Whatsapp: ವಾಟ್ಸ್ಆ್ಯಪ್ನಲ್ಲಿ ಶಾಕಿಂಗ್ ಫೀಚರ್: ಮೆಸೇಜ್ ಡಿಲೀಟ್ ಮಾಡುವಾಗ ಸಿಗುತ್ತೆ ಹೊಸ ಆಯ್ಕೆ
Whatsapp delete message time limit: ವಾಟ್ಸ್ಆ್ಯಪ್ನಲ್ಲಿ ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್ ಫಾರ್ ಎವರಿಒನ್ ಫೀಚರ್ನಲ್ಲಿ ಹೊಸ ಆಯ್ಕೆ ಸದ್ಯದಲ್ಲೇ ಸಿಗಲಿದೆ. ಅದೇನೆಂದರೆ ವಾಟ್ಸ್ಆ್ಯಪ್ ಡಿಲಿಟ್ ಫಾರ್ ಎವರಿಒನ್ ಫೀಚರ್ನ ಲಿಮಿಟ್ ಅನ್ನು ಹೆಚ್ಚಿಸಲಾಗಿದೆ.
ಮೆಟಾ (Meta) ಮಾಲೀಕತ್ವದ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್ಗಳನ್ನು ಪರಿಚಯಿಸುತ್ತಲೇ ಬಂದಿದೆ. ದಿನದಿಂದ ದಿನಕ್ಕೆ ವಾಟ್ಸ್ಆ್ಯಪ್ (WhatsApp) ತನ್ನ ಫೀಚರ್ ಅಪ್ಡೇಟ್ ಮಾಡುತ್ತಲೇ ಇದ್ದು ಮತ್ತಷ್ಟು ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಇದೀಗ ವಾಟ್ಸ್ಆ್ಯಪ್ ಮತ್ತೊಂದು ಅತ್ಯಗತ್ಯ ಫೀಚರ್ಸ್‌ನಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್ ಫಾರ್ ಎವರಿಒನ್ ಫೀಚರ್ನಲ್ಲಿ ಹೊಸ ಆಯ್ಕೆ ಸದ್ಯದಲ್ಲೇ ಸಿಗಲಿದೆ. ಅದೇನೆಂದರೆ ವಾಟ್ಸ್ಆ್ಯಪ್ ಡಿಲಿಟ್ ಫಾರ್ ಎವರಿಒನ್ ಫೀಚರ್ನ ಲಿಮಿಟ್ ಅನ್ನು ಹೆಚ್ಚಿಸಲಾಗಿದೆ. ಅಂದರೆ ಮಾಡಿದ ಮೆಸೇಜ್ (Message) ಅನ್ನು ಯಾರಿಗೂ ಕಾಣದಂತೆ ಡಿಲೀಟ್ ಮಾಡಲು ಹೆಚ್ಚಿನ ಕಾಲವಕಾಶ ನೀಡಲಾಗಿದೆ.
ಪ್ರಸ್ತುತ ವಾಟ್ಸ್ಆ್ಯಪ್ ಬಳಕೆದಾರರು ಡಿಲೀಟ್ ಫಾರ್ ಎವರಿಒನ್ ಫೀಚರ್ನಲ್ಲಿ ತಾವು ಸೆಂಡ್ ಮಾಡಿದ ಸಂದೇಶವನ್ನು ಹಂಚಿಕೊಂಡ ಸಮಯದಿಂದ ಒಂದು ಗಂಟೆ ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳ ಅವಧಿಯಲ್ಲಿ ಡಿಲೀಟ್ ಮಾಡಬಹುದು. ಇದೀಗ ಇದರ ಟೈಂ ಲಿಮಿಟ್ ಅನ್ನು ಹೆಚ್ಚಿಸಲಾಗಿದೆ. ಮೆಟಾ ಕಂಪನಿ ಇದೀಗ ಈ ಸಮಯವನ್ನು ಬರೋಬ್ಬರಿ ಎರಡು ದಿನಗಳಿಗೆ ವಿಸ್ತರಿಸಲು ಮುಂದಾಗಿದೆ. ಇದರಿಂದ ನೀವು ಸಂದೇಶವನ್ನು ಕಳುಹಿಸಿದ ಎರಡು ದಿನಗಳ ನಂತರ ಡಿಲೀಟ್ ಫಾರ್ ಎವರಿಒನ್ ಬಳಸಿ ಡಿಲೀಟ್ ಮಾಡಬಹುದಾಗಿದೆ.
ಸ್ಯಾಮ್ಸಂಗ್ನ ಬೆಸ್ಟ್ ಸ್ಮಾರ್ಟ್ಫೋನ್ ಗ್ಯಾಲಕ್ಸಿ A53 ಬೆಲೆಯಲ್ಲಿ ಭರ್ಜರಿ ಇಳಿಕೆ
ಸದ್ಯಕ್ಕೆ ಈ ಹೊಸ ಫೀಚರ್ ವಾಟ್ಸ್ಆ್ಯಪ್ ಬೀಟಾದ ಇತ್ತೀಚಿನ ಆವೃತ್ತಿಯನ್ನು ಬಳಸುತ್ತಿರುವ ಆಯ್ದ ಬಳಕೆದಾರರಿಗೆ ಲಭ್ಯವಿದೆ ಎನ್ನಲಾಗಿದೆ. ಅದರಂತೆ ಈ ಫೀಚರ್ಸ್ ಒಂದು ಗಂಟೆ, ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳಿಂದ ಎರಡು ದಿನಗಳು ಮತ್ತು 12 ಗಂಟೆಗಳವರೆಗೆ ಹೆಚ್ಚಿಸಲು ಪ್ಲಾನ್ ಮಾಡಿದೆ. ಆದಷ್ಟು ಬೇಗ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಈ ಆಯ್ಕೆ ಸಿಗಲಿದೆಯಂತೆ.
ಬರುತ್ತಿದೆ ಎಡಿಟ್ ಆಯ್ಕೆ:
ಇದರ ಜೊತೆಗೆ ಎಡಿಟ್ ಮಾಡುವ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಲು ವಾಟ್ಸ್ಆ್ಯಪ್ ಮುಂದಾಗಿದ್ದು, ನೂತನ ಆಯ್ಕೆಯನ್ನು ಪರಿಶೀಲಿಸುತ್ತಿದೆ. ಇದರ ಪ್ರಕಾರ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಬೀಟಾ ಆವೃತ್ತಿಯಲ್ಲಿ ಎಡಿಟ್ ಬಟನನ್ನು ಪರೀಕ್ಷಿಸುತ್ತಿದೆ. ಪ್ರಸ್ತುತ, ವಾಟ್ಸ್ಆ್ಯಪ್ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್ ಮಾಡಲು ಸಾಧ್ಯವಿಲ್ಲ. ಸದ್ಯ ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್ ಮಾಡಲು ಸಾಧ್ಯವಾಗಿಸುತ್ತದೆ. ಎಲ್ಲಾ ವಾಟ್ಸ್ಆ್ಯಪ್ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ.
ಡಿಪಿ, ಲಾಸ್ಟ್ ಸೀನ್ ಕೆಲವರಿಗೆ ಮಾತ್ರ ಕಾಣುವಂತೆ ಮಾಡಿ:
ವಾಟ್ಸ್ಆ್ಯಪ್ನಲ್ಲಿ ಈಗ ನೀವು ನಿಮ್ಮ ಪ್ರೊಫೈಲ್ ಫೋಟೋವನ್ನು, ಲಾಸ್ಟ್ ಸೀನ್ ಮತ್ತು ಎಬೌಟ್ ಆಯ್ಕೆಯನ್ನು ಯಾರಿಗೆ ಬೇಕು ಅವರಿಗೆ ಮಾತ್ರ ಕಾಣುವಂತೆ ಮಾಡಬಹುದು. ಈ ಅಪ್ಡೇಟ್ನಲ್ಲಿ ‘ಮೈ ಕಾಂಟ್ಯಾಕ್ಸ್ಟ್ ಎಕ್ಸೆಪ್ಟ್’ ಎಂಬ ಹೊಸ ಆಯ್ಕೆ ನೀಡಲಾಗಿದೆ. ಈ ಮೂಲಕ ನಿಮಗೆ ಅಗತ್ಯವಿರುವವರಿಗೆ ಮಾತ್ರ ನಿಮ್ಮ ಡಿಪಿ, ಲಾಸ್ಟ್ ಸೀನ್ ಮತ್ತು ಎಬೌಟ್ ಆಯ್ಕೆಯನ್ನು ನೋಡುವಂತೆ ಮಾಡಬಹುದು. ಸೆಟ್ಟಿಂಗ್ಗ ಹೋಗಿ ಎಕೌಂಟ್-ಪ್ರೈವಸಿ ಮೂಲಕ ಈ ಆಯ್ಕೆಯನ್ನು ನೀವು ಗಮನಿಸಬಹುದು. ಈ ಹೊಸ ಆಯ್ಕೆಯನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರು ಉಪಯೋಗಿಸಬಹುದು.
iQOO Neo 6: ಒನ್ಪ್ಲಸ್ ಬಿಡುಗಡೆ ಮಾಡಿದ ಫೋನ್ಗೆ ಬೆಚ್ಚಿಬಿದ್ದ ಐಕ್ಯೂ: ಈ ಫೋನ್ ಬೆಲೆ ದಿಢೀರ್ ಇಳಿಕೆ
Published On - 12:40 pm, Sun, 3 July 22