WhatsApp New Features: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಫೀಚರ್: ಏನಿದು ಸ್ಪ್ಲಿಟ್ ವ್ಯೂ ಆಯ್ಕೆ?

WhatsApp: ವಾಟ್ಸ್​ಆ್ಯಪ್ ತನ್ನ ಟ್ಯಾಬ್ಲೆಟ್ ಯೂಸರ್ಸ್​ಗೆ ವಿಶೇಷ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ. ಅದುವೆ ಸ್ಪ್ಲಿಟ್ ವ್ಯೂ (split-view). ಈಗಾಗಲೇ ಈ ಆಯ್ಕೆ ಸ್ಮಾರ್ಟ್​ಫೋನ್​ಗಳಲ್ಲಿ ಇದೆ.

WhatsApp New Features: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಫೀಚರ್: ಏನಿದು ಸ್ಪ್ಲಿಟ್ ವ್ಯೂ ಆಯ್ಕೆ?
WhatsApp
Follow us
Vinay Bhat
|

Updated on: Mar 05, 2023 | 12:27 PM

ವಾಟ್ಸ್​ಆ್ಯಪ್ (WhatsApp) ಕಳೆದ ವರ್ಷದಂತೆ ಈ ವರ್ಷ ಕೂಡ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ದಿನದಿಂದ ದಿನಕ್ಕೆ ಬಳಕೆದಾರರನ್ನು ಹೆಚ್ಚಿಸುತ್ತಿರುವ ಮೆಟಾ ಒಡೆತನದ ಪ್ರಸಿದ್ಧ ಆ್ಯಪ್ ಕೇವಲ ಮೊಬೈಲ್ ಬಳಕೆದಾರರಿಗೆ ಮಾತ್ರವಲ್ಲದೆ ವೆಬ್ ಮತ್ತು ಟ್ಯಾಬ್ಲೆಟ್ ಬಳಕೆದಾರರಿಗೆ ಕೂಡ ವಿನೂತನ ಫೀಚರ್​ಗಳನ್ನು ಪರಿಚಯಿಸುತ್ತಿದೆ. ಅದರಂತೆ ಇದೀಗ ತನ್ನ ಟ್ಯಾಬ್ಲೆಟ್ ಯೂಸರ್ಸ್​ಗೆ ವಿಶೇಷ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ. ಅದುವೆ ಸ್ಪ್ಲಿಟ್ ವ್ಯೂ (split-view). ಈಗಾಗಲೇ ಈ ಆಯ್ಕೆ ಸ್ಮಾರ್ಟ್​ಫೋನ್​ಗಳಲ್ಲಿ ಇದೆ. ಇದರ ಮೂಲಕ ಒಂದೇ ಮೊಬೈಲ್‌ನಲ್ಲಿ ಎರಡೆರಡು ಆ್ಯಪ್‌ಗಳನ್ನು ಏಕಕಾಲದಲ್ಲಿ ಬಳಕೆ ಮಾಡಬಹುದು. ಇದೀಗ ಈ ಫೀಚರ್ ಅನ್ನು ವಾಟ್ಸ್​ಆ್ಯಪ್ ತನ್ನ ಟ್ಯಾಬ್ಲೆಟ್ (Tablet) ಬಳಕೆದಾರರಿಗೆ ನೀಡಲು ಮುಂದಾಗಿದೆ.

ಸ್ಪ್ಲಿಟ್ ವ್ಯೂ ಫೀಚರ್ಸ್‌ ಮೂಲಕ ಒಮ್ಮೆಲೆ ಒಂದೇ ಡಿಸ್‌ಪ್ಲೇನಲ್ಲಿ ಎರಡು ಆ್ಯಪ್​ಗಳನ್ನು ತೆರೆಯಲು ಅವಕಾಶ ನೀಡುತ್ತದೆ. ಇದು ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ. ನೀವು ಒಬ್ಬರ ಜೊತೆ ಚಾಟಿಂಗ್​ನಲ್ಲಿ ನಿರತವಾಗುವುದರ ಜೊತೆಗೆ ಇನ್ನೊಂದು ಬದಿಯಲ್ಲಿ ವಾಟ್ಸ್​ಆ್ಯಪ್​ನ ಇತರೆ ಫೀಚರ್ಸ್‌ ಅನ್ನು ಸಹ ಬಳಕೆ ಮಾಡಿಕೊಳ್ಳಬಹುದು. ಸ್ಪ್ಲಿಟ್ ವ್ಯೂ ಆಯ್ಕೆಯನ್ನು ಸದ್ಯಕ್ಕೆ ಪರೀಕ್ಷಿಸಲಾಗುತ್ತಿದ್ದು, ಟ್ಯಾಬ್ಲೆಟ್‌ಗಳಿಗಾಗಿ ಆಂಡ್ರಾಯ್ಡ್ ಬೀಟಾದಲ್ಲಿ ಇದನ್ನು ಹೊರತರಲು ಯೋಜಿಸಲಾಗುತ್ತಿದೆ. WABetaInfo ಈ ಬಗ್ಗೆ ವರದಿ ಮಾಡಿದ್ದು, ಆಂಡ್ರಾಯ್ಡ್ ಟ್ಯಾಬ್ಲೆಟ್ ಬಳಕೆದಾರರು ವಾಟ್ಸ್​ಆ್ಯಪ್​ನ ಸ್ಪ್ಲಿಟ್ ವ್ಯೂ ಫೀಚರ್ಸ್‌ ಅನ್ನು ಬಳಕೆ ಮಾಡಲು ಅನುಮತಿಸಲಾಗುತ್ತದೆ ಎಂದು ಉಲ್ಲೇಖಿಸಿದೆ.

ಈ ಆಯ್ಕೆ ಬಳಕೆದಾರರಿಗೆ ಲಭ್ಯವಾದರೆ ವಾಟ್ಸ್​ಆ್ಯಪ್ ಚಾಟ್‌ನಿಂದ ನಿರ್ಗಮಿಸುವ ಅಗತ್ಯವಿಲ್ಲದೇ ಚಾಟ್‌ ಪಟ್ಟಿಯನ್ನು ತ್ವರಿತವಾಗಿ ಸ್ಕ್ರೋಲ್ ಮಾಡುವ ಮೂಲಕ ಚಾಟ್‌ಗಳನ್ನು ಕಂಟ್ರೋಲ್‌ ಮಾಡಲು ಇದು ಸಹಾಯ ಮಾಡುತ್ತದೆ. ಇದರಿಂದಾಗಿ ಬಳಕೆದಾರರಿಗೆ ಸಮಯದ ವ್ಯರ್ಥವಾಗದೆ ಸುಲಭವಾಗಿ ಹಾಗೂ ವೇಗವಾಗಿ ಬೇಕಾದ ಚಾಟ್​ನಲ್ಲಿ ಸಕ್ರಿಯವಾಗಬಹುದು. ಟ್ಯಾಬ್ಲೆಟ್ ಬಳಿಕ ಈ ಆಯ್ಕೆ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೂ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
iPhone 13 Offer: ಹೋಳಿ ಹಬ್ಬಕ್ಕೆ ಬಂಪರ್ ಆಫರ್: ಐಫೋನ್ ಖರೀದಿಗೆ ಇದಕ್ಕಿಂತ ಒಳ್ಳೆಯ ಸಮಯ ಬರಲ್ಲ
Image
Smartphones: ಹುಬ್ಬೇರಿಸುವಂತಹ ಫೀಚರ್​ಗಳಿದ್ದರೂ ಮಾರುಕಟ್ಟೆಯಲ್ಲಿ ಫೇಲ್ ಆದ ಸ್ಮಾರ್ಟ್​ಫೋನ್​ಗಳು ಯಾವುವು ಗೊತ್ತೇ?
Image
POCO C55: ಕೇವಲ 8,999 ರೂ.: ಕಳೆದ ವಾರ ಬಿಡುಗಡೆ ಆದ ಈ ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್
Image
Amazon, Flipkart Holi sale 2023: ಅಮೆಜಾನ್, ಫ್ಲಿಪ್​ಕಾರ್ಟ್​ನಲ್ಲಿ ಹೋಳಿ ಸೇಲ್: ಅನೇಕ ಪ್ರಾಡಕ್ಟ್ ಮೇಲೆ ಬಂಪರ್ ಡಿಸ್ಕೌಂಟ್

Tech Tips: ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ

ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಶೆಡ್ಯುಲ್‌ ಫೀಚರ್:

ವಾಟ್ಸ್​ಆ್ಯಪ್​ ಇದೀಗ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು.

ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಿ:

ವಾಟ್ಸ್​ಆ್ಯಪ್ ಮತ್ತೊಂದು ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಅದುವೇ ಎಡಿಟ್ ಮೆಸೇಜ್ ಆಯ್ಕೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ನಿಮಗೆ ಸಿಗಲಿದೆ. ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್