WhatsApp: ಒಂದಲ್ಲ, ಎರಡಲ್ಲ … ವಾಟ್ಸ್ಆ್ಯಪ್ನಲ್ಲಿ ಬರುತ್ತಿದೆ ಸಾಲು ಸಾಲು ಹೊಸ ಫೀಚರ್ಗಳು: ಇಲ್ಲಿದೆ ನೋಡಿ
WhatsApp New Features: ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ಪರೀಕ್ಷಾ ಹಂತದಲ್ಲಿದೆ.
ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಕಳೆದ ವರ್ಷದಂತೆ ಈ ವರ್ಷ ಕೂಡ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್ಗಳನ್ನು ಪರಿಚಯಿಸುತ್ತಲೇ ಇದೆ. ಹೀಗಾಗಿಯೇ ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ಪರೀಕ್ಷಾ ಹಂತದಲ್ಲಿದೆ. ಹಾಗಾದರೆ ಕೆಲವೇ ದಿನಗಳಲ್ಲಿ ವಾಟ್ಸ್ಆ್ಯಪ್ನಲ್ಲಿ ಬರಲಿರುವ ನೂತನ ಫೀಚರ್ಗಳು ಯಾವುವು ಎಂಬುದನ್ನು ನೋಡೋಣ.
ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ:
ವಾಟ್ಸ್ಆ್ಯಪ್ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಅಂದರೆ ನೀವು ವಾಟ್ಸ್ಆ್ಯಪ್ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್ಬುಕ್ ಸ್ಟೇಟಸ್ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್ಬುಕ್ ಸ್ಟೇಟಸ್ಗೂ ಅಪ್ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್ಆ್ಯಪ್ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಈಗಾಗಲೇ ಈ ಫೀಚರ್ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.
PM Modi Tim Cook: ಪ್ರಧಾನಿ ಮೋದಿ ಭೇಟಿ ಮಾಡಿದ ಆ್ಯಪಲ್ ಸಿಇಒ ಟಿಮ್ ಕುಕ್
ವಿಡಿಯೋ ಮೆಸೇಜ್:
ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ ಫೀಚರ್ ಅನ್ನು ನೀಡಲಿದೆಯಂತೆ. ವಾಟ್ಸ್ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್ಆ್ಯಪ್ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.
ಚಾಟ್ ಅನ್ನು ಲಾಕ್ ಮಾಡಬಹುದು:
ಇನ್ನು ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು. ವಾಟ್ಸ್ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್ಆ್ಯಪ್ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್ನ ಕಾಂಟೆಕ್ಟ್ ಅಥವಾ ಗ್ರೂಪ್ನ ಇನ್ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್ಗೆ ಹೋಗುತ್ತದೆ.
ಚಾಟ್‌ಜಿಪಿಟಿ ವಿದ್ಯಾರ್ಥಿಗೆ ಯಾವುದೇ ತರಗತಿಗೆ ಹಾಜರಾಗದೆ ಪರೀಕ್ಷೆಯಲ್ಲಿ ಶೇ.94 ಗಳಿಸಲು ಸಹಾಯ ಮಾಡಿದೆ
ಕಳುಹಿಸದ ಮೆಸೇಜ್ ಎಡಿಟ್ ಮಾಡಿ:
ಸಾಮಾನ್ಯವಾಗಿ ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಕೆಲವೇ ದಿನಗಳಲ್ಲಿ ವಾಟ್ಸ್ಆ್ಯಪ್ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್ಆ್ಯಪ್ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್ ಮಾಡಲು ಸಾಧ್ಯವಾಗಿಸುತ್ತದೆ.
ನೂತನ ಡಿಸೈನ್ನಲ್ಲಿ ವಾಟ್ಸ್ಆ್ಯಪ್:
ಈವರೆಗೆ ವಿಶೇಷ ಫೀಚರ್ಗಳನ್ನು ಮಾತ್ರ ಪರಿಚಯಿಸುತ್ತಿದ್ದ ಈ ಮೆಸೇಜಿಂಗ್ ಆ್ಯಪ್ ಇದೀಗ ತನ್ನ ನೋಟವನ್ನು ಬದಲಾಯಿಸಲು ಮುಂದಾಗಿದೆ. ಸದ್ಯದಲ್ಲೇ ವಾಟ್ಸ್ಆ್ಯಪ್ ಹೊಸ ರೂಪದಲ್ಲಿ ಬಳಕೆದಾರರಿಗೆ ಸಿಗಲಿದೆ. ಮೆಟಾ ತನ್ನ ಮೆಸೇಜಿಂಗ್ ಆ್ಯಪ್ ವಾಟ್ಸ್ಆ್ಯಪ್ ಅನ್ನು ಹೊಸ ಸ್ಟೈಲ್ನಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಅಂದರೆ ನೀವು ವಾಟ್ಸ್ಆ್ಯಪ್ ತೆರೆದ ಬಳಿಕ ಸೆಟ್ಟಿಂಗ್ಸ್, ಚಾಟ್ ಲಿಸ್ಟ್ ಹೊಸ ಮಾದರಿಯಲ್ಲಿ ಗೋಚರಿಸಲಿದೆ. ಮೊದಲಿಗೆ ಈ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ನಂತರ ಆಂಡ್ರಾಯ್ಡ್ನಲ್ಲಿ ಬರಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:04 pm, Fri, 21 April 23