WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬೇಕಾದ ಚಾಟ್ ಲಾಕ್ ಮಾಡಬಹುದು, ಹೈಡ್ ಮಾಡಬಹುದು: ಹೇಗೆ ಗೊತ್ತೇ?

|

Updated on: Apr 04, 2023 | 1:33 PM

WhatsApp New Features: ವಾಟ್ಸ್​ಆ್ಯಪ್ ಒಂದು ಘೋಷಣೆ ಮಾಡಿದ್ದು ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು ಎಂದು ಹೇಳಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬೇಕಾದ ಚಾಟ್ ಲಾಕ್ ಮಾಡಬಹುದು, ಹೈಡ್ ಮಾಡಬಹುದು: ಹೇಗೆ ಗೊತ್ತೇ?
WhatsApp
Follow us on

ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಕೇವಲ ಭಾರತದಲ್ಲೇ 550 ಮಿಲಿಯನ್ ದಾಟಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ (WhatsApp) ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್​ಗಳು ಬರಲಿದೆ. ಆಂಡ್ರಾಯ್ಡ್ (Android), ಐಒಎಸ್, ವೆಬ್, ಟ್ಯಾಬ್ಲೆಟ್ ಬಳಕೆದಾರರಿಗೆ ಕೂಡ ಹೊಸ ಅಪ್ಡೇಟ್ ನೀಡುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ ವಾಟ್ಸ್​ಆ್ಯಪ್ ಒಂದು ಘೋಷಣೆ ಮಾಡಿದ್ದು ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು ಎಂದು ಹೇಳಿದೆ.

ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ. ಸದ್ಯಕ್ಕೆ ಈ ಫೀಚರ್ಸ್‌ ಅಭಿವೃದ್ಧಿ ಹಂತದಲ್ಲಿದೆ. ಆಂಡ್ರಾಯ್ಡ್ ಬೀಟಾ ಆವೃತ್ತಿಯ 2.23.8.2 ಅಪ್ಡೇಟ್​ನಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರು ಈ ಫೀಚರ್ಸ್‌ ಅನ್ನು ಬಳಕೆ ಮಾಡಬಹುದು ಎಂದು ತಿಳಿದುಬಂದಿದೆ.

Tech Tips: ಮೊಬೈಲ್​ನಲ್ಲಿ ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್‌ ಸೆಂಡ್ ಮಾಡುವುದು ಹೇಗೆ?

ಇದನ್ನೂ ಓದಿ
WWDC 2023: ಐಫೋನ್​ಗೆ ಹೊಸ iOS ಘೋಷಿಸಲಿದೆ ಆ್ಯಪಲ್
Tecno Phantom V Fold: ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದೆ ಮತ್ತೊಂದು ಫೋಲ್ಡಿಂಗ್ ಫೋನ್
OnePlus Nord CE 3 Lite: ಭಾರತದಲ್ಲಿಂದು 108MP ಕ್ಯಾಮೆರಾದ ಬಹುನಿರೀಕ್ಷಿತ ನಾರ್ಡ್ CE 3 ಲೈಟ್ ಬಿಡುಗಡೆ
Nokia C12 Plus: ಭಾರತದಲ್ಲಿ ಕೇವಲ 7,999 ರೂ. ಗೆ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ನೋಕಿಯಾ: ಭರ್ಜರಿ ಸೇಲ್ ಖಚಿತ

ಐಒಎಸ್​ನಲ್ಲಿ ಎಡಿಟ್ ಸೆಂಟ್ ಮೆಸೇಜ್ ಆಯ್ಕೆ:

ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ವಾಟ್ಸ್​ಆ್ಯಪ್​ನಿಂದ ಬರುತ್ತೆ ಮೆಸೇಜ್:

ಬಳಕೆದಾರರಿಗೆ ಬಹಳ ಉಪಯುಕ್ತವಾದ ಫೀಚರ್ ಪರಿಚಯಿಸುವತ್ತ ವಾಟ್ಸ್​ಆ್ಯಪ್ ಕೆಲಸ ಮಾಡುತ್ತಿದೆ. ಹೊಸ ಆಯ್ಕೆಯ ಮೂಲಕ ವಾಟ್ಸ್​ಆ್ಯಪ್ ನಿಮಗೆ ವಿಶೇಷವಾದ ಮೆಸೇಜ್​ಗಳನ್ನು ಕಳುಹಿಸಲಿದೆ. ಅಂದರೆ ವಾಟ್ಸ್​ಆ್ಯಪ್ ತನ್ನ ಬಳಕೆದಾರರೊಂದಿಗೆ ಅಧಿಕೃತ ಚಾಟ್ ಅನ್ನು ಪ್ರಾರಂಭಿಸಲಿದೆ. ಅಂದರೆ ನಿಮ್ಮ ಖಾತೆಗೆ ವಾಟ್ಸ್​ಆ್ಯಪ್​ನಿಂದ ಮೆಸೇಜ್ ಬರಲಿದ್ದು, ಇದರಲ್ಲಿ ಅನೇಕ ಮಾಹಿತಿಗಳನ್ನು ನೀಡಲಾಗುತ್ತದೆ. ಉದಾಹರಣೆಗೆ ಕಂಪನಿ ಮುಂದಿನ ದಿನಗಳಲ್ಲಿ ಪರಿಚಯಿಸಲಿರುವ ಹೊಸ ಅಪ್ಡೇಟ್ ಬಗ್ಗೆ ಅಥವಾ ನೂತನ ಫೀಚರ್ ಕುರಿತು ಮೆಸೇಜ್ ಕಳುಹಿಸಿ ಮಾಹಿತಿ ನೀಡಲಿದೆ. ಇದು ವಾಟ್ಸ್​ಆ್ಯಪ್​ನ ಅಧಿಕೃತ ಚಾಟ್ ಆಗಿದ್ದು ವೆರಿಫೈ ಮಾರ್ಕ್ ಕೂಡ ಇರಲಿದೆ. ಬಳಕೆದಾರರಿಗೆ ವಾಟ್ಸ್​ಆ್ಯಪ್ ಅನ್ನು ಹೇಗೆ ಉಪಯೋಗಿಸ ಬೇಕು ಎಂಬುವುದರಿಂದ ಹಿಡಿದು ಕೆಲ ಟಿಪ್ಸ್​ಗಳನ್ನು ಕೂಡ ನೀಡಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Tue, 4 April 23