WhatsApp Voice Status: ವಾಯ್ಸ್ ಸ್ಟೇಟಸ್: ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿಯ ಫೀಚರ್

ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ.

WhatsApp Voice Status: ವಾಯ್ಸ್ ಸ್ಟೇಟಸ್: ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿಯ ಫೀಚರ್
WhatsApp
Follow us
TV9 Web
| Updated By: Digi Tech Desk

Updated on:Jan 19, 2023 | 11:34 AM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷ ಪರಿಚಯಿಸಿದ ಫೀಚರ್​ಗಳಿಗೆ ಲೆಕ್ಕವಿಲ್ಲ. 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡ ವಾಟ್ಸ್​ಆ್ಯಪ್ ಈ ವರ್ಷ ಕೂಡ ವಿಶೇಷ ಅಪ್ಡೆಟ್​​​ಗಳನ್ನು ಪರಿಚಯಿಸುವಲ್ಲಿ ಕೆಸಲ ಮಾಡುತ್ತಿದೆ. ಇದಕ್ಕಾಗಿಯೆ ವಾಟ್ಸ್​ಆ್ಯಪ್ ಅನ್ನು ಇಂದು ವಿಶ್ವದಲ್ಲಿ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಹೆಚ್ಚಾಗಿ ಮೊಬೈಲ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುವ ವಾಟ್ಸ್​ಆ್ಯಪ್ (WhatsApp) ಇದೀಗ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ಉಪಯುಕ್ತವಾದ ಆಯ್ಕೆಯನ್ನು ನೀಡುತ್ತಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ (Voice Message) ಅನ್ನು ಹಂಚಿಕೊಳ್ಳಬಹುದು.

ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಈಗಾಗಲೇ ಇದು ಆಂಡ್ರಾಯ್ಡ್ ಬೇಟಾ ವರ್ಷನ್​ನಲ್ಲಿ ಲಭ್ಯವಾಗಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್​ಕ್ರಿಪ್ಟೆಡ್ ಆಗಿದೆ.

Twitter: ಪರಿವರ್ತನೆ ಹಾದಿಯಲ್ಲಿ ಟ್ವಿಟರ್; ಹೊಸ ಫೀಚರ್ಸ್ ಘೋಷಿಸಿದ ಎಲಾನ್ ಮಸ್ಕ್

ಇದನ್ನೂ ಓದಿ
Image
Twitter Bird: ಪೀಠೋಪಕರಣ ಸೇರಿದಂತೆ ಟ್ವಿಟರ್ ಪ್ರಧಾನ ಕಚೇರಿ ವಸ್ತುಗಳ ಹರಾಜು; ಹಕ್ಕಿ ಪ್ರತಿಮೆಗೆ 1 ಲಕ್ಷ ಡಾಲರ್
Image
IPL 2023: ಈ ಬಾರಿ ಐಪಿಎಲ್ ಉಚಿತ ಪ್ರಸಾರ: ವರದಿ
Image
PLI scheme: ಐಟಿ ಸರ್ವರ್, ಹಾರ್ಡ್​ವೇರ್​ಗೂ ಪಿಎಲ್​ಐ ಸ್ಕೀಮ್​; ಏನಿದು?
Image
Twitter: ಆದಾಯಕ್ಕಾಗಿ ಯೂಸರ್ ನೇಮ್​ ಮಾರಾಟಕ್ಕೆ ಮುಂದಾದ ಟ್ವಿಟರ್; ಹೆಚ್ಚಾಗುತ್ತಿದೆ ಹ್ಯಾಕ್ ಆಗುವ ಆತಂಕ

ಐದು ಚಾಟ್‌ ಪಿನ್‌ ಮಾಡುಬಹುದು:

ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡುವಂತಹ ಆಯ್ಕೆ ನೀಡಲು ಮುಂದಾಗಿದೆ. ಈ ಫೀಚರ್ ಮೂಲಕ ನೀವು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಚಾಟ್‌ ಮಾಡುವ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡಬಹುದಾಗಿದೆ. ಈ ಚಾಟ್‌ಗಳು ನಿಮ್ಮ ವಾಟ್ಸ್​ಆ್ಯಪ್ ಚಾಟ್‌ನ ಮೇಲ್ಭಾಗದಲ್ಲಿ ಗೋಚರಿಸುತ್ತದೆ. ಸದ್ಯದಲ್ಲೇ ಈ ಆಯ್ಕೆ ಆಂಡ್ರಾಯ್ಡ್, ಐಒಎಸ್ ಮತ್ತು ವೆಬ್ ಬಳಕೆದಾರರಿಗೆ ಸಿಗಲಿದೆಯಂತೆ. ಸದ್ಯ ಈ ಹೊಸ ಫೀಚರ್ಸ್‌ ಬಗ್ಗೆ ವಾಬೇಟಾಇನ್ಫೋ ವೆಬ್‌ಸೈಟ್‌ ವರದಿ ಮಾಡಿದೆ. ಪ್ರಸ್ತುತ, ವಾಟ್ಸ್​ಆ್ಯಪ್ ಬಳಕೆದಾರರು ತಮ್ಮ ಚಾಟ್‌ ವಿಂಡೋದ ಮೇಲೆ ಕೇವಲ ಮೂರು ಚಾಟ್‌ಗಳನ್ನು ಮಾತ್ರ ಪಿನ್ ಮಾಡಬಹುದು. ಆದರೆ ಹೊಸ ಆಯ್ಕೆಯಲ್ಲಿ ನೀವು ಐದು ಚಾಟ್‌ಗಳನ್ನು ಪಿನ್‌ ಮಾಡುವುದಕ್ಕೆ ಅವಕಾಶ ಸಿಗಲಿದೆ.

ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ಡೆಸ್ಕ್​ಟಾಪ್ ಬಳಕೆದಾರರಿಗೆ ಸ್ಟೇಟಸ್ ಬಗ್ಗೆ ರಿಪೋರ್ಟ್ ಮಾಡುವ ಆಯ್ಕೆಯನ್ನು ನೀಡಲು ಮುಂದಾಗಿದೆ. ಈಗಾಗಲೇ ಬಳಕೆದಾರರು ಮೆಸೇಜ್ ಮಾಡುವುದರಲ್ಲಿ ಈ ಫೀಚರ್ ನೀಡಿದೆ. ನಿಮ್ಮ ಕಾಂಟೆಕ್ಟ್​ನಲ್ಲಿರುವ ವ್ಯಕ್ತಿಯು ಅಶ್ಲೀಲ ವಿಡಿಯೊವನ್ನು ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದರೆ ಅಥವಾ ಜನರ ಭಾವನೆಗಳಿಗೆ ಹಾನಿ ಮಾಡುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ವಿಷಯಗಳಲ್ಲಿ ಸ್ಟೇಟಸ್​ನಲ್ಲಿ ಶೇರ್ ಮಾಡಿದ್ದರೆ ಈ ಕುರಿತು ರಿಪೋರ್ಟ್ ಮಾಡಬಹುದು. ಹೊಸ ಡಿವೈಸ್‌ಗಳಿಗೆ ಲಾಗಿನ್‌ ಮಾಡುವಾಗ ಉತ್ತಮ ಭದ್ರತೆಯನ್ನು ನೀಡಲು ವಾಟ್ಸ್​ಆ್ಯಪ್ ಮುಂದಾಗಿದ್ದು, ಹೊಸ ಪರಿಶೀಲನಾ ಕೋಡ್ ಅನ್ನು ನಮೂದಿಸುವ ಮೂಲಕವೇ ಹೊಸ ಡಿವೈಸ್‌ನಲ್ಲಿ ಲಾಗ್‌ ಇನ್ ಪ್ರಕ್ರಿಯೆಯಲ್ಲಿ ತೊಡಗಬಹುದು ಎಂದು ತಿಳಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 am, Thu, 19 January 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ