ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲೆಕೇಷನ್ ವಾಟ್ಸ್ಆ್ಯಪ್ ದಿನಕ್ಕೊಂದು ನೂತನ ಫೀಚರ್ಗಳ ಘೋಷಣೆ ಮಾಡುತ್ತಿದೆ. ಇದರ ಜೊತೆಗೆ ಹೊಸ ಹೊಸ ಆಯ್ಕೆಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಬಹಳ ಉಪಯುಕ್ತವಾದ ಆಯ್ಕೆಯೊಂದನ್ನು ವಾಟ್ಸ್ಆ್ಯಪ್ ನೀಡಿದೆ. WABetaInfo ಮಾಡಿರುವ ವರದಿಯ ಪ್ರಕಾರ, ಬಳಕೆದಾರರು ಇದೀಗ ಫೋನ್ ನಂಬರ್ ಪ್ರೈವಸಿ ಆಯ್ಕೆಯನ್ನು ಪಡೆದಿದ್ದಾರೆ ಎಂದು ಹೇಳಿದೆ. ವಾಟ್ಸ್ಆ್ಯಪ್ನ (WhatsApp) ನೂತನ ಬೇಟಾ ವರ್ಷನ್ ಅಪ್ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ.
ಫೋನ್ ನಂಬರ್ ಪ್ರೈವಸಿ ಫೀಚರ್ ಕಮ್ಯೂನಿಟಿ ಅನೌನ್ಸ್ಮೆಂಟ್ ಗ್ರೂಪ್ನಲ್ಲಿ ಕಾಣಸಿಗಲಿದೆ. ಹೆಸರೇ ಸೂಚಿಸುವಂತೆ, ಬಳಕೆದಾರರು ತಮ್ಮ ಮೊಬೈಲ್ ನಂಬರ್ ಅನ್ನು ಕಮ್ಯೂನಿಟಿ ಅನೌನ್ಸ್ಮೆಂಟ್ ಗ್ರೂಪ್ನಲ್ಲಿ ಮರೆಮಾಡುವ ಮೂಲಕ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಈ ವೈಶಿಷ್ಟ್ಯವು ಸಹಾಯ ಮಾಡುತ್ತದೆ. ಈ ವೈಶಿಷ್ಟ್ಯದೊಂದಿಗೆ, ಅವರ ಫೋನ್ ಸಂಖ್ಯೆಯು ಕಮ್ಯೂನಿಟಿ ಅಡ್ಮಿನ್ ಮತ್ತು ಅವರ ನಂಬರ್ ಅನ್ನು ಸೇವ್ ಮಾಡಿಟ್ಟುಕೊಂಡವರಿಗೆ ಮಾತ್ರ ಗೋಚರಿಸುತ್ತದೆ. ಗ್ರೂಪ್ನಲ್ಲಿ ಇರುವ ಇತರೆ ಸದಸ್ಯರಿಂದ ತಮ್ಮ ಮೊಬೈಲ್ ಸಂಖ್ಯೆಗಳನ್ನು ಮರೆಮಾಡಲು ಇದು ಬಳಕೆದಾರರಿಗೆ ಸಹಾಯ ಮಾಡುತ್ತದೆ.
Apple iPhone 14: ಆ್ಯಪಲ್ ಐಫೋನ್ ಖರೀದಿಗೆ ಅಮೆಜಾನ್ ಪ್ರೈಮ್ ಸೇಲ್ ಭರ್ಜರಿ ಡಿಸ್ಕೌಂಟ್
ಆದಾಗ್ಯೂ, ಕಮ್ಯೂನಿಟಿ ಅಡ್ಮಿನ್ಗಳಿಗೆ ಫೋನ್ ಸಂಖ್ಯೆ ಯಾವಾಗಲೂ ಗೋಚರಿಸುತ್ತದೆ. ಜೊತೆಗೆ ಈ ಆಯ್ಕೆ ಗ್ರೂಪ್ನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ. ಕಮ್ಯೂನಿಟಿಗಳಿಗಾಗಿ ಹೊಸ ಫೋನ್ ಸಂಖ್ಯೆ ಗೌಪ್ಯತೆ ವೈಶಿಷ್ಟ್ಯವು ಸದ್ಯ ಕೆಲವು ಬೀಟಾ ಬಳಕೆದಾರರಿಗೆ ಲಭ್ಯವಿದೆ. ಇದು ಸದ್ಯದಲ್ಲೇ ಎಲ್ಲ ಆಂಡ್ರಾಯ್ಡ್ ಮತ್ತು ಐಇಎಸ್ ಬಳಕೆದಾರರಿಗೆ ಅಪ್ಡೇಟ್ ಮಾಡುವ ಮೂಲಕ ಸಿಗಲಿದೆ ಎಂದು ವರದಿ ಆಗಿದೆ.
ಸದ್ಯದಲ್ಲೇ ವಾಟ್ಸ್ಆ್ಯಪ್ನಲ್ಲಿ ಫಿಲ್ಟರ್ ಆಯ್ಕೆ ಬರಲಿದೆ. ಇದು ಚಾಟ್ ಲಿಸ್ಟ್ನಲ್ಲಿ ಮಹತ್ವದ ಬದಲಾವಣೆ ತರಲಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಮಾಹಿತಿಯ ಪ್ರಕಾರ, ಫಿಲ್ಟರ್ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್ಆ್ಯಪ್ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ. ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ