WhatsApp: ಒಂದಲ್ಲ, ಎರಡಲ್ಲ … ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಸಾಲು ಸಾಲು ಹೊಸ ಫೀಚರ್​ಗಳು: ಇಲ್ಲಿದೆ ನೋಡಿ

|

Updated on: Apr 21, 2023 | 2:04 PM

WhatsApp New Features: ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ಪರೀಕ್ಷಾ ಹಂತದಲ್ಲಿದೆ.

WhatsApp: ಒಂದಲ್ಲ, ಎರಡಲ್ಲ ... ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಸಾಲು ಸಾಲು ಹೊಸ ಫೀಚರ್​ಗಳು: ಇಲ್ಲಿದೆ ನೋಡಿ
WhatsApp New Feature
Follow us on

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷದಂತೆ ಈ ವರ್ಷ ಕೂಡ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಪರಿಚಯಿಸುತ್ತಲೇ ಇದೆ. ಹೀಗಾಗಿಯೇ ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ಪರೀಕ್ಷಾ ಹಂತದಲ್ಲಿದೆ. ಹಾಗಾದರೆ ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಬರಲಿರುವ ನೂತನ ಫೀಚರ್​ಗಳು ಯಾವುವು ಎಂಬುದನ್ನು ನೋಡೋಣ.

ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ:

ವಾಟ್ಸ್​ಆ್ಯಪ್ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಅಂದರೆ ನೀವು ವಾಟ್ಸ್​ಆ್ಯಪ್​ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್​ಬುಕ್​ ಸ್ಟೇಟಸ್​ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್​ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್​ಆ್ಯಪ್​ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್​ಬುಕ್​ ಸ್ಟೇಟಸ್​ಗೂ ಅಪ್​ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್​ಆ್ಯಪ್​ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್​-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಈಗಾಗಲೇ ಈ ಫೀಚರ್ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.

PM Modi Tim Cook: ಪ್ರಧಾನಿ ಮೋದಿ ಭೇಟಿ ಮಾಡಿದ ಆ್ಯಪಲ್ ಸಿಇಒ ಟಿಮ್ ಕುಕ್

ಇದನ್ನೂ ಓದಿ
Galaxy M14 5G: ಅತಿ ಕಡಿಮೆ ಬೆಲೆಗೆ 5G ಫೋನ್ ಬೇಕೆ?: ಇಂದಿನಿಂದ ಮಾರಾಟ ಕಾಣುತ್ತಿದೆ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌
Twitter Blue Tick: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರ ಟ್ವಿಟ್ಟರ್ ಖಾತೆಯಿಂದ ಬ್ಲೂ ಟಿಕ್ ಮಾಯ
APPLE Store: ದೇಶದ ಮೊದಲ ಮುಂಬೈ ಸ್ಟೋರ್​​ಗೆ ಆ್ಯಪಲ್ ಸಿಇಒ ಟಿಮ್ ಕುಕ್ ಚಾಲನೆ
Tech Tips: ಫೇಸ್​ಬುಕ್​ನಲ್ಲಿರುವ ಫೋಟೋ, ವಿಡಿಯೋಗಳನ್ನು ಗೂಗಲ್ ಫೋಟೋಸ್​ಗೆ ವರ್ಗಾಹಿಸುವುದು ಹೇಗೆ?

ವಿಡಿಯೋ ಮೆಸೇಜ್:

ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ ಫೀಚರ್ ಅನ್ನು ನೀಡಲಿದೆಯಂತೆ. ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

ಚಾಟ್ ಅನ್ನು ಲಾಕ್ ಮಾಡಬಹುದು:

ಇನ್ನು ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು. ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ.

ಚಾಟ್‌ಜಿಪಿಟಿ ವಿದ್ಯಾರ್ಥಿಗೆ ಯಾವುದೇ ತರಗತಿಗೆ ಹಾಜರಾಗದೆ ಪರೀಕ್ಷೆಯಲ್ಲಿ ಶೇ.94 ಗಳಿಸಲು ಸಹಾಯ ಮಾಡಿದೆ

ಕಳುಹಿಸದ ಮೆಸೇಜ್ ಎಡಿಟ್ ಮಾಡಿ:

ಸಾಮಾನ್ಯವಾಗಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ನೂತನ ಡಿಸೈನ್​ನಲ್ಲಿ ವಾಟ್ಸ್​ಆ್ಯಪ್:

ಈವರೆಗೆ ವಿಶೇಷ ಫೀಚರ್​ಗಳನ್ನು ಮಾತ್ರ ಪರಿಚಯಿಸುತ್ತಿದ್ದ ಈ ಮೆಸೇಜಿಂಗ್ ಆ್ಯಪ್ ಇದೀಗ ತನ್ನ ನೋಟವನ್ನು ಬದಲಾಯಿಸಲು ಮುಂದಾಗಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್ ಹೊಸ ರೂಪದಲ್ಲಿ ಬಳಕೆದಾರರಿಗೆ ಸಿಗಲಿದೆ. ಮೆಟಾ ತನ್ನ ಮೆಸೇಜಿಂಗ್ ಆ್ಯಪ್ ವಾಟ್ಸ್​ಆ್ಯಪ್​ ಅನ್ನು ಹೊಸ ಸ್ಟೈಲ್​ನಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಅಂದರೆ ನೀವು ವಾಟ್ಸ್​ಆ್ಯಪ್ ತೆರೆದ ಬಳಿಕ ಸೆಟ್ಟಿಂಗ್ಸ್, ಚಾಟ್ ಲಿಸ್ಟ್​ ಹೊಸ ಮಾದರಿಯಲ್ಲಿ ಗೋಚರಿಸಲಿದೆ. ಮೊದಲಿಗೆ ಈ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ನಂತರ ಆಂಡ್ರಾಯ್ಡ್​ನಲ್ಲಿ ಬರಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Fri, 21 April 23