WhatsApp: ವಾಟ್ಸ್​ಆ್ಯಪ್ ರಿಯಾಕ್ಷನ್ಸ್ ಫೀಚರ್​​ನಲ್ಲಿ ಹೊಸ ಆಯ್ಕೆ: ಬಳಕೆದಾರರಿಗೆ ಕಾದಿದೆ ಮತ್ತಷ್ಟು ಅಚ್ಚರಿ

| Updated By: Vinay Bhat

Updated on: Jun 20, 2022 | 2:29 PM

WhatsApp Emoji Reactions: ಕಳೆದ ತಿಂಗಳಷ್ಟೆ ವಾಟ್ಸ್​ಆ್ಯಪ್​​ ಮೆಸೇಜ್‌ ರಿಯಾಕ್ಷನ್ಸ್ ಫೀಚರ್ ಅನ್ನು ತನ್ನ ಬಳಕೆದಾರರಿಗೆ ನೀಡಿ ಖಷಿ ಪಡಿಸಿತ್ತು. ಇದೀಗ ಈ ಮೆಸೇಜ್‌ ರಿಯಾಕ್ಷನ್‌ ಫಿಚರ್ಸ್​ಗೆ ಮತ್ತಷ್ಟು ಆಯ್ಕೆಗಳು ಸೇರಲಿದೆಯಂತೆ.

WhatsApp: ವಾಟ್ಸ್​ಆ್ಯಪ್ ರಿಯಾಕ್ಷನ್ಸ್ ಫೀಚರ್​​ನಲ್ಲಿ ಹೊಸ ಆಯ್ಕೆ: ಬಳಕೆದಾರರಿಗೆ ಕಾದಿದೆ ಮತ್ತಷ್ಟು ಅಚ್ಚರಿ
WhatsApp New Feature
Follow us on

ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ದಿನದಿಂದ ದಿನಕ್ಕೆ ವಾಟ್ಸ್​ಆ್ಯಪ್​​ (WhatsApp) ತನ್ನ ಫೀಚರ್ ಅಪ್ಡೇಟ್ ಮಾಡುತ್ತಲೇ ಇದ್ದು ಮತ್ತಷ್ಟು ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ತಿಂಗಳಷ್ಟೆ ವಾಟ್ಸ್​ಆ್ಯಪ್​​ ಮೆಸೇಜ್‌ ರಿಯಾಕ್ಷನ್ಸ್ ಫೀಚರ್ ಅನ್ನು ತನ್ನ ಬಳಕೆದಾರರಿಗೆ ನೀಡಿ ಖಷಿ ಪಡಿಸಿತ್ತು. ಈಗಾಗಲೇ ಇನ್​ಸ್ಟಾಗ್ರಾಮ್, ಫೇಸ್​ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್​ನಲ್ಲಿ ಇರುವಂತಹ ಜನಪ್ರಿಯ ಅಪ್ಲಿಕೇಶನ್‌ಗಳು ಬಳಕೆದಾರರಿಗೆ ಮೆಸೇಜ್‌ ರಿಯಾಕ್ಷನ್‌ (Emoji Reactions) ಫೀಚರ್​ಗಳನ್ನು ನೀಡುತ್ತಿವೆ. ಇದೇ ಕಾರಣಕ್ಕೆ ವಾಟ್ಸ್​ಆ್ಯಪ್​ ಕೂಡ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಈ ಆಯ್ಕೆಯನ್ನು ಸೇರಿಸಿದೆ. ಲೈಕ್ ಥಂಬ್, ಹಾರ್ಟ್, ಹಾಹಾ, ವಾವ್ಹ್, ಕ್ರೈ ಮತ್ತು ಹೈ–ಫೈ ಎನ್ನುವ ಆರು ಎಮೋಜಿಗಳು ಲಭ್ಯವಾಗುತ್ತಿದೆ. ಇದೀಗ ಮತ್ತೊಂದು ಹೊಸ ಆಯ್ಕೆಯನ್ನು ವಾಟ್ಸ್​ಆ್ಯಪ್​ ನೀಡಲು ಮುಂದಾಗಿದೆ.

ಹೌದು, ವಾಟ್ಸ್​ಆ್ಯಪ್​ನ ಮೆಸೇಜ್‌ ರಿಯಾಕ್ಷನ್‌ ಫಿಚರ್ಸ್‌ ಎಮೋಜಿ ಐಕಾನ್‌ಗಳೊಂದಿಗೆ ಪ್ರತಿಕ್ರಿಯಿಸಲು ನಿಮಗೆ ಅನುಮತಿಸುತ್ತದೆ. ಇದು ಫೇಸ್‌ಬುಕ್‌ನಲ್ಲಿನ ಪೋಸ್ಟ್‌ಗಳಿಗೆ ನೀವು ಹೇಗೆ ಪ್ರತಿಕ್ರಿಯಿಸುತ್ತಿರೋ ಅದೇ ಮಾದರಿಯಲ್ಲಿ ಇರಲಿದೆ. ಅಂದರೆ ಎಮೋಜಿಗಳ ರಿಯಾಕ್ಷನ್​ಗಾಗಿ ನೀವು ಸಂದೇಶವನ್ನು ಲಾಂಗ್‌ ಪ್ರೆಸ್‌ ಮಾಡಬೇಕಾಗುತ್ತದೆ. ಪಾಪ್ ಅಪ್ ಆಗುವ ಯಾವುದೇ ಎಮೋಜಿಗಳಿಂದ ಆಯ್ಕೆ ಮಾಡಬೇಕಾಗುತ್ತದೆ. ಇದೀಗ ಈ ಮೆಸೇಜ್‌ ರಿಯಾಕ್ಷನ್‌ ಫಿಚರ್ಸ್​ಗೆ ಮತ್ತಷ್ಟು ಆಯ್ಕೆಗಳು ಸೇರಲಿದೆಯಂತೆ. ಅಂದರೆ ಲೈಕ್ ಥಂಬ್, ಹಾರ್ಟ್, ಹಾಹಾ, ವಾವ್ಹ್, ಕ್ರೈ ಮತ್ತು ಹೈ–ಫೈ ಎನ್ನುವ ಈಗಿರುವ ಆರು ಎಮೋಜಿಗಳ ಜೊತೆಗೆ ಇನ್ನೊಂದಷ್ಟು ಎಮೋಜಿಗಳು ಸೇರ್ಪಡೆಯಾಗಲಿದೆ ಎಂದು ವಾಟ್ಸ್​ಆ್ಯಪ್ ಹೇಳಿದೆ.

Tecno Pova 3: 7000mAh ಬ್ಯಾಟರಿ, 50MP ಕ್ಯಾಮೆರಾ: 11,499 ರೂ.ಗೆ ಬಿಡುಗಡೆ ಆಗಿದೆ ಟೆಕ್ನೋ ಪೊವಾ 3

ಇದನ್ನೂ ಓದಿ
Signal Problem: ನೀವಿರುವ ಜಾಗದಲ್ಲಿ ಸರಿಯಾಗಿ ನೆಟ್​ವರ್ಕ್​ ಸಿಗುತ್ತಿಲ್ವಾ?: ಇಲ್ಲಿದೆ ಸಿಂಪಲ್ ಈ ಟ್ರಿಕ್
Redmi Note 10S: ಬಜೆಟ್ ಬೆಲೆಯ ಈ ಫೋನಿನ ದರದಲ್ಲಿ ಮತ್ತಷ್ಟು ಕಡಿತ: ರೆಡ್ಮಿಯಿಂದ ಬಂಫರ್ ಆಫರ್
Traffic Fine: ಟ್ರಾಫಿಕ್ ಫೈನ್ ಆನ್​ಲೈನ್​ನಲ್ಲಿ ಕಟ್ಟುವುದು ಹೇಗೆ?: ಇಲ್ಲಿದೆ ಸಂಪೂರ್ಣ ಮಾಹಿತಿ
Realme Narzo 50i Prime: ಭಾರತಕ್ಕೆ ಬರುತ್ತಿದೆ ರಿಯಲ್‌ ಮಿಯ ಹೊಸ ಸ್ಮಾರ್ಟ್​ಫೋನ್: ಇದರ ಬೆಲೆ ಕೇವಲ …

ಡಿಪಿ, ಲಾಸ್ಟ್​ ಸೀನ್ ಕೆಲವರಿಗೆ ಮಾತ್ರ ಕಾಣುವಂತೆ ಮಾಡಿ:

ವಾಟ್ಸ್​ಆ್ಯಪ್​ನಲ್ಲಿ ಈಗ ನೀವು ನಿಮ್ಮ ಪ್ರೊಫೈಲ್ ಫೋಟೋವನ್ನು, ಲಾಸ್ಟ್​​ ಸೀನ್ ಮತ್ತು ಎಬೌಟ್ ಆಯ್ಕೆಯನ್ನು ಯಾರಿಗೆ ಬೇಕು ಅವರಿಗೆ ಮಾತ್ರ ಕಾಣುವಂತೆ ಮಾಡಬಹುದು. ಈ ಹಿಂದೆ ಇದರಲ್ಲಿ ನೋಬಡಿ (Nobody), ಮೈ ಕಾಂಟ್ಯಾಕ್ಟ್ಸ್ (My Contacts), ಎವರಿಒನ್ (Everyone) ಎಂಬ ಆಯ್ಕೆ ಮಾತ್ರ ನೀಡಲಾಗಿತ್ತು. ಇದೀಗ ಹೊಸ ಅಪ್ಡೇಟ್​ನಲ್ಲಿ ‘ಮೈ ಕಾಂಟ್ಯಾಕ್ಸ್ಟ್​​ ಎಕ್ಸೆಪ್ಟ್’ ಎಂಬ ಹೊಸ ಆಯ್ಕೆ ನೀಡಲಾಗಿದೆ. ಈ ಮೂಲಕ ನಿಮಗೆ ಅಗತ್ಯವಿರುವವರಿಗೆ ಮಾತ್ರ ನಿಮ್ಮ ಡಿಪಿ, ಲಾಸ್ಟ್​​ ಸೀನ್ ಮತ್ತು ಎಬೌಟ್ ಆಯ್ಕೆಯನ್ನು ನೋಡುವಂತೆ ಮಾಡಬಹುದು. ಸೆಟ್ಟಿಂಗ್​​ಗ ಹೋಗಿ ಎಕೌಂಟ್-ಪ್ರೈವಸಿ ಮೂಲಕ ಈ ಆಯ್ಕೆಯನ್ನು ನೀವು ಗಮನಿಸಬಹುದು. ವಾಟ್ಸ್​ಆ್ಯಪ್ ಈ ಹೊಸ ಆಯ್ಕೆಯನ್ನು ತನ್ನೆಲ್ಲ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ನೀಡಿದೆ.

ಎಡಿಟ್ ಆಯ್ಕೆ:

ಇದರ ಜೊತೆಗೆ ಎಡಿಟ್ ಮಾಡುವ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಲು ವಾಟ್ಸ್​ಆ್ಯಪ್​ ಮುಂದಾಗಿದ್ದು, ನೂತನ ಆಯ್ಕೆಯನ್ನು ಪರಿಶೀಲಿಸುತ್ತಿದೆ. ಇದರ ಪ್ರಕಾರ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಬೀಟಾ ಆವೃತ್ತಿಯಲ್ಲಿ ಎಡಿಟ್ ಬಟನನ್ನು ಪರೀಕ್ಷಿಸುತ್ತಿದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಸದ್ಯ ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ. ಎಲ್ಲಾ ವಾಟ್ಸ್​ಆ್ಯಪ್​​ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ