AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ನಿಮ್ಮ ಮೊಬೈಲ್ ನಂಬರ್ ಹೈಡ್ ಮಾಡಿ: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಉಪಯುಕ್ತವಾದ ಫೀಚರ್

ಫೋನ್ ನಂಬರ್ ಪ್ರೈವಸಿ ಫೀಚರ್ ಕಮ್ಯೂನಿಟಿ ಅನೌನ್ಸ್​ಮೆಂಟ್ ಗ್ರೂಪ್​ನಲ್ಲಿ ಕಾಣಸಿಗಲಿದೆ. ಹೆಸರೇ ಸೂಚಿಸುವಂತೆ, ಬಳಕೆದಾರರು ತಮ್ಮ ಮೊಬೈಲ್ ನಂಬರ್ ಅನ್ನು ಕಮ್ಯೂನಿಟಿ ಅನೌನ್ಸ್​ಮೆಂಟ್ ಗ್ರೂಪ್​ನಲ್ಲಿ ಮರೆಮಾಡುವ ಮೂಲಕ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಈ ವೈಶಿಷ್ಟ್ಯವು ಸಹಾಯ ಮಾಡುತ್ತದೆ.

WhatsApp New Feature: ನಿಮ್ಮ ಮೊಬೈಲ್ ನಂಬರ್ ಹೈಡ್ ಮಾಡಿ: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಉಪಯುಕ್ತವಾದ ಫೀಚರ್
WhatsApp
Vinay Bhat
|

Updated on: Jul 13, 2023 | 1:12 PM

Share

ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲೆಕೇಷನ್ ವಾಟ್ಸ್​ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳ ಘೋಷಣೆ ಮಾಡುತ್ತಿದೆ. ಇದರ ಜೊತೆಗೆ ಹೊಸ ಹೊಸ ಆಯ್ಕೆಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಬಹಳ ಉಪಯುಕ್ತವಾದ ಆಯ್ಕೆಯೊಂದನ್ನು ವಾಟ್ಸ್​ಆ್ಯಪ್ ನೀಡಿದೆ. WABetaInfo ಮಾಡಿರುವ ವರದಿಯ ಪ್ರಕಾರ, ಬಳಕೆದಾರರು ಇದೀಗ ಫೋನ್ ನಂಬರ್ ಪ್ರೈವಸಿ ಆಯ್ಕೆಯನ್ನು ಪಡೆದಿದ್ದಾರೆ ಎಂದು ಹೇಳಿದೆ. ವಾಟ್ಸ್​ಆ್ಯಪ್​ನ (WhatsApp) ನೂತನ ಬೇಟಾ ವರ್ಷನ್ ಅಪ್ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ.

ಫೋನ್ ನಂಬರ್ ಪ್ರೈವಸಿ ಫೀಚರ್ ಕಮ್ಯೂನಿಟಿ ಅನೌನ್ಸ್​ಮೆಂಟ್ ಗ್ರೂಪ್​ನಲ್ಲಿ ಕಾಣಸಿಗಲಿದೆ. ಹೆಸರೇ ಸೂಚಿಸುವಂತೆ, ಬಳಕೆದಾರರು ತಮ್ಮ ಮೊಬೈಲ್ ನಂಬರ್ ಅನ್ನು ಕಮ್ಯೂನಿಟಿ ಅನೌನ್ಸ್​ಮೆಂಟ್ ಗ್ರೂಪ್​ನಲ್ಲಿ ಮರೆಮಾಡುವ ಮೂಲಕ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಈ ವೈಶಿಷ್ಟ್ಯವು ಸಹಾಯ ಮಾಡುತ್ತದೆ. ಈ ವೈಶಿಷ್ಟ್ಯದೊಂದಿಗೆ, ಅವರ ಫೋನ್ ಸಂಖ್ಯೆಯು ಕಮ್ಯೂನಿಟಿ ಅಡ್ಮಿನ್ ಮತ್ತು ಅವರ ನಂಬರ್ ಅನ್ನು ಸೇವ್ ಮಾಡಿಟ್ಟುಕೊಂಡವರಿಗೆ ಮಾತ್ರ ಗೋಚರಿಸುತ್ತದೆ. ಗ್ರೂಪ್​ನಲ್ಲಿ ಇರುವ ಇತರೆ ಸದಸ್ಯರಿಂದ ತಮ್ಮ ಮೊಬೈಲ್ ಸಂಖ್ಯೆಗಳನ್ನು ಮರೆಮಾಡಲು ಇದು ಬಳಕೆದಾರರಿಗೆ ಸಹಾಯ ಮಾಡುತ್ತದೆ.

Apple iPhone 14: ಆ್ಯಪಲ್ ಐಫೋನ್ ಖರೀದಿಗೆ ಅಮೆಜಾನ್ ಪ್ರೈಮ್ ಸೇಲ್ ಭರ್ಜರಿ ಡಿಸ್ಕೌಂಟ್

ಇದನ್ನೂ ಓದಿ
Image
Mosquito Killer Apps: ಮಳೆಗಾಲದಲ್ಲಿ ಸೊಳ್ಳೆಗಳಿಂದ ತೊಂದರೆಯಾಗುತ್ತಿದೆಯೇ?: ಹಾಗಿದ್ರೆ ಈ ಆ್ಯಪ್ ಇನ್​ಸ್ಟಾಲ್ ಮಾಡಿ
Image
Nothing Phone 2: ಜುಲೈ 21 ರಿಂದ ನಥಿಂಗ್ ಫೋನ್ 2 ಮಾರಾಟ ಆರಂಭ: ಖರೀದಿಗೆ ಕ್ಯೂ ಗ್ಯಾರಂಟಿ
Image
TATA Apple iPhone: ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ತಯಾರಿಸಲು ಮುಂದಾದ ಟಾಟಾ ಕಂಪನಿ
Image
Oppo Reno 10 5G: ಮಾರುಕಟ್ಟೆಗೆ ಬಂತು ಹೊಸ ಒಪ್ಪೊ ರೆನೋ ಸರಣಿ ಫೋನ್

ಆದಾಗ್ಯೂ, ಕಮ್ಯೂನಿಟಿ ಅಡ್ಮಿನ್​ಗಳಿಗೆ ಫೋನ್ ಸಂಖ್ಯೆ ಯಾವಾಗಲೂ ಗೋಚರಿಸುತ್ತದೆ. ಜೊತೆಗೆ ಈ ಆಯ್ಕೆ ಗ್ರೂಪ್​ನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ. ಕಮ್ಯೂನಿಟಿಗಳಿಗಾಗಿ ಹೊಸ ಫೋನ್ ಸಂಖ್ಯೆ ಗೌಪ್ಯತೆ ವೈಶಿಷ್ಟ್ಯವು ಸದ್ಯ ಕೆಲವು ಬೀಟಾ ಬಳಕೆದಾರರಿಗೆ ಲಭ್ಯವಿದೆ. ಇದು ಸದ್ಯದಲ್ಲೇ ಎಲ್ಲ ಆಂಡ್ರಾಯ್ಡ್ ಮತ್ತು ಐಇಎಸ್ ಬಳಕೆದಾರರಿಗೆ ಅಪ್ಡೇಟ್ ಮಾಡುವ ಮೂಲಕ ಸಿಗಲಿದೆ ಎಂದು ವರದಿ ಆಗಿದೆ.

ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ:

ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದೆ. ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಮಾಹಿತಿಯ ಪ್ರಕಾರ, ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ. ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್​ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ