ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಕಳೆದ ವರ್ಷ ಸಾಕಷ್ಟು ಅಭಿವೃದ್ದಿ ಕಂಡಿತು. ಹೀಗಾಗಿಯೇ ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. 2023 ವರ್ಷದ ಮೊದಲ ತಿಂಗಳಲ್ಲೇ ಕೆಲ ಅಪ್ಡೇಟ್ಗಳನ್ನು ನೀಡಿರುವ ವಾಟ್ಸ್ಆ್ಯಪ್ನಲ್ಲಿ ಈ ತಿಂಗಳು ಕೆಲ ಹೊಸ ಫೀಚರ್ಗಳು ಬರುತ್ತಿದೆ. ಹೆಚ್ಚಾಗಿ ಆಂಡ್ರಾಯ್ಡ್ (Android) ಮತ್ತು ಐಒಎಸ್ ಬಳಕೆದಾರರಿಗೆ ಅಪ್ಡೇಟ್ಗಳನ್ನು ನೀಡುತ್ತಿದ್ದ ಕಂಪನಿ ಈಗ ವೆಬ್ ಬಳಕೆದಾರರಿಗೆ ನೂತನ ಪೀಚರ್ವೊಂದನ್ನು ನೀಡಲು ಮುಂದಾಗಿದೆ. ವಾಟ್ಸ್ಆ್ಯಪ್ ವೆಬ್ನಲ್ಲಿ ಫೋಟೋ ಸೆಂಡ್ ಮಾಡುವಾಗ ವಿಶೇಷವಾದ ಆಯ್ಕೆಯೊಂದು ಕಾಣಿಸಲಿದ್ದು, ಇದರ ಮೂಲಕ ಮೂಲ ಗುಣಮಟ್ಟದಲ್ಲೇ ಆ ಫೋಟೋ ಸೆಂಡ್ ಆಗಲಿದೆ.
ಈ ಆಯ್ಕೆ ಸದ್ಯದಲ್ಲೇ ವಾಟ್ಸ್ಆ್ಯಪ್ ತನ್ನ ವೆಬ್ ಬಳಕೆದಾರರಿಗೆ ನೀಡುತ್ತಿದೆ. ಈ ಮೂಲಕ ಉತ್ತಮ ಕ್ವಾಲಿಟಿ ಇರುವ ಫೋಟೋ ಅಥವಾ ಫೈಲ್‌ಗಳನ್ನು ಅದೇ ಗುಣಮಟ್ಟದಲ್ಲಿ ಸೆಂಡ್ ಮಾಡಬಹುದು. ಈಗಾಗಲೇ ಆಂಡ್ರಾಯ್ಡ್ ಹಾಗೂ ಐಓಎಸ್ ಬಳಕೆದಾರರಿಗೆ ಈ ಆಯ್ಕೆ ನೀಡಲಾಗಿದೆ. ವಾಟ್ಸ್ಆ್ಯಪ್ ವೆಬ್ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿ ಸಿಗುವುದಿಲ್ಲ. ಇದಕ್ಕಾಗಿ ವಾಟ್ಸ್ಆ್ಯಪ್ ತನ್ನ ಡೆಸ್ಕ್ಟಾಪ್ ಪ್ಲಾಟ್‌ಫಾರ್ಮ್‌ನಲ್ಲಿ ಮೂಲ ಗುಣಮಟ್ಟದ ಫೋಟೋಗಳನ್ನು ಸೆಂಡ್ ಮಾಡಲು ಅನುಮತಿಸುವ ಹೊಸ ಫೀಚರ್ಸ್ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ. ಈ ಫೀಚರ್ ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ.
ವಾಟ್ಸ್ಆ್ಯಪ್ ಕರೆಯನ್ನು ಶೆಡ್ಯುಲ್ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಹೌದು, ಯಾವುದೇ ಸ್ಮಾರ್ಟ್ಫೋನ್ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ಆ್ಯಪ್ ಇದೇ ಮೊದಲ ಬಾರಿಗೆ ತನ್ನ ಕರೆಗಳನ್ನು ಶೆಡ್ಯುಲ್ ಮಾಡುವ ಆಯ್ಕೆ ನೀಡುತ್ತಿದೆ. ಅಂದರೆ ವಾಟ್ಸ್ಆ್ಯಪ್ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್ ಮಾಡಬಹುದು.
ಸದ್ಯದಲ್ಲೇ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಅನ್ನು ಸ್ಟೇಟಸ್ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಈಗಾಗಲೇ ಇದು ಆಂಡ್ರಾಯ್ಡ್ ಬೇಟಾ ವರ್ಷನ್ನಲ್ಲಿ ಲಭ್ಯವಾಗಿದೆ. ಈವರೆಗೆ ಸ್ಟೇಟಸ್ನಲ್ಲಿ ವಿಡಿಯೋ, ಫೋಟೋ, ಲಿಂಕ್ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್ಗಳ ಕಾಲ ಇದು ಇರಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:25 pm, Mon, 13 February 23