AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಫೇಸ್​ಬುಕ್​ನಲ್ಲಿರುವ ಅಚ್ಚರಿಯ ಫೀಚರ್ ಈಗ ವಾಟ್ಸ್ಆ್ಯಪ್​ನಲ್ಲಿ: ದಂಗಾದ ಬಳಕೆದಾರರು

WhatsApp Cover Photo: ಕಾಲಕಾಲಕ್ಕೆ ತಕ್ಕಂತೆ ತನ್ನ ಫೀಚರ್​​ಗಳನ್ನು ಅಪ್ಡೇಟ್‌ ಮಾಡುತ್ತಾ ಬಂದಿರುವ ವಾಟ್ಸ್​ಆ್ಯಪ್ ಇದೀಗ ಫೇಸ್​ಬುಕ್​ನಲ್ಲಿರುವ ಅಚ್ಚರಿಯ ಆಯ್ಕೆಯೊಂದನ್ನು ನೀಡಲು ಮುಂದಾದೆ. ಇದನ್ನ ಕಂಡು ಬಳಕೆದಾರರು ದಂಗಾಗಿದ್ದಾರೆ. ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಹೊಸ ಅಪ್ಡೇಟ್ ಕವರ್ ಫೋಟೋ

WhatsApp: ಫೇಸ್​ಬುಕ್​ನಲ್ಲಿರುವ ಅಚ್ಚರಿಯ ಫೀಚರ್ ಈಗ ವಾಟ್ಸ್ಆ್ಯಪ್​ನಲ್ಲಿ: ದಂಗಾದ ಬಳಕೆದಾರರು
whatsapp cover photo
TV9 Web
| Updated By: Vinay Bhat|

Updated on: Feb 14, 2022 | 12:42 PM

Share

ತನ್ನ ಬಳಕೆದಾರರಿಗೆ ಸದಾ ಒಂದಲ್ಲ ಒಂದು ಹೊಸ ಹೊಸ ಆಯ್ಕೆಗಳನ್ನು ಪರಿಚಯಿಸುತ್ತಿರುವ ಪ್ರಸಿದ್ಧ ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್ (WhatsApp) ಮೆಸೇಜಿಂಗ್ ಅಪ್ಲಿಕೇಶನ್​ ಮುಂದಿನ ದಿನಗಳಲ್ಲಿ ಸಾಲು ಸಾಲು ಅಪ್ಡೇಟ್​ಗಳನ್ನು ನೀಡಲು ಸಜ್ಜಾಗಿ ನಿಂತಿದೆ. ಈಗಾಗಲೇ ವಾಟ್ಸ್​ಆ್ಯಪ್​ನಲ್ಲೇ ಫೋಟೋ ಎಡಿಟಿಂಗ್, ಲಾಗೌಟ್ ಫೀಚರ್, ಸ್ಟೇಟಸ್​ನಂತೆ ಪ್ರೊಫೈಲ್ ಪೋಟೋ ಕೂಡ ಕೆಲವರಿಗೆ ಮಾತ್ರ ಕಾಣಿಸುವಂತಹ ಆಯ್ಕೆ, ವಾಯ್ಸ್ ಮೆಸೇಜ್ ಕಳುಹಿಸುವ ಮುನ್ನ ಕೇಳುವ ಆಯ್ಕೆ  ಹೀಗೆ ಅನೇಕ ಹೊಸ ಹೊಸ ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಹೀಗೆ ಕಾಲಕಾಲಕ್ಕೆ ತಕ್ಕಂತೆ ತನ್ನ ಫೀಚರ್​​ಗಳನ್ನು ಅಪ್ಡೇಟ್‌ ಮಾಡುತ್ತಾ ಬಂದಿರುವ ವಾಟ್ಸ್​ಆ್ಯಪ್ ಇದೀಗ ಫೇಸ್​ಬುಕ್​ನಲ್ಲಿರುವ ಅಚ್ಚರಿಯ ಆಯ್ಕೆಯೊಂದನ್ನು ನೀಡಲು ಮುಂದಾದೆ. ಇದನ್ನ ಕಂಡು ಬಳಕೆದಾರರು ದಂಗಾಗಿದ್ದಾರೆ. ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಹೊಸ ಅಪ್ಡೇಟ್ ಕವರ್ ಫೋಟೋ (WhatsApp Cover Photo).

ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ. ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ. ಅದಕ್ಕೆ ಕ್ಲಿಕ್ ಮಾಡಿ ಹೊಸ ಫೋಟೋ ಅಥವಾ ಕ್ಯಾಮೆರಾ ಮೂಲಕ ಫೋಟೋ ತೆಗೆಯಲು ಅನುಮತಿ ಕೇಳುತ್ತದೆ. ನಿಮಗಿಷ್ಟದ ಫೋಟೋ ಆಯ್ಕೆ ಮಾಡಿ ಕವರ್ ಫೋಟೋ ಸೆಟ್ ಮಾಡಬಹುದಂತೆ.

ಬ್ಯಾಕ್‌ಗ್ರೌಂಡ್‌ ವಾಲ್‌ ಪೇಪರ್‌ ಫೀಚರ್:

ವಾಟ್ಸ್​ಆ್ಯಪ್ ಪರಿಚಯಿಸಲು ಮುಂದಾಗಿರುವ ಮತ್ತೊಂದು ಹೊಸ ಫೀಚರ್ ಮೂಲಕ ಪ್ರತಿ ಚಾಟ್ ಮತ್ತು ಗುಂಪಿಗೆ ನಿಮಗಿಷ್ಟವಾದ ಬ್ಯಾಕ್‌ಗ್ರೌಂಡ್‌ ಸೆಟ್‌ ಮಾಡಬಹುದು. ಸದ್ಯದಲ್ಲೇ ಈ ಆಯ್ಕೆ ಬಳಕೆದಾರರಿಗೆ ಸಿಗಲಿದೆಯಂತೆ. ಇದಲ್ಲದೆ ವಾಟ್ಸ್​ಆ್ಯಪ್​ iOS 15 ನಲ್ಲಿ ಹೊಸ ಫೀಚರ್ಸ್‌ಗಳನ್ನು ಸೇರಿಸಿದೆ. ಇದು ಫೋಕಸ್ ಮೋಡ್‌ಗೆ ಬೆಂಬಲವನ್ನು ನೀಡಲಿದೆ. ನೊಟಿಫಿಕೇಶನ್‌ ಜೊತೆಗೆ ಗ್ರೂಪ್‌ ಮತ್ತು ಪ್ರೊಫೈಲ್ ಚಿತ್ರಗಳನ್ನು ಡಿಸ್‌ಪ್ಲೇ ಮಾಡಲಿದೆ. ವಾಯ್ಸ್‌ ನೋಟ್‌ಗಳನ್ನು ರೆಕಾರ್ಡ್ ಮಾಡುವಾಗ ಅಪ್ಲಿಕೇಶನ್ ವಿರಾಮ ಮತ್ತು ಪುನರಾರಂಭದ ಬೆಂಬಲವನ್ನು ಸಹ ಸೇರಿಸಿದೆ. ವಾಯ್ಸ್‌ ನೋಟ್‌ ತೆಗೆದುಕೊಳ್ಳುವಾಗ ಯಾರಾದರೂ ಅಡ್ಡಿಪಡಿಸಿದಾಗ ವಿರಾಮ ತೆಗೆದುಕೊಳ್ಳಬೇಕಾದಾಗ ಈ ಫೀಚರ್ಸ್‌ ಉಪಯುಕ್ತವಾಗಿರುತ್ತದೆ.

ಕಾಲ್‌ ಇಂಟರ್ಫೇಸ್ ಫೀಚರ್:

ವಾಟ್ಸ್​ಆ್ಯಪ್​​ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಇನ್‌ ಕಾಲ್‌ ಯುಐ ಪರಿಚಯಿಸಲು ಪ್ಲಾನ್‌ ನಡೆಸಿದೆ. ಇದರಿಂದ ವಾಟ್ಸ್​ಆ್ಯಪ್​​ ಕಾಲ್‌ ಸಮಯದಲ್ಲಿ ಸ್ಕ್ರೀನ್‌ ನಡುವೆ ಗ್ರೇ ಸ್ಕ್ವೇರ್‌ ಅಳವಡಿಸುವುದಾಗಿ ಕಂಪನಿ ಹೇಳಿದೆ. ಇದರಿಂದ ನೀವು ಸ್ಪೀಕರ್ ಮೋಡ್‌ಗೆ ಬದಲಾಯಿಸಲು, ವಿಡಿಯೋ ಕರೆಗೆ ಬದಲಾಯಿಸುವ ಬಟನ್‌ಗಳು ಕೆಳಹಂತದಲ್ಲಿ ಲಭ್ಯವಾಗಲಿದೆ.

ಜ.2021ರಿಂದ ಜ.2022 ರವರೆಗೆ ಗೂಗಲ್ ನಲ್ಲಿ ಹುಡುಕಲಾದ ಉದ್ಯೋಗಗಳ ಮಾಹಿತಿ ಇಲ್ಲಿದೆ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ