Whatsapp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಹುನಿರೀಕ್ಷಿತ ಶೆಡ್ಯುಲ್‌ ಫೀಚರ್: ಬಳಕೆದಾರರು ಫುಲ್ ಖುಷ್

Whatsapp Schedule Call: ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಪರಿಚಯಿಸುವುದಾಗಿ ಇತ್ತೀಚೆಗಷ್ಟೆ ಘೋಷಿಸಿದ್ದ ಕಂಪನಿ ಇದೀಗ ವಾಟ್ಸ್​ಆ್ಯಪ್ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ.

Whatsapp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಹುನಿರೀಕ್ಷಿತ ಶೆಡ್ಯುಲ್‌ ಫೀಚರ್: ಬಳಕೆದಾರರು ಫುಲ್ ಖುಷ್
whatsapp schedule
Follow us
Vinay Bhat
|

Updated on:Feb 26, 2023 | 12:44 PM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷದಂತೆ ಈ ವರ್ಷ ಕೂಡ ಕುತೂಹಲಕಾರಿ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿದೆ. ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. 2023 ವರ್ಷದ ಮೊದಲ ತಿಂಗಳಲ್ಲೇ ಕೆಲ ಅಪ್ಡೇಟ್​ಗಳನ್ನು ನೀಡಿರುವ ವಾಟ್ಸ್​ಆ್ಯಪ್​ನಲ್ಲಿ ಈ ತಿಂಗಳು ಕೆಲ ಹೊಸ ಫೀಚರ್​ಗಳು ಬರಲಿಕ್ಕಿವೆ. ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಪರಿಚಯಿಸುವುದಾಗಿ ಇತ್ತೀಚೆಗಷ್ಟೆ ಘೋಷಿಸಿದ್ದ ಕಂಪನಿ ಇದೀಗ ವಾಟ್ಸ್​ಆ್ಯಪ್ ಕರೆಯನ್ನು ಶೆಡ್ಯುಲ್‌ (Schedule Call) ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ.

ಹೌದು, ಯಾವುದೇ ಸ್ಮಾರ್ಟ್​ಫೋನ್​ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್​ಆ್ಯಪ್ ಇದೇ ಮೊದಲ ಬಾರಿಗೆ ತನ್ನ ಕರೆಗಳನ್ನು ಶೆಡ್ಯುಲ್‌ ಮಾಡುವ ಆಯ್ಕೆ ನೀಡುತ್ತಿದೆ. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು.

Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ

ಇದನ್ನೂ ಓದಿ
Image
iQOO Z7: ಕೇವಲ ಫೋಟೋದಿಂದಲೇ ರೋಚಕತೆ ಸೃಷ್ಟಿಸಿದ ಐಕ್ಯೂ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಯಾವುದು?
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಚಾರ್ಜ್​ಗೆ ಹಾಕಿದಾಗ ಬಿಸಿಯಾಗುತ್ತಾ?: ನಿರ್ಲಕ್ಷಿಸದಿರಿ
Image
Tech Tips: ಯೂಟ್ಯೂಬ್​ನಲ್ಲಿ​ ವಿಡಿಯೋ ನೋಡುವಾಗ ಜಾಹೀರಾತು ಬಾರದಂತೆ ಹೇಗೆ ಮಾಡುವುದು?
Image
Gadget Review: ಎಚ್​ಪಿ ಸ್ಮಾರ್ಟ್​ ಟ್ಯಾಂಕ್ 580 ಪ್ರಿಂಟರ್​- ಇಲ್ಲಿದೆ ಮಾಹಿತಿ

ಮೊದಲಿಗೆ ಈ ಶೆಡ್ಯುಲ್‌ ಕರೆ ಸೌಲಭ್ಯ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರಲಿದ್ದು, ನಂತರದಲ್ಲಿ ಐಒಎಸ್ ಬಳಕೆದಾರರಿಗೂ ಸಿಗಲಿದೆ. ಕರೆಗಳನ್ನು ಶೆಡ್ಯುಲ್‌ ಮಾಡುವ ಸಂದರ್ಭ ಬಳಕೆದಾರರಿಗೆ ಶೀರ್ಷಿಕೆ, ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಲು ಕೇಳಲಾಗುತ್ತದೆ. ಹಾಗೆಯೇ ಗ್ರೂಪ್‌ ಕರೆ ವಿಚಾರದಲ್ಲೂ ನಿಗದಿತ ಕರೆಯನ್ನು ಯಾವಾಗ ಮಾಡಲಾಗುತ್ತದೆ ಎಂಬುದರ ಕುರಿತು ಗುಂಪಿನಲ್ಲಿರುವ ಪ್ರತಿಯೊಬ್ಬರೂ ತಿಳಿದುಕೊಳ್ಳಬಹುದಾಗಿದೆ. ಸದ್ಯಕ್ಕೆ ಈ ಫೀಚರ್ಸ್ ಅಭಿವೃದ್ಧಿ ಹಂತದಲ್ಲಿದ್ದು, ಶೀಘ್ರದಲ್ಲೇ ವಾಟ್ಸ್​ಆ್ಯಪ್​ನ 2.23.4.4 ಅಪ್ಡೇಟ್​ನಲ್ಲಿ ಈ ಆಯ್ಕೆ ಸಿಗಲಿದೆ ಎಂದು ಹೇಳಲಾಗಿದೆ.

ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಿ:

ವಾಟ್ಸ್​ಆ್ಯಪ್ ಮತ್ತೊಂದು ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಅದುವೇ ಎಡಿಟ್ ಮೆಸೇಜ್ ಆಯ್ಕೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ನಿಮಗೆ ಸಿಗಲಿದೆ. ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಒರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸಿ:

ವಾಟ್ಸ್​ಆ್ಯಪ್​ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿ ಸಿಗುವುದಿಲ್ಲ. ತನ್ನ ನೈಜ್ಯ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಇದಕ್ಕಾಗಿ ವಾಟ್ಸ್​ಆ್ಯಪ್​ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲ ಗುಣಮಟ್ಟದ ಫೋಟೋಗಳನ್ನು ಸೆಂಡ್‌ ಮಾಡಲು ಅನುಮತಿಸುವ ಹೊಸ ಫೀಚರ್ಸ್‌ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ. ವಾಟ್ಸ್​ಆ್ಯಪ್​ಪರಿಚಯಿಸಲಿರುವ ಹೊಸ ಫೀಚರ್ಸ್‌ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್‌ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Sun, 26 February 23