WhatsApp: ವಾಟ್ಸ್ಆ್ಯಪ್ನಲ್ಲಿ ನಿಮಗೆ ಬೇಕಾದ ಚಾಟ್ ಲಾಕ್ ಮಾಡಬಹುದು, ಹೈಡ್ ಮಾಡಬಹುದು: ಹೇಗೆ ಗೊತ್ತೇ?
WhatsApp New Features: ವಾಟ್ಸ್ಆ್ಯಪ್ ಒಂದು ಘೋಷಣೆ ಮಾಡಿದ್ದು ಸದ್ಯದಲ್ಲೇ ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು ಎಂದು ಹೇಳಿದೆ. ವಾಟ್ಸ್ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್ಆ್ಯಪ್ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ.

ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಕೇವಲ ಭಾರತದಲ್ಲೇ 550 ಮಿಲಿಯನ್ ದಾಟಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್ಆ್ಯಪ್ನಲ್ಲಿ (WhatsApp) ಸಾಲು ಸಾಲು ಫೀಚರ್ಗಳು ಪರೀಕ್ಷಾ ಹಂತದಲ್ಲಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್ಆ್ಯಪ್ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್ಗಳು ಬರಲಿದೆ. ಆಂಡ್ರಾಯ್ಡ್ (Android), ಐಒಎಸ್, ವೆಬ್, ಟ್ಯಾಬ್ಲೆಟ್ ಬಳಕೆದಾರರಿಗೆ ಕೂಡ ಹೊಸ ಅಪ್ಡೇಟ್ ನೀಡುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ ವಾಟ್ಸ್ಆ್ಯಪ್ ಒಂದು ಘೋಷಣೆ ಮಾಡಿದ್ದು ಸದ್ಯದಲ್ಲೇ ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು ಎಂದು ಹೇಳಿದೆ.
ವಾಟ್ಸ್ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್ಆ್ಯಪ್ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್ನ ಕಾಂಟೆಕ್ಟ್ ಅಥವಾ ಗ್ರೂಪ್ನ ಇನ್ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್ಗೆ ಹೋಗುತ್ತದೆ. ಸದ್ಯಕ್ಕೆ ಈ ಫೀಚರ್ಸ್ ಅಭಿವೃದ್ಧಿ ಹಂತದಲ್ಲಿದೆ. ಆಂಡ್ರಾಯ್ಡ್ ಬೀಟಾ ಆವೃತ್ತಿಯ 2.23.8.2 ಅಪ್ಡೇಟ್ನಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರು ಈ ಫೀಚರ್ಸ್ ಅನ್ನು ಬಳಕೆ ಮಾಡಬಹುದು ಎಂದು ತಿಳಿದುಬಂದಿದೆ.
ಐಒಎಸ್ನಲ್ಲಿ ಎಡಿಟ್ ಸೆಂಟ್ ಮೆಸೇಜ್ ಆಯ್ಕೆ:
ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಕೆಲವೇ ದಿನಗಳಲ್ಲಿ ವಾಟ್ಸ್ಆ್ಯಪ್ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್ಆ್ಯಪ್ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್ ಮಾಡಲು ಸಾಧ್ಯವಾಗಿಸುತ್ತದೆ.
ವಾಟ್ಸ್ಆ್ಯಪ್ನಿಂದ ಬರುತ್ತೆ ಮೆಸೇಜ್:
ಬಳಕೆದಾರರಿಗೆ ಬಹಳ ಉಪಯುಕ್ತವಾದ ಫೀಚರ್ ಪರಿಚಯಿಸುವತ್ತ ವಾಟ್ಸ್ಆ್ಯಪ್ ಕೆಲಸ ಮಾಡುತ್ತಿದೆ. ಹೊಸ ಆಯ್ಕೆಯ ಮೂಲಕ ವಾಟ್ಸ್ಆ್ಯಪ್ ನಿಮಗೆ ವಿಶೇಷವಾದ ಮೆಸೇಜ್ಗಳನ್ನು ಕಳುಹಿಸಲಿದೆ. ಅಂದರೆ ವಾಟ್ಸ್ಆ್ಯಪ್ ತನ್ನ ಬಳಕೆದಾರರೊಂದಿಗೆ ಅಧಿಕೃತ ಚಾಟ್ ಅನ್ನು ಪ್ರಾರಂಭಿಸಲಿದೆ. ಅಂದರೆ ನಿಮ್ಮ ಖಾತೆಗೆ ವಾಟ್ಸ್ಆ್ಯಪ್ನಿಂದ ಮೆಸೇಜ್ ಬರಲಿದ್ದು, ಇದರಲ್ಲಿ ಅನೇಕ ಮಾಹಿತಿಗಳನ್ನು ನೀಡಲಾಗುತ್ತದೆ. ಉದಾಹರಣೆಗೆ ಕಂಪನಿ ಮುಂದಿನ ದಿನಗಳಲ್ಲಿ ಪರಿಚಯಿಸಲಿರುವ ಹೊಸ ಅಪ್ಡೇಟ್ ಬಗ್ಗೆ ಅಥವಾ ನೂತನ ಫೀಚರ್ ಕುರಿತು ಮೆಸೇಜ್ ಕಳುಹಿಸಿ ಮಾಹಿತಿ ನೀಡಲಿದೆ. ಇದು ವಾಟ್ಸ್ಆ್ಯಪ್ನ ಅಧಿಕೃತ ಚಾಟ್ ಆಗಿದ್ದು ವೆರಿಫೈ ಮಾರ್ಕ್ ಕೂಡ ಇರಲಿದೆ. ಬಳಕೆದಾರರಿಗೆ ವಾಟ್ಸ್ಆ್ಯಪ್ ಅನ್ನು ಹೇಗೆ ಉಪಯೋಗಿಸ ಬೇಕು ಎಂಬುವುದರಿಂದ ಹಿಡಿದು ಕೆಲ ಟಿಪ್ಸ್ಗಳನ್ನು ಕೂಡ ನೀಡಲಿದೆಯಂತೆ.
Published On - 1:33 pm, Tue, 4 April 23




