ್ ಬಳಕೆದಾರರಿಗೆ ಇಷ್ಟೊಂದು ಹತ್ತಿರವಾಗಲು ಪ್ರಮುಖ ಕಾರಣ ಇದರಲ್ಲಿರುವ ಫೀಚರ್ಸ್. ಜನರ ಅನುಕೂತಕ್ಕೆ ತಕ್ಕಂತೆ ಒಂದರ ಹಿಂದೆ ಒಂದು ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​​ ಇದೀಗ ಹೊಸ ವರ್ಷದ ಸಂಭ್ರಮದಲ್ಲಿರುವವರಿಗೆ ಶಾಕಿಂಗ್ ಸುದ್ದಿಯೊಂದು ನೀಡಿದೆ. ಇದೀಗ ಕೆಲ ಐಫೋನ್ (iPhone) ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಿದೆ.

2023ರಿಂದ ವಾಟ್ಸ್​ಆ್ಯಪ್ ಹಳೆಯ ಸ್ಯಾಮ್​ಸಂಗ್ ಮತ್ತು ಆ್ಯಪಲ್​​ ಫೋನ್​ಗಳಿಗೆ ಕೆಲಸ ಮಾಡುವುದಿಲ್ಲ ಈ ಹಿಂದೆಯೇ ಹೇಳಿತ್ತು. ಅದರಂತೆ ಇದೀಗ 49 ಕ್ಕೂ ಹೆಚ್ಚು ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ ಎಂದು ವರದಿ ಆಗಿದೆ. ವಾಟ್ಸ್​ಆ್ಯಪ್ ಮುಂದಿನ ದಿನಗಳಲ್ಲಿ​ ಬಿಡುಗಡೆ ಮಾಡುವಂತಹ ಫೀಚರ್​ಗಳು ಬಹಳ ಗುಣಮಟ್ಟದ್ದಾಗಿರುತ್ತದೆ. ಆದರೆ ಈ ಫೀಚರ್ಸ್ ಮತ್ತು ಮೊಬೈಲ್​ನ ಕಾರ್ಯಚಟುವಟಿಕೆಗಳೊಂದಿಗೆ ಸಮಸ್ಯೆ ಉಂಟಾಗುವುದರಿಂದ ಇನ್ಮುಂದೆ ವಾಟ್ಸ್​ಆ್ಯಪ್​​ ಫೀಚರ್ಸ್ ಅನ್ನು ಬೆಂಬಲ ನೀಡದ ಸ್ಮಾರ್ಟ್​​ಫೋನ್​ಗಳಿಂದ ಹಂತ ಹಂತವಾಗಿ ಅಪ್ಲಿಕೇಶನ್ ಅನ್ನು ತೆಗೆದು ಹಾಕಲಾಗುವುದು ಎಂದು ಕಂಪನಿ ಹೇಳಿದೆ. ಇದಲ್ಲದೆ ವಾಟ್ಸಾಪ್ ಐಓಎಸ್​​ 12 ಮತ್ತು ಇನ್ನೂ ಹೆಚ್ಚಿನ ಡಿವೈಸ್​ಗಳೊಂದಿಗೆ ಹೊಂದಿಕೊಳ್ಳುತ್ತದೆ. ಆದರೆ ಆ್ಯಪಲ್​ನ ಆಪರೇಟಿಂಗ್​ ಸಿಸ್ಟಮ್​ನ ಇತ್ತೀಚಿನ ವರ್ಷನ್​ಗೆ ಅಪ್ಡೇಟ್​ ಮಾಡಲು ವಾಟ್ಸ್​ಆ್ಯಪ್​​ ಬಳಕೆದಾರರಿಗೆ ಸಲಹೆ ನೀಡುತ್ತಿದೆ.

Tech Tips: ಮೊಬೈಲ್ ಅಥವಾ ಲ್ಯಾಪ್​ಟಾಪ್ ಇದ್ರೆ ಸಾಕು: ಆನ್​ಲೈನ್​ನಲ್ಲಿ ಹಣಗಳಿಸಲು ಇರುವ ಮಾರ್ಗಗಳು ಇಲ್ಲಿದೆ ನೋಡಿ

ಇದನ್ನೂ ಓದಿ
Image
Tech Tips: ಟ್ರೂ ಕಾಲರ್ ತೋರಿಸುವ ನಿಮ್ಮ ಹೆಸರನ್ನು ಬದಲಾಯಿಸುವುದು ಹೇಗೆ?: ಇಲ್ಲಿದೆ ಟ್ರಿಕ್
Image
WhatsApp: ಭಾರತದ ತಪ್ಪಾದ ನಕ್ಷೆಯ ವಿಡಿಯೋ ಡಿಲಿಟ್ ಮಾಡಿ ಕ್ಷಮೆಯಾಚಿಸಿದ ವಾಟ್ಸ್​​ಆ್ಯಪ್​
Image
Poco C50: ಹೊಸ ವರ್ಷಕ್ಕೆ ಪೋಕೋದಿಂದ ಹೊಸ ಸ್ಮಾರ್ಟ್​ಫೋನ್: ದಂಗಾದ ಬಜೆಟ್ ಪ್ರಿಯರು
Image
Smartphones 2023: ಹೊಸ ವರ್ಷ 2023ರ ಮೊದಲ ತಿಂಗಳೇ ಧೂಳೆಬ್ಬಿಸಲು ಬರುತ್ತಿದೆ ಈ 5 ಸ್ಮಾರ್ಟ್​ಫೋನ್​ಗಳು

ವಾಟ್ಸ್​ಆ್ಯಪ್​​ 2011, 2012 ಮತ್ತು 2013 ರಲ್ಲಿ ಬಿಡುಗಡೆಯಾದ ಏಳು ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸುದಿಲ್ಲ ಎನ್ನಲಾಗಿದೆ. ಇದರಲ್ಲಿ ಗ್ಯಾಲಕ್ಸಿ ಏಸ್‌ 2, ಗ್ಯಾಲಕ್ಸಿ ಕೋರ್‌, ಗ್ಯಾಲಕ್ಸಿ S2, ಗ್ಯಾಲಕ್ಸಿ S3 ಮಿನಿ, ಗ್ಯಾಲಕ್ಸಿ ಟ್ರೆಂಡ್‌ II, ಗ್ಯಾಲಕ್ಸಿ ಟ್ರೆಂಡ್‌ ಲೈಟ್‌ ಮತ್ತು ಗ್ಯಾಲಕ್ಸಿ ಎಕ್ಸ್‌ಕವರ್‌ 2 ಫೋನ್‌ಗಳು ಸೇರಿವೆ. ಈ ಎಲ್ಲಾ ಡಿವೈಸ್‌ಗಳನ್ನು ಆಂಡ್ರಾಯ್ಡ್‌ 4.x ಗೆ ಅಪ್‌ಗ್ರೇಡ್ ಮಾಡಲಾಗಿದೆ. ನಂತರದ ದಿನಗಳಲ್ಲಿ ಈ ಫೋನ್‌ಗಳು ಯಾವುದೇ ಆಪರೇಟಿಂಗ್‌ ಸಿಸ್ಟಂ ಪಡೆದಿಲ್ಲ.

ಹಳೆಯ ಡಿವೈಸ್‌ಗಳನ್ನು ಬಳಸುತ್ತರುವ ಬಳಕೆದಾರರಿಗೆ ವಾಟ್ಸ್​ಆ್ಯಪ್​​ ಈ ಹಿಂದೆಯೇ ಹಲವು ಸಂದೇಶಗಳನ್ನು ಕಳುಹಿಸಿತ್ತು. ಎಚ್ಚರಿಕೆ ಸಂದೇಶಗಳನ್ನು ನೀಡುವ ಮೂಲಕ ಕೂಡಲೇ ಸ್ಮಾರ್ಟ್‌ಫೋನ್‌ಗಳನ್ನು ಅಪ್‌ಗ್ರೇಡ್‌ ಮಾಡಿಕೊಳ್ಳುವಂತೆ ಹೇಳಿತ್ತು. ಈ ರೀತಿಯ ಡಿವೈಸ್‌ಗಳಲ್ಲಿ ದುರುದ್ದೇಶಪೂರಿತ ಚಟುವಟಿಕೆಗಳಿಂದ ರಕ್ಷಿಸಲು ಅಗತ್ಯವಾದ ಸುರಕ್ಷತೆಗಾಗಿ ವಾಟ್ಸ್​ಆ್ಯಪ್​​ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.

2023ರಲ್ಲಿ ವಾಟ್ಸ್​ಆ್ಯಪ್​​ ಬೆಂಬಲಿಸದ ಫೋನ್‌ಗಳು:

  • Apple iPhone 5
  • Apple iPhone 5c
  • Archos 53 Platinum
  • Grand S Flex ZTE
  • Grand X Quad V987 ZTE
  • HTC Desire 500
  • Huawei Ascend D
  • Huawei Ascend D1
  • Huawei Ascend D2
  • Huawei Ascend G740
  • Huawei Ascend Mate
  • Huawei Ascend P1
  • Quad XL
  • Lenovo A820
  • LG Enact
  • LG Lucid 2
  • LG Optimus 4X HD
  • LG Optimus F3
  • LG Optimus F3Q
  • LG Optimus F5
  • LG Optimus F6
  • LG Optimus F7
  • LG Optimus L2 II
  • LG Optimus L3 II
  • LG Optimus L3 II Dual
  • LG Optimus L4 II
  • LG Optimus L4 II Dual
  • LG Optimus L5
  • LG Optimus L5 Dual
  • LG Optimus L5 II
  • LG Optimus L7
  • LG Optimus L7 I
  • LG Optimus L7 II Dual
  • LG Optimus Nitro HD
  • Memo ZTE V956
  • Samsung Galaxy Ace 2
  • Samsung Galaxy Core
  • Samsung Galaxy S2
  • Samsung Galaxy S3 mini
  • Samsung Galaxy Trend II
  • Samsung Galaxy Trend Lite
  • Samsung Galaxy Xcover 2
  • Sony Xperia Arc S
  • Sony Xperia miro
  • Sony Xperia Neo L
  • Wiko Cink Five
  • Wiko Darknight ZT

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Mon, 2 January 23

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ