ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ (WhatsApp) ಈಗೀಗ ಹೊಸ ಹೊಸ ಅಪ್ಡೇಟ್ಗಳನ್ನು ನೀಡುತ್ತಿದೆ. 2022 ರಲ್ಲಿ ಬಳಕೆದಾರರಿಗೆ ಉತ್ತಮ ಅನುಭವವನ್ನು ನೀಡಲು ಹೊಸ ಫೀಚರ್ಸ್ ಪರಿಚಯಿಸಲು ವಾಟ್ಸ್ಆ್ಯಪ್ ಮುಂದಾಗಿದೆ ಈಗಾಗಲೇ ಡಾಕ್ಯುಮೆಂಟ್ ಪ್ರೀವ್ಯೂ ಫೀಚರ್, ವಾಟ್ಸ್ಆ್ಯಪ್ ಗ್ರೂಪ್ ಕಾಲ್ನಲ್ಲಿ ವಿಶೇಷ ಆಯ್ಕೆ, ಕವರ್ ಫೋಟೋ ಸೇರಿದಂತೆ ಅನೇಕ ಫೀಚರ್ಸ್ ಪರೀಕ್ಷಾ ಹಂತದಲ್ಲಿದೆ. ಇದೀಗ ಮತ್ತೊಂದು ಹೊಸ ವಾಯ್ಸ್ ನೋಟ್‌ಗಳನ್ನು (Voice Note Feature) ರೆಕಾರ್ಡಿಂಗ್ ಮತ್ತು ಸೆಂಡ್ ಮಾಡುವುದನ್ನು ಇನ್ನಷ್ಟು ಸುಲಭಗೊಳಿಸುವ ಫೀಚರ್ ನೀಡಲು ಕೆಸಲ ಮಾಡುತ್ತಿದೆ. ವಾಯ್ಸ್ ಮೆಸೇಜ್ ಅನ್ನು ವೇಗವಾಗಿ ಕಳುಹಿಸುವುದಕ್ಕೆ ಇದು ಅನುಮತಿಸುತ್ತದೆ. ಈ ಫೀಚರ್ ಮೂಲಕ ನೀವು ಯಾವುದೇ ಮಾಹಿತಿಯನ್ನು ಬೇಕಿದ್ದರೂ ವಾಟ್ಸ್ಆ್ಯಪ್ ವಾಯ್ಸ್ ಮೆಸೇಜ್‌ನಲ್ಲಿ ರೆಕಾರ್ಡ್ ಮಾಡಿ ಕಳುಹಿಸಬಹುದು. ಅಲ್ಲದೆ ವಾಯ್ಸ್ ನೋಟ್ ರೆಕಾರ್ಡಿಂಗ್ ಮಾಡುವಾಗ ಪಾಸ್ ಮಾಡುವ ಮತ್ತು ರಿಸ್ಟಾರ್ಟ್ ಮಾಡುವುದಕ್ಕೆ ಅವಕಾಶ ಸಿಗಲಿದೆ.
ವಾಟ್ಸ್ಆ್ಯಪ್ನ ಈ ಹೊಸ ಫೀಚರ್ಸ್‌ನಲ್ಲಿ ವಾಯ್ಸ್ ನೋಟ್ ರೆಕಾರ್ಡಿಂಗ್ ಅನ್ನು ಪ್ರಾರಂಭಿಸಲು ಮತ್ತು ನೀವು ಕಳುಹಿಸುವ ಮೊದಲು ಅದನ್ನು ಸ್ಟಾಪ್ ಮಾಡಲು ನಿಮಗೆ ಅನುಮತಿಸುತ್ತದೆ. ಬಳಕೆದಾರರು ಬಟನ್ ಅನ್ನು ಹಿಡಿದಿಟ್ಟುಕೊಳ್ಳುವ ಬದಲು ಒಂದು ಕೈಯನ್ನು ಬಳಸದೆಯೇ ರೆಕಾರ್ಡ್ ಬಟನ್ ಅನ್ನು ಲಾಕ್ ಮಾಡಬಹುದು. ಅಲ್ಲದೆ ಯಾವುದೇ ಬಟನ್ ಟ್ಯಾಪ್ ಮಾಡದೆ ಲಾಂಗ್ ಮೆಸೇಜ್‌ಗಳನ್ನು ರೆಕಾರ್ಡ್ ಮಾಡಬಹುದು. ಇದರಿಂದ ವಾಯ್ಸ್ ಮೆಸೇಜ್ ರೆಕಾರ್ಡಿಂಗ್ ಅನ್ನು ವಿರಾಮಗೊಳಿಸಲು ಮತ್ತು ಧ್ವನಿ ರೆಕಾರ್ಡಿಂಗ್‌ಗಳಿಗೆ ಹಿಂತಿರುಗಲು ಈ ಫೀಚರ್ಸ್ ಮುಖ್ಯವಾಗಿದೆ. ಪ್ರಸ್ತುತ ಈ ಫೀಚರ್ಸ್ ಬೀಟಾ ವರ್ಷನ್‌ನಲ್ಲಿ ಲಭ್ಯವಿದೆ. ಸದ್ಯದಲ್ಲೇ ಇದು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯ ಆಗುವ ಸಾಧ್ಯತೆ ಇದೆ.
ಇನ್ನು ಇನ್ಸ್ಟಾಗ್ರಾಮ್, ಫೇಸ್ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್ನಲ್ಲಿ ಇರುವಂತಹ ಜನಪ್ರಿಯ ಆಯ್ಕೆ ಮೆಸೇಜ್ ರಿಯಾಕ್ಷನ್ ಫೀಚರ್ಸ್ ಕೂಡ ಸದ್ಯದಲ್ಲೇ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಇದರ ಜೊತೆಗೆ ವಾಟ್ಸ್ಆ್ಯಪ್ ವೆಬ್ ಬಳಕೆದಾರರಿಗೆ ಈ ಆಯ್ಕೆ ನೀಡಲು ಕಂಪನಿ ಮುಂದಾಗಿದೆ. ವಾಟ್ಸ್ಆ್ಯಪ್ನ ಮೆಸೇಜ್ ರಿಯಾಕ್ಷನ್ ಫೀಚರ್ಸ್ ಎಮೋಜಿ ಐಕಾನ್‌ಗಳೊಂದಿಗೆ ಪ್ರತಿಕ್ರಿಯಿಸಲು ನಿಮಗೆ ಅನುಮತಿಸುತ್ತದೆ. ಇದು ಫೇಸ್‌ಬುಕ್‌ನಲ್ಲಿನ ಪೋಸ್ಟ್‌ಗಳಿಗೆ ನೀವು ಹೇಗೆ ಪ್ರತಿಕ್ರಿಯಿಸುತ್ತಿರೋ ಅದೇ ಮಾದರಿಯಲ್ಲಿ ಇರಲಿದೆ. ಪಾಪ್ ಅಪ್ ಆಗುವ ಯಾವುದೇ ಎಮೋಜಿಗಳಿಂದ ಆಯ್ಕೆ ಮಾಡಬೇಕಾಗುತ್ತದೆ. ನಿಮ್ಮ ಮೆಚ್ಚಿನದನ್ನು ನೀವು ಆಯ್ಕೆ ಮಾಡಿದ ನಂತರ, ನೀವು ಯಾರ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದೀರೋ ಅವರು ಅದೇ ಪ್ರತಿಕ್ರಿಯೆಗೆ ಅಧಿಸೂಚನೆಯನ್ನು ಪಡೆಯುತ್ತೀರಿ.
ವಾಟ್ಸ್ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ನೀವು ಫೇಸ್ಬುಕ್ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್ಆ್ಯಪ್ನಲ್ಲೂ ಸಿಗಲಿದೆ. ವಾಟ್ಸ್ಆ್ಯಪ್ ಬೇಟಾಇನ್ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್ಆ್ಯಪ್ ಪ್ರೊಫೈಲ್ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ. ಅದಕ್ಕೆ ಕ್ಲಿಕ್ ಮಾಡಿ ಹೊಸ ಫೋಟೋ ಅಥವಾ ಕ್ಯಾಮೆರಾ ಮೂಲಕ ಫೋಟೋ ತೆಗೆಯಲು ಅನುಮತಿ ಕೇಳುತ್ತದೆ. ನಿಮಗಿಷ್ಟದ ಫೋಟೋ ಆಯ್ಕೆ ಮಾಡಿ ಕವರ್ ಫೋಟೋ ಸೆಟ್ ಮಾಡಬಹುದಂತೆ.
Realme 9 Series: ರಿಯಲ್ ಮಿಯಿಂದ ಮುಂದಿನ ವಾರ ಭಾರತದಲ್ಲಿ ಬರೋಬ್ಬರಿ 4 ಸ್ಮಾರ್ಟ್ಫೋನ್ ಬಿಡುಗಡೆ: ಯಾವುದೆಲ್ಲ?
Lava X2: ಕೇವಲ 6,599 ರೂ: ಊಹಿಸಲಾಗದಷ್ಟು ಕಡಿಮೆ ಬೆಲೆಗೆ ಬಿಡುಗಡೆ ಆಯಿತು ಹೊಸ ಸ್ಮಾರ್ಟ್ಫೋನ್
Published On - 6:29 am, Sun, 6 March 22