Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಇನ್ನುಂದೆ ವಾಟ್ಸ್​ಆ್ಯಪ್ ಚಾಟ್ ಡಿಲೀಟ್ ಆದ್ರೆ ಟೆನ್ಶನ್ ಬೇಡ: ರಿಕವರಿ ಮಾಡಬಹುದು, ಹೇಗೆ ನೋಡಿ

WhatsApp New Undo Feature: ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್‌ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಆಯ್ಕೆ ಗ್ರಾಹಕರಿಗೆ ಒದಗಿಸುವುದಾಗಿ ಹೇಳಿದ್ದ ಕಂಪನಿ ಇದೀಗ ಪರಿಚಯಿಸುತ್ತಿರುವುದು ಡಿಲೀಟ್ ಆದ ಚಾಟ್ ಅನ್ನು ಮರಳಿಸುವುದು.

WhatsApp: ಇನ್ನುಂದೆ ವಾಟ್ಸ್​ಆ್ಯಪ್ ಚಾಟ್ ಡಿಲೀಟ್ ಆದ್ರೆ ಟೆನ್ಶನ್ ಬೇಡ: ರಿಕವರಿ ಮಾಡಬಹುದು, ಹೇಗೆ ನೋಡಿ
WhatsApp New Feature
Follow us
TV9 Web
| Updated By: Vinay Bhat

Updated on:Jun 05, 2022 | 1:54 PM

ಈ ವರ್ಷ ವಾಟ್ಸ್​ಆ್ಯಪ್ (WhatsApp)​ ತನ್ನ ಬಳಕೆದಾರರಿಗೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಪರಿಚಯಿಸುತ್ತಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉಪಯುಕ್ತವಾದ ಅಪ್ಡೇಟ್​ಗಳನ್ನು ನೀಡುತ್ತಿದೆ. ಇತ್ತೀಚೆಗಷ್ಟೆ ಮೆಸೇಜ್ ರಿಯಾಕ್ಷನ್ (Message Reaction) ಸೇರಿದಂತೆ ಕೆಲ ಅಮೂಲ್ಯ ವಿಶೇಷತೆಗಳನ್ನು ಪರಿಚಯಿಸಿದ್ದ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಹೊಸ ಆಯ್ಕೆಗಳು ಬರಲು ಪರೀಕ್ಷಾ ಹಂತದಲ್ಲಿದೆ. ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್‌ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಆಯ್ಕೆ ಗ್ರಾಹಕರಿಗೆ ಒದಗಿಸುವುದಾಗಿ ಹೇಳಿದ್ದ ಕಂಪನಿ ಇದೀಗ ಮತ್ತೊಂದು ಹೊಸ ಫೀಚರ್ ಅನ್ನು ತರುತ್ತಿರುವ ಬಗ್ಗೆ ವರದಿಯಾಗಿದೆ. ಈ ಬಾರಿ ಮೆಟಾ ಒಡೆತನದ ವಾಟ್ಸ್​ಆ್ಯಪ್ ಪರಿಚಯಿಸುತ್ತಿರುವುದು ಡಿಲೀಟ್ ಆದ ಚಾಟ್ ಅನ್ನು ಮರಳಿಸುವುದು. ಅಂದರೆ ತಪ್ಪಾಗಿ ನೀವು ಮೆಸೇಜ್ ಒಂದನ್ನು ಡಿಲೀಟ್ (Delete) ಮಾಡಿದರೆ ಅದನ್ನು ಅನ್​ಡು ಮಾಡುವ ಆಯ್ಕೆ ನಿಮಗೆ ವಾಟ್ಸ್​ಆ್ಯಪ್​ನಲ್ಲಿ ಸಿಗಲಿದೆ.

ಹೆಚ್ಚಿನ ಬಾರಿ ಬಳಕೆದಾರರು ಮೆಸೇಜ್ ಡಿಲೀಟ್ ಮಾಡಲು ಹೊರಟಾಗ ಡಿಲೀಟ್ ಫಾರ್ ಎವರಿವರ್ ಬದಲು ಡಿಲೀಟ್ ಫಾರ್ ಮಿ ಒತ್ತಿ ಬಿಡುತ್ತಾರೆ. ವಾಟ್ಸ್​ಆ್ಯಪ್​ನ ಈ ಹೊಸ ಅನ್​ಡು ಬಟನ್ ಇದಕ್ಕೆ ಸಹಕಾರಿ ಆಗಲಿದೆ. ಸದ್ಯದಲ್ಲೇ ಈ ಆಯ್ಕೆ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ. ವಾಟ್ಸ್​ಆ್ಯಪ್​ ಬೇಟಾ ವರ್ಷನ್​ನಲ್ಲಿರುವ ಈ ಆಯ್ಕೆ ಬಗ್ಗೆ ಸ್ಕ್ರೀನ್ ಶಾಟ್ ಒಂದಿದ್ದು, ಇದರ ಪ್ರಕಾರ ನೀವು ಡಿಲೀಟ್ ಫಾರ್ ಮಿ ಆಯ್ಕೆಯನ್ನು ಒತ್ತಿದ ತಕ್ಷಣ ಮೇಲಿನ ಭಾಗದಲ್ಲಿ ಈ ಮೆಸೇಜ್ ಅನ್ನು ಅನ್​ಡು ಮಾಡಬೇಕೆ ಎಂಬ ಪಾಪ್​-ಅಪ್ ಆಯ್ಕೆ ಕಾಣಲಿದೆ. ಈಗಾಗಲೇ ಟೆಲಿಗ್ರಾಮ್​ನಲ್ಲಿ ಈ ಅಪ್ಡೇಟ್ ನೀಡಲಾಗಿದೆ.

ಎಡಿಟ್ ಆಯ್ಕೆ:

ಇದನ್ನೂ ಓದಿ
Image
WhatsApp: ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಕಳುಹಿಸಿದ ಬಳಿಕ ಎಡಿಟ್ ಮಾಡಬಹುದು: ಹೇಗೆ ಗೊತ್ತೇ?
Image
Best Smartphone: ಇಲ್ಲಿದೆ ನೋಡಿ 20,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​​ಫೋನ್​ಗಳು
Image
Instagram: ಇನ್​​ಸ್ಟಾಗ್ರಾಮ್ ರೀಲ್ಸ್​ನಲ್ಲಿ ದೊಡ್ಡ ಬದಲಾವಣೆ: ಹೊಸ ಆಯ್ಕೆಯಲ್ಲಿ ಏನಿದೆ ನೋಡಿ
Image
Best Smartphone: ಇಲ್ಲಿದೆ ನೋಡಿ 15,000 ರೂ. ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು

ಮೆಸೇಜಿಂಗ್ ಅಪ್ಲಿಕೇಶನ್ ಆ್ಯಪ್‌ನ ಬೀಟಾ ಆವೃತ್ತಿಯಲ್ಲಿ ಎಡಿಟ್ ಬಟನನ್ನು ಪರೀಕ್ಷಿಸುತ್ತಿದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಸದ್ಯ ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ. ಎಲ್ಲಾ ವಾಟ್ಸ್​ಆ್ಯಪ್​​ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

ಟ್ವಿಟರ್ ಕೂಡ ಟ್ವೀಟ್ ಎಡಿಟ್ ಫೀಚರ್ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಸಂದರ್ಭದಲ್ಲಿ ವಾಟ್ಸ್‌ಆ್ಯಪ್ ಹೊಸ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸಲು ಉತ್ಸುಕವಾಗಿದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿದ್ದರೂ ಟ್ವಿಟರ್‍ನಲ್ಲಿ ಈ ಕುರಿತು ವರದಿ ಬಂದ ಬೆನ್ನಿಗೆ ಅದನ್ನು ಕೈಬಿಟ್ಟಿತ್ತು. ಈಗ ಐದು ವರ್ಷಗಳ ನಂತರ ಮತ್ತೆ ಎಡಿಟ್ ಬಟನ್ ಕುರಿತು ವಾಟ್ಸ್​ಆ್ಯಪ್​​ ಪರೀಕ್ಷಿಸುತ್ತಿದೆ.

ವಾಟ್ಸ್​ಆ್ಯಪ್​​ ಅಭಿವೃದ್ಧಿಪಡಿಸುತ್ತಿರುವ ಫೀಚರ್‌ನ ಸ್ಕ್ರೀನ್‌ಶಾಟ್ ಅನ್ನು ವೆಬಿಟೈನ್‌ಫೋ ಹಂಚಿಕೊಂಡಿದೆ. ಬಳಕೆದಾರರು ಕಳುಹಿಸಿದ ಸಂದೇಶವನ್ನು ಲಾಂಗ್ ಪ್ರೆಸ್ ಮೂಲಕ ಆಯ್ಕೆ ಮಾಡಿದಾಗ, ಸಂದೇಶವನ್ನು ನಕಲಿಸು(ಕಾಪಿ), ಫಾರ್ವರ್ಡ್ ಆಯ್ಕೆಯೊಂದಿಗೆ ಎಡಿಟ್ ಆಯ್ಕೆಯೂ ಗೋಚರಿಸಲಿದೆ. ಎಡಿಟ್ ಬಟನ್ ಆಯ್ಕೆ ಮಾಡಿದ ಬಳಿಕ ಕಳುಹಿಸಲಾದ ಸಂದೇಶದಲ್ಲಿ ಅಕ್ಷರ ದೋಷವಿದ್ದರೆ, ಅದನ್ನು ಸರಿಪಡಿಸಬಹುದು.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Sun, 5 June 22

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!