AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಏನೇ ಅಪ್ಡೇಟ್​ ಬಂದರೆ ನಿಮಗೆ ತಿಳಿಯುತ್ತೆ: ಬರುತ್ತಿದೆ ಹೊಸ ಫೀಚರ್

WhatsApp New Feature: ವಾಟ್ಸ್​ಆ್ಯಪ್​ ತಿಂಗಳಿಗೆ ಒಂದೊಂದು ಹೊಸ ಆಯ್ಕೆಯನ್ನು ಬಿಡುಗಡೆ ಮಾಡುತ್ತಿದ್ದರೆ ಅತ್ತ ಬಳಕೆದಾರರಿಗೆ ಅಪ್ಡೇಟ್ ​ ಬಂದಿದೆ ಎಂಬ ಸುದ್ದಿಯೆ ತಿಳಿದಿರುವುದಿಲ್ಲ. ಇದನ್ನೆ ಗಮನದಲ್ಲಿಟ್ಟುಕೊಂಡು ಹೊಸ ಫೀಚರ್ ಒಂದು ನೀಡಲು ಮುಂದಾಗಿದೆ.

WhatsApp: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಏನೇ ಅಪ್ಡೇಟ್​ ಬಂದರೆ ನಿಮಗೆ ತಿಳಿಯುತ್ತೆ: ಬರುತ್ತಿದೆ ಹೊಸ ಫೀಚರ್
WhatsApp
TV9 Web
| Updated By: Vinay Bhat|

Updated on:Jul 31, 2022 | 2:53 PM

Share

ಪ್ರಪಂಚದಲ್ಲಿ ಕೋಟ್ಯಾಂತರ ಮಂದಿ ಬಳಕೆದಾರರನ್ನು ಹೊಂದಿರುವ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್​ (WhatsApp) ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಲೇ ಇದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ವಿನೂತನ ಆಯ್ಕೆಯನ್ನು ಪರಿಚಯಿಸುವ ವಾಟ್ಸ್​​ಆ್ಯಪ್​ನಲ್ಲಿ ಇನ್ನೂ ಅನೇಕ ಆಯ್ಕೆಗಳು ಪರೀಕ್ಷಾ ಹಂತದಲ್ಲಿದೆ. ಇತ್ತ ವಾಟ್ಸ್​ಆ್ಯಪ್​ ತಿಂಗಳಿಗೆ ಒಂದೊಂದು ಹೊಸ ಆಯ್ಕೆಯನ್ನು ಬಿಡುಗಡೆ ಮಾಡುತ್ತಿದ್ದರೆ ಅತ್ತ ಬಳಕೆದಾರರಿಗೆ ಅಪ್ಡೇಟ್ (Update)​ ಬಂದಿದೆ ಎಂಬ ಸುದ್ದಿಯೆ ತಿಳಿದಿರುವುದಿಲ್ಲ. ಇದೀಗ ಇದನ್ನೆ ಗಮನದಲ್ಲಿಟ್ಟುಕೊಂಡು ವಾಟ್ಸ್​ಆ್ಯಪ್​ ಹೊಸ ಫೀಚರ್ (New Feature) ಒಂದು ನೀಡಲು ಮುಂದಾಗಿದೆ.

ಬಳಕೆದಾರರಿಗೆ ವಾಟ್ಸ್​ಆ್ಯಪ್​ನಲ್ಲಿ ನೂತನ ಅಪ್ಡೇಟ್ ಬಂದಿದೆ ಎಂದು ತಿಳಿಸಲು ಹೊಸ ಚಾಟ್‌ಬಾಟ್ ಎಂಬ ಆಯ್ಕೆಯನ್ನು ನೀಡುತ್ತಿದೆ. ಈ ಚಾಟ್‌ಬಾಟ್‌ ಮೂಲಕ ಯಾವುದೇ ಹೊಸ ಫೀಚರ್ಸ್‌ ಸೇರ್ಪಡೆ ಯಾದರೂ ಮೊದಲಿಗೆ ಮಾಹಿತಿ ನೀಡಲಿದೆ. ಬಿಡುಗಡೆ ಆಗಿರುವ ಹೊಸ ಫೀಚರ್ಸ್‌ ಹಾಗೂ ಅದರ ವಿಶೇಷತೆ ಏನು? ಅದರ ಕಾರ್ಯವೈಖರಿ ಹೇಗಿರಲಿದೆ? ಎಂಬೆಲ್ಲಾ ಮಾಹಿತಿಯನ್ನು ಈ ಚಾಟ್​ಬಾಟ್ ನೀಡುತ್ತದೆ.

WABetaInfo ಪ್ರಕಾರ ವಾಟ್ಸ್​ಆ್ಯಪ್​ನ ಚಾಟ್‌ಬಾಟ್ ಆಯ್ಕೆ ಅಭಿವೃದ್ಧಿಯ ಆರಂಭಿಕ ಹಂತದಲ್ಲಿದೆ ಎನ್ನಲಾಗಿದೆ. ಈ ಚಾಟ್‌ಬಾಟ್‌ನ ಸಹಾಯದಿಂದ ಸಂಭಾಷಣೆಯ ಪಟ್ಟಿಯಲ್ಲಿ ಜನರು ಹೊಸ ಫೀಚರ್ಸ್‌ ಬಗ್ಗೆ ಮೊದಲು ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ. ಅಲ್ಲದೆ ಸಲಹೆಗಳು ಮತ್ತು ತಂತ್ರಗಳನ್ನು ಪಡೆದುಕೊಳ್ಳುತ್ತಾರೆ ಮತ್ತು ಗೌಪ್ಯತೆ ಮತ್ತು ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಇದರಲ್ಲಿ ರಿಪ್ಲೆ ಮಾಡುವುದಕ್ಕೆ ಅವಕಾಶವಿಲ್ಲದೆ ರುವುದರಿಂದ ಇದರಿಂದ ನಿಮಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಎಲ್ಲಾದರು ಈ ಆಯ್ಕೆ ನಿಮಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದಾದರೆ ಚಾಟ್‌ಬಾಟ್‌ ಅಕೌಂಟ್‌ ಅನ್ನು ಬ್ಲಾಕ್‌ ಮಾಡಲು ಕೂಡ ಅವಕಾಶ ಇದೆಯಂತೆ.

ಇದನ್ನೂ ಓದಿ
Image
Galaxy F23 5G: ಬೆಲೆ ಇಳಿಕೆ: ಸ್ಯಾಮ್​ಸಂಗ್ ಗ್ಯಾಲಕ್ಸಿ F23 5G ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ
Image
Moto G32: ಮೋಟೋ ಕಂಪನಿಯ ಈ ಹೊಸ ಬಜೆಟ್ ಫೋನ್​ನಲ್ಲಿದೆ ಅಚ್ಚರಿಗೊಳ್ಳುವ ಫೀಚರ್ಸ್​
Image
Best Smart Tv: ಬಜೆಟ್ ಬೆಲೆಗೆ ಹೊಸ ಟಿವಿ ಖರೀದಿಸಬೇಕೇ?: ಇಲ್ಲಿದೆ ನೋಡಿ 5 ಬೆಸ್ಟ್​​ ಸ್ಮಾರ್ಟ್​​ ಟಿವಿ
Image
Redmi K50S Pro: 108MP ಕ್ಯಾಮೆರಾ ಮರೆತು ಬಿಡಿ: ಶವೋಮಿ ತರುತ್ತಿದೆ 200MP ಕ್ಯಾಮೆರಾ ಸ್ಮಾರ್ಟ್​​ಫೋನ್

ಇನ್ನು ವಾಟ್ಸ್​ಆ್ಯಪ್ ಸದ್ಯದಲ್ಲೇ ನಿರ್ದಿಷ್ಟ ಜನರಿಂದ ಆನ್‌ಲೈನ್‌ ಸ್ಟೇಟಸ್‌ ಹೈಡ್‌ ಮಾಡುವ ಹೊಸ ಆಯ್ಕೆಯನ್ನು ಸೇರ್ಪಡೆ ಮಾಡಲು ಮುಂದಾಗಿದೆ. ಅಂದರೆ ನಿಮಗೆ ಬೇಡ ಎನಿಸುವ ಜನರನ್ನು ಆನ್‌ಲೈನ್‌ ಸ್ಟೇಟಸ್‌ ನೋಡದಂತೆ ಹೈಡ್‌ ಮಾಡುವ ಆಯ್ಕೆ ಇದಾಗಿದೆ. ಸಾಮಾನ್ಯವಾಗಿ ನಿಮ್ಮ ಕಂಟ್ಯಾಕ್ಟ್‌ ಲಿಸ್ಟ್‌ನಲ್ಲಿರುವವರಿಗೆ ನೀವು ಆನ್‌ಲೈನ್‌ನಲ್ಲಿದ್ದರೆ ತಿಳಿಯುತ್ತದೆ. ಆದರೆ ಈ ಹೊಸ ಆಯ್ಕೆಯು ಸೇರ್ಪಡೆಯಾದ ನಂತರ ನೀವು ಬಯಸದ ವ್ಯಕ್ತಿಗಳು ಆನ್‌ಲೈನ್‌ ಸ್ಟೇಟಸ್‌ ನೋಡದಂತೆ ಮಾಡುವುದಕ್ಕೆ ನಿಮಗೆ ಅವಕಾಶ ಸಿಗಲಿದೆ. ಪ್ರಸ್ತುತ ಇದುಕೂಡ ಅಭಿವೃದ್ಧಿ ಹಂತದಲ್ಲಿದ್ದು 2.22.16.12. ಅಪ್ಡೇಟ್​ನಲ್ಲಿ ಬಳಕೆದಾರರಿಗೆ ಸಿಗಲಿದೆ ಎಂದು ಹೇಳಲಾಗಿದೆ.

Published On - 2:53 pm, Sun, 31 July 22

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ