WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡುವುದು ಹೇಗೆ ಗೊತ್ತೇ?

WhatsApp Edit Sent Message: ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡುವುದು ಹೇಗೆ ಗೊತ್ತೇ?
WhatsApp New Feature
Follow us
Vinay Bhat
|

Updated on: Mar 28, 2023 | 12:31 PM

ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಹೀಗಾಗಿಯೇ ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಸಾಮಾನ್ಯವಾಗಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ.

ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ (Edit Message) ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

Infinix Hot 30i: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ರಿಲೀಸ್ ಆಗಿದೆ ಹೊಸ ಸ್ಮಾರ್ಟ್​ಫೋನ್: ದಂಗಾದ ಶವೋಮಿ, ರಿಯಲ್ ಮಿ

ಇದನ್ನೂ ಓದಿ
Image
Asus ROG Phone 7: ಶೀಘ್ರದಲ್ಲೇ ಮಾರುಕಟ್ಟೆಗೆ ಬರುತ್ತಿದೆ ಹೊಸ ಏಸಸ್ ಫೋನ್
Image
JIO New Plans: ಐಪಿಎಲ್ 2023 ಆಗಮಿಸುತ್ತಿದ್ದಂತೆ ಜಿಯೋದಿಂದ ಬಂಪರ್ ಆಫರ್ ಘೋಷಣೆ
Image
Nothing Phone 2: ಸ್ಟೈಲಿಶ್ ಫೋನ್ ಪ್ರಿಯರಿಗಾಗಿ ಬರುತ್ತಿದೆ ಹೊಸ ನಥಿಂಗ್ ಫೋನ್
Image
Tech Tips: ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಅನ್ನು ಕೆಲವೇ ಜನರಿಗೆ ಕಾಣುವಂತೆ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್

ಎಲ್ಲಾ ವಾಟ್ಸ್​ಆ್ಯಪ್​​ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ. ಇಲ್ಲಿ ಗಮನಿಸ ಬೇಕಾದ ಸಂಗತಿ ಎಂದರೆ, ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಅನ್ನು ಡಿಲೀಟ್ ಮಾಡಿದರೆ ಹೇಗೆ ಚಾಟ್​ನಲ್ಲಿ ಮಾಹಿತಿ ನೀಡುತ್ತದೆಯೊ ಅದೇರೀತಿ ಎಡಿಟ್ ಮಾಡಿದರೆ ಕೂಡ ಕಳುಹಿಸಿದವರಿಗೆ ತಿಳಿಯುತ್ತದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿದ್ದರೂ ಟ್ವಿಟರ್​ನಲ್ಲಿ ಈ ಕುರಿತು ವರದಿ ಬಂದ ಬೆನ್ನಿಗೆ ಅದನ್ನು ಕೈಬಿಟ್ಟಿತ್ತು.

ಐದು ವರ್ಷಗಳ ನಂತರ ಮತ್ತೆ ಎಡಿಟ್ ಬಟನ್ ಕುರಿತು ವಾಟ್ಸ್​ಆ್ಯಪ್​​ ಪರೀಕ್ಷಿಸುತ್ತಿದೆ. ಬಳಕೆದಾರರು ಕಳುಹಿಸಿದ ಸಂದೇಶವನ್ನು ಲಾಂಗ್ ಪ್ರೆಸ್ ಮೂಲಕ ಆಯ್ಕೆ ಮಾಡಿದಾಗ, ಸಂದೇಶವನ್ನು ನಕಲಿಸು(ಕಾಪಿ), ಫಾರ್ವರ್ಡ್ ಆಯ್ಕೆಯೊಂದಿಗೆ ಎಡಿಟ್ ಆಯ್ಕೆಯೂ ಗೋಚರಿಸಲಿದೆ. ಎಡಿಟ್ ಬಟನ್ ಆಯ್ಕೆ ಮಾಡಿದ ಬಳಿಕ ಕಳುಹಿಸಲಾದ ಸಂದೇಶದಲ್ಲಿ ಅಕ್ಷರ ದೋಷವಿದ್ದರೆ, ಅದನ್ನು ಸರಿಪಡಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್