AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ನಿಮಗೆ ನೀವೇ ಮೆಸೇಜ್ ಮಾಡಿ: ವಾಟ್ಸ್​ಆ್ಯಪ್​ನಿಂದ ಬಂತು ಅಪ್ಡೇಟ್: ಹೇಗೆ ಉಪಯೋಗಿಸುವುದು?

Message Yourself: ಇನ್ನುಂದೆ ವಾಟ್ಸ್​ಆ್ಯಪ್​ನಲ್ಲಿ (WhatsApp) ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದೆ. ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದೆ.

WhatsApp: ನಿಮಗೆ ನೀವೇ ಮೆಸೇಜ್ ಮಾಡಿ: ವಾಟ್ಸ್​ಆ್ಯಪ್​ನಿಂದ ಬಂತು ಅಪ್ಡೇಟ್: ಹೇಗೆ ಉಪಯೋಗಿಸುವುದು?
WhatsApp New Features
TV9 Web
| Updated By: Vinay Bhat|

Updated on: Nov 29, 2022 | 12:44 PM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಇನ್ನಷ್ಟು ಅನೇಕ ಅಪ್ಡೇಟ್​ಗಳು ಬರಲಿಕ್ಕಿದ್ದು ಪರೀಕ್ಷಾ ಹಂತದಲ್ಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ದಿಢೀರ್ ಆಗಿ ತನ್ನ ಆಂಡ್ರಾಯ್ಡ್ (Android) ಮತ್ತು ಐಓಎಸ್ ಬಳಕೆದಾರರಿಗೆ ಹೊಸ ಆಯ್ಕೆಯೊಂದನ್ನು ಪರಿಚಯಿಸಿದೆ. ಇನ್ನುಂದೆ ವಾಟ್ಸ್​ಆ್ಯಪ್​ನಲ್ಲಿ (WhatsApp) ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದೆ. ಸದ್ಯಕ್ಕೆ ಆಯ್ದ ಬಳಕೆದಾರರಿಗೆಷ್ಟೆ ಈ ಫೀಚರ್ ಸಿಗುತ್ತಿದ್ದು ಮುಂದಿನ ವಾರದಿಂದ ಎಲ್ಲರಿಗೂ ಬಳಕೆಗೆ ಸಿಗಲಿದೆಯಂತೆ.

ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದೆ. ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ಓಪನ್ ಮಾಡಿದರೆ ಅಲ್ಲಿ ನಿಮಗೆ ನಿಮ್ಮ ನಂಬರ್ ಕಾಣಸಿಗುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸಬಹುದು. ಈ ಚಾಟ್ ಬಾಕ್ಸ್​ನಲ್ಲಿ ನಿಮಗೆ ಎಲ್ಲ ರೀತಿಯ ಆಯ್ಕೆ ಕಾಣಸಿಗುತ್ತದೆ. ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ಕಳುಹಿಸಬಹುದು. ಈ ಮೂಲಕ ಅಗತ್ಯ ದಾಖಲೆಗಳನ್ನು ಇಲ್ಲಿ ಸೇವ್ ಮಾಡಿಡಬಹುದು.

Flipkart Black Friday Sale: 20,000 ರೂ. ಒಳಗೆ ಸಿಗುತ್ತಿದೆ ಈ ಬೊಂಬಾಟ್ ಸ್ಮಾರ್ಟ್​ಫೋನ್​ಗಳು

ಇದನ್ನೂ ಓದಿ
Image
JIO Down: ದೇಶದಾದ್ಯಂತ ಜಿಯೋ ನೆಟ್​ವರ್ಕ್ ಡೌನ್: ಕಾಲ್ ಹೋಗ್ತಿಲ್ಲ, ಮೆಸೇಜ್ ಸೆಂಡ್ ಆಗ್ತಿಲ್ಲ
Image
YouTube Ambient Mode: ಏನಿದು ಯೂಟ್ಯೂಬ್ ಆಂಬಿಯೆಂಟ್ ಮೋಡ್?: ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
Image
Tech Tips: ಗೂಗಲ್​ನಲ್ಲಿ ನಿಮ್ಮ ಫೋಟೋ ಕಾಣಿಸಬೇಕೇ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ
Image
Fact Check ಸ್ನಾಪ್​​ಚಾಟ್​​ ಖರೀದಿಸಲು ಎಲಾನ್​​ ಮಸ್ಕ್​​​ ಚಿಂತನೆ ಎಂಬ ವೈರಲ್ ಸ್ಕ್ರೀನ್​​ಶಾಟ್ ಫೇಕ್

ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಹಾಕಿ:

ಇನ್ನು ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದಂತೆ. ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಸಿಗಲಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್​ಕ್ರಿಪ್ಟೆಡ್ ಆಗಿದೆ. ಸದ್ಯಕ್ಕೆ ಈ ಆಯ್ಕೆ ಐಒಎಸ್ ಬೇಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

ವೆಬ್ ಬಳಕೆದಾರರಿಗೆ ಸ್ಕ್ರೀನ್‌ ಲಾಕ್‌ ಫೀಚರ್:

ಡೆಸ್ಕ್​ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ಬಳಸುವವರಿಗೆ ಸದ್ಯದಲ್ಲೇ ಸ್ಕ್ರೀನ್‌ ಲಾಕ್‌ ಎಂಬ ಹೊಸ ಆಯ್ಕೆ ನೀಡುವುದಾಗಿ ಘೋಷಿಸಿದೆ. ವಾಟ್ಸ್​ಆ್ಯಪ್ ಹಿಂದಿನಿಂದಲೂ ಬಳಕೆದಾರರ ಪ್ರೈವಸಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. ಇದೀಗ ಭದ್ರತೆಯನ್ನು ಮತ್ತಷ್ಟು ಗಟ್ಟಿ ಮಾಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ವಾಟ್ಸ್‌ಆ್ಯಪ್‌ ವೆಬ್​ನಲ್ಲಿ ಬರುವ ಸ್ಕ್ರೀನ್‌ ಲಾಕ್‌ ಎಂಬ ಹೊಸ ಫೀಚರ್​ನಲ್ಲಿ ವಾಟ್ಸ್​ಆ್ಯಪ್ ಓಪನ್‌ ಮಾಡಿದ ಪ್ರತಿ ಬಾರಿ ಬಳಕೆದಾರರು ಪಾಸ್‌ವರ್ಡ್‌ ಹಾಕಬೇಕಾಗುತ್ತದೆ. ಬಳಕೆದಾರರು ತಮ್ಮ ಡೆಸ್ಕ್​​ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ಬಳಸದೇ ಇದ್ದಾಗ ಬೇರೆಯವರು ಅನಧಿಕೃತವಾಗಿ ಬಳಸದಂತೆ ಇದು ರಕ್ಷಣೆ ನೀಡಲಿದೆ ಎಂದು ಕಂಪನಿ ತಿಳಿಸಿದೆ. ಹಾಗಂತ ಇದು ಕಡ್ಡಾಯವಲ್ಲ. ಬಳಕೆದಾರರು ಈ ಸ್ಕ್ರೀನ್‌ ಲಾಕ್‌ ಫೀಚರ್‌ ಅನ್ನು ಬೇಕಾದಾಗ ಮಾತ್ರ ಉಪಯೋಗಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ