ತನ್ನ ಬಳಕೆದಾರರಿಗೆ ಸದಾ ಒಂದಲ್ಲ ಒಂದು ಹೊಸ ಹೊಸ ಆಯ್ಕೆಗಳನ್ನು ಪರಿಚಯಿಸುತ್ತಿರುವ ಪ್ರಸಿದ್ಧ ಮೆಟಾ (Meta) ಒಡೆತನದ ವಾಟ್ಸ್ಆ್ಯಪ್ (WhatsApp) ಮೆಸೇಜಿಂಗ್ ಅಪ್ಲಿಕೇಶನ್ ಮುಂದಿನ ದಿನಗಳಲ್ಲಿ ಸಾಲು ಸಾಲು ಅಪ್ಡೇಟ್ಗಳನ್ನು ನೀಡಲು ಸಜ್ಜಾಗಿ ನಿಂತಿದೆ. ಈಗಾಗಲೇ ವಾಟ್ಸ್ಆ್ಯಪ್ನಲ್ಲೇ ಫೋಟೋ ಎಡಿಟಿಂಗ್, ಲಾಗೌಟ್ ಫೀಚರ್, ಸ್ಟೇಟಸ್ನಂತೆ ಪ್ರೊಫೈಲ್ ಪೋಟೋ ಕೂಡ ಕೆಲವರಿಗೆ ಮಾತ್ರ ಕಾಣಿಸುವಂತಹ ಆಯ್ಕೆ, ವಾಯ್ಸ್ ಮೆಸೇಜ್ ಕಳುಹಿಸುವ ಮುನ್ನ ಕೇಳುವ ಆಯ್ಕೆ ಹೀಗೆ ಅನೇಕ ಹೊಸ ಹೊಸ ಫೀಚರ್ಗಳು ಪರೀಕ್ಷಾ ಹಂತದಲ್ಲಿದೆ. ಹೀಗೆ ಕಾಲಕಾಲಕ್ಕೆ ತಕ್ಕಂತೆ ತನ್ನ ಫೀಚರ್ಗಳನ್ನು ಅಪ್ಡೇಟ್ ಮಾಡುತ್ತಾ ಬಂದಿರುವ ವಾಟ್ಸ್ಆ್ಯಪ್ ಇದೀಗ ಫೇಸ್ಬುಕ್ನಲ್ಲಿರುವ ಅಚ್ಚರಿಯ ಆಯ್ಕೆಯೊಂದನ್ನು ನೀಡಲು ಮುಂದಾದೆ. ಇದನ್ನ ಕಂಡು ಬಳಕೆದಾರರು ದಂಗಾಗಿದ್ದಾರೆ. ವಾಟ್ಸ್ಆ್ಯಪ್ ಪರಿಚಯಿಸಲು ಹೊರಟಿರುವ ಹೊಸ ಅಪ್ಡೇಟ್ ಕವರ್ ಫೋಟೋ (WhatsApp Cover Photo).
ಹೌದು, ನೀವು ಫೇಸ್ಬುಕ್ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್ಆ್ಯಪ್ನಲ್ಲೂ ಸಿಗಲಿದೆ. ವಾಟ್ಸ್ಆ್ಯಪ್ ಬೇಟಾಇನ್ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್ಆ್ಯಪ್ ಪ್ರೊಫೈಲ್ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ. ಅದಕ್ಕೆ ಕ್ಲಿಕ್ ಮಾಡಿ ಹೊಸ ಫೋಟೋ ಅಥವಾ ಕ್ಯಾಮೆರಾ ಮೂಲಕ ಫೋಟೋ ತೆಗೆಯಲು ಅನುಮತಿ ಕೇಳುತ್ತದೆ. ನಿಮಗಿಷ್ಟದ ಫೋಟೋ ಆಯ್ಕೆ ಮಾಡಿ ಕವರ್ ಫೋಟೋ ಸೆಟ್ ಮಾಡಬಹುದಂತೆ.
WhatsApp is working on cover photos!
The ability to set a cover photo is under development for WhatsApp Business accounts!https://t.co/9iw1mVxzMJ
— WABetaInfo (@WABetaInfo) February 12, 2022
ಬ್ಯಾಕ್‌ಗ್ರೌಂಡ್ ವಾಲ್ ಪೇಪರ್ ಫೀಚರ್:
ವಾಟ್ಸ್ಆ್ಯಪ್ ಪರಿಚಯಿಸಲು ಮುಂದಾಗಿರುವ ಮತ್ತೊಂದು ಹೊಸ ಫೀಚರ್ ಮೂಲಕ ಪ್ರತಿ ಚಾಟ್ ಮತ್ತು ಗುಂಪಿಗೆ ನಿಮಗಿಷ್ಟವಾದ ಬ್ಯಾಕ್‌ಗ್ರೌಂಡ್ ಸೆಟ್ ಮಾಡಬಹುದು. ಸದ್ಯದಲ್ಲೇ ಈ ಆಯ್ಕೆ ಬಳಕೆದಾರರಿಗೆ ಸಿಗಲಿದೆಯಂತೆ. ಇದಲ್ಲದೆ ವಾಟ್ಸ್ಆ್ಯಪ್ iOS 15 ನಲ್ಲಿ ಹೊಸ ಫೀಚರ್ಸ್‌ಗಳನ್ನು ಸೇರಿಸಿದೆ. ಇದು ಫೋಕಸ್ ಮೋಡ್‌ಗೆ ಬೆಂಬಲವನ್ನು ನೀಡಲಿದೆ. ನೊಟಿಫಿಕೇಶನ್ ಜೊತೆಗೆ ಗ್ರೂಪ್ ಮತ್ತು ಪ್ರೊಫೈಲ್ ಚಿತ್ರಗಳನ್ನು ಡಿಸ್‌ಪ್ಲೇ ಮಾಡಲಿದೆ. ವಾಯ್ಸ್ ನೋಟ್‌ಗಳನ್ನು ರೆಕಾರ್ಡ್ ಮಾಡುವಾಗ ಅಪ್ಲಿಕೇಶನ್ ವಿರಾಮ ಮತ್ತು ಪುನರಾರಂಭದ ಬೆಂಬಲವನ್ನು ಸಹ ಸೇರಿಸಿದೆ. ವಾಯ್ಸ್ ನೋಟ್ ತೆಗೆದುಕೊಳ್ಳುವಾಗ ಯಾರಾದರೂ ಅಡ್ಡಿಪಡಿಸಿದಾಗ ವಿರಾಮ ತೆಗೆದುಕೊಳ್ಳಬೇಕಾದಾಗ ಈ ಫೀಚರ್ಸ್ ಉಪಯುಕ್ತವಾಗಿರುತ್ತದೆ.
ಕಾಲ್ ಇಂಟರ್ಫೇಸ್ ಫೀಚರ್:
ವಾಟ್ಸ್ಆ್ಯಪ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಇನ್ ಕಾಲ್ ಯುಐ ಪರಿಚಯಿಸಲು ಪ್ಲಾನ್ ನಡೆಸಿದೆ. ಇದರಿಂದ ವಾಟ್ಸ್ಆ್ಯಪ್ ಕಾಲ್ ಸಮಯದಲ್ಲಿ ಸ್ಕ್ರೀನ್ ನಡುವೆ ಗ್ರೇ ಸ್ಕ್ವೇರ್ ಅಳವಡಿಸುವುದಾಗಿ ಕಂಪನಿ ಹೇಳಿದೆ. ಇದರಿಂದ ನೀವು ಸ್ಪೀಕರ್ ಮೋಡ್‌ಗೆ ಬದಲಾಯಿಸಲು, ವಿಡಿಯೋ ಕರೆಗೆ ಬದಲಾಯಿಸುವ ಬಟನ್‌ಗಳು ಕೆಳಹಂತದಲ್ಲಿ ಲಭ್ಯವಾಗಲಿದೆ.
ಜ.2021ರಿಂದ ಜ.2022 ರವರೆಗೆ ಗೂಗಲ್ ನಲ್ಲಿ ಹುಡುಕಲಾದ ಉದ್ಯೋಗಗಳ ಮಾಹಿತಿ ಇಲ್ಲಿದೆ