WhatsApp: ವಾಟ್ಸ್​ಆ್ಯಪ್​ನಲ್ಲಿ ಹೊಸ ಫೀಚರ್: ಫೋಟೋ, ವಿಡಿಯೋ ಫಾರ್ವರ್ಡ್ ಮಾಡೋವಾಗ ಸಿಗುತ್ತೆ ಈ ಆಯ್ಕೆ

WhatsApp New Features: ಈಗ ವಾಟ್ಸ್​ಆ್ಯಪ್​ನಲ್ಲಿ ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್​ಗಳನ್ನು ಫಾರ್ವರ್ಡ್ ಮಾಡುವಾಗ ಅದರ ಜೊತೆಗಿದ್ದ ಅಡಿಬರಹ (Caption) ಸೆಂಡು ಆಗುವುದಿಲ್ಲ. ಆದರೆ, ಈ ಆಯ್ಕೆ ಸದ್ಯದಲ್ಲೇ ಬದಲಾಗಲಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಹೊಸ ಫೀಚರ್: ಫೋಟೋ, ವಿಡಿಯೋ ಫಾರ್ವರ್ಡ್ ಮಾಡೋವಾಗ ಸಿಗುತ್ತೆ ಈ ಆಯ್ಕೆ
whatsapp new features
Follow us
| Updated By: Vinay Bhat

Updated on: Oct 28, 2022 | 2:07 PM

ಮಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ಪ್ರತಿ ದಿನ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೆ ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಎರಡು ಗಂಟೆಗಳ ಕಾಲ ವಾಟ್ಸ್​ಆ್ಯಪ್ ಸ್ಥಗಿತಗೊಂಡಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇಲ್ಲವಾದಲ್ಲಿ ಹೊಸ ಹೊಸ ಫೀಚರ್​ಗಳನ್ನು ಪರಿಚಯಿಸುವುದರ ಬಗ್ಗೆ ವಾಟ್ಸ್​ಆ್ಯಪ್​ನಿಂದ (WhatsApp) ಮಾಹಿತಿ ಹರಿದಾಡುತ್ತಿರುತ್ತದೆ. ಇದೀಗ ಅದೇರೀತಿಯ ಸುದ್ದಿಯೊಂದು ಹೊರಬಿದ್ದಿದೆ. ವಾಟ್ಸ್​ಆ್ಯಪ್ ಶೀಘ್ರದಲ್ಲಿ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಅಚ್ಚರಿಯ ಫೀಚರ್ ಅನ್ನು ಪರಿಚಯಿಸುತ್ತಿದೆ. ಈಗ ವಾಟ್ಸ್​ಆ್ಯಪ್​ನಲ್ಲಿ ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್​ಗಳನ್ನು ಫಾರ್ವರ್ಡ್ ಮಾಡುವಾಗ ಅದರ ಜೊತೆಗಿದ್ದ ಅಡಿಬರಹ (Caption) ಸೆಂಡು ಆಗುವುದಿಲ್ಲ. ಆದರೆ, ಈ ಆಯ್ಕೆ ಸದ್ಯದಲ್ಲೇ ಬದಲಾಗಲಿದೆ.

ವಾಟ್ಸ್​ಆ್ಯಪ್​ನಲ್ಲಿ ನಮಗೆ ಬಂದ ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳನ್ನು ಬೇರೆಯವರಿಗೆ ಕಳುಹಿಸುವಾಗ ಅದರ ಜೊತೆಗಿದ್ದ ಕಾಪ್ಷನ್ ಸೆಂಡು ಆಗುವುದಿಲ್ಲ. ಕೇವಲ ಆ ಫೈಲ್ ಮಾತ್ರ ಫಾರ್ವರ್ಡ್ ಆಗುತ್ತದೆ. ಆದರೆ ವಾಟ್ಸ್​ಆ್ಯಪ್ ಈಗ ನೂತನ ಅಪ್ಡೇಟ್ ನೀಡಲು ಸಜ್ಜಾಗಿದ್ದು, ಇದರ ಮೂಲಕ ನೀವು ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳನ್ನು ಫಾರ್ವರ್ಡ್ ಮಾಡುವಾಗ ಅದರ ಜೊತೆಗಿದ್ದ ಅಡಿ ಬರಹ ಕೂಡ ಸೆಂಡ್ ಆಗುತ್ತದೆ. ಸದ್ಯಕ್ಕೆ ಈ ಆಯ್ಕೆ ಕೆಲ ಆಂಡ್ರಾಯ್ಡ್ ಬೀಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

ಅಂತೆಯೆ ವಾಟ್ಸ್​ಆ್ಯಪ್​ನಲ್ಲಿ ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್​ಗಳನ್ನು ಅಡಿ ಬರಹ ನೀಡಿ ಕಳುಹಿಸಬಹುದು ಎಂಬುದು ಗೊತ್ತಿದೆ. ಆದರೆ, ಡಾಕ್ಯುಮೆಂಟ್ ಕಳುಹಿಸುವಾಗ ಈ ಆಯ್ಕೆ ಕಾಣಿಸುವುದಿಲ್ಲ. ಇದೀಗ ವಾಟ್ಸ್​ಆ್ಯಪ್ ತನ್ನ ನೂತನ ಅಪ್ಡೇಟ್​ನಲ್ಲಿ ಡಾಕ್ಯುಮೆಂಟ್ ಕಳುಹಿಸುವಾಗಲೂ ಕಾಪ್ಷನ್ ಆಯ್ಕೆ ನೀಡಲಿದೆ. ಈ ಮೂಲಕ ಕಳುಹಿಸಿದ ಅಥವಾ ರಿಸೀವ್ ಮಾಡಿಕೊಂಡ ಡಾಕ್ಯುಮೆಂಟ್ ಅನ್ನು ಸರ್ಚ್ ಮಾಡುವ ಮೂಲಕ ಪಡೆದುಕೊಳ್ಳಲು ಇದು ಸಹಾಯ ಮಾಡುತ್ತದೆ.

ಇನ್ನು ವಾಟ್ಸ್​ಆ್ಯಪ್ ತನ್ನ ಡೆಸ್ಕ್​ಟಾಪ್ ಬಳಕೆದಾರರಿಗಾಗಿ ಚಾಟ್​ನಲ್ಲಿ ಫೋಟೋವನ್ನು ಬ್ಲರ್ ಮಾಡಲು ಇಮೇಜ್ ಬ್ಲರ್ ಎಂಬ ವಿಶೇಷ ಟೂಲ್ ನೀಡುವ ಕೆಲಸದಲ್ಲಿ ಬ್ಯುಸಿಯಾಗಿದೆ. ವಾಟ್ಸ್​ಆ್ಯಪ್ ಡೆಸ್ಕ್​ಟಾಪ್ ಬೀಟಾದಲ್ಲಿ ಇದು ಕಂಡುಬಂದಿದ್ದು, ಸೂಕ್ಷವಾದ ವಿಚಾರಗಳಲ್ಲಿ, ಫೋಟೋವನ್ನು ಬ್ಲರ್ ಮಾಡಲು ಈ ಟೂಲ್ ಸಹಾಯ ಮಾಡಲಿದೆ. ಇದರಲ್ಲಿ ಬ್ಲರ್ ಸೈಜ್, ಎಫೆಕ್ಟ್ ಕೂಡ ಇರಲಿದೆ ಎಂದು ಹೇಳಲಾಗಿದೆ. ಈ ಮೂಲಕ ಅತಿ ಸೂಕ್ಷವಾದ ವಿಚಾರವನ್ನು ನೀವು ವಾಟ್ಸ್​ಆ್ಯಪ್​ನಲ್ಲಿ ಇತರರಿಗೆ ಕಳುಹಿಸುವಾಗ ಬ್ಲರ್ ಮಾಡಿ ಸೆಂಡು ಮಾಡಬಹುದು.

ಇಷ್ಟೇ ಅಲ್ಲದೆ ವಾಟ್ಸ್​ಆ್ಯಪ್ ತನ್ನ ಮುಂದಿನ ಅಪ್ಡೇಟ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಆಯ್ಕೆ ನೀಡಲಿದೆ. ಈ ಬಗ್ಗೆ ವಾಬೇಟಾಇನ್​ಫೊ ವರದಿ ಮಾಡಿದ್ದು, ವಾಟ್ಸ್​ಆ್ಯಪ್ ಸದ್ಯದಲ್ಲೇ ಎಡಿಟ್ ಮೆಸೇಜ್ ಆಯ್ಕೆಯನ್ನು ನೀಡಲಿದೆ ಎಂದು ಹೇಳಿದೆ. ಬಳಕೆದಾರರು ಇತರರಿಗೆ ಮೆಸೇಜ್ ಮಾಡುವ ಸಂದರ್ಭ ಅಕ್ಷರ ತಪ್ಪಿ ಸೆಂಡ್ ಮಾಡಿದ್ದರೆ ಪುನಃ ಅದನ್ನು ಸರಿಗೊಳಿಸಲು ಇದು ಸಹಕಾರಿ ಮಾಡಲಿದೆ. ಸದ್ಯಕ್ಕೆ ಈ ಆಯ್ಕೆ ಆಂಡ್ರಾಯ್ಡ್ ಬೇಟಾ ವರ್ಷನ್​ನಲ್ಲಿ ಲಭ್ಯವಿದೆ. ಈಗಾಗಲೇ ಇರುವ ಡಿಲೀಟ್ ಫಾರ್ ಎವರಿವನ್ ಆಯ್ಕೆ ಸಂಪೂರ್ಣ ಮೆಸೇಜ್ ಅನ್ನು ಡಿಲೀಟ್ ಮಾಡುತ್ತದೆ. ಆದರೆ, ಈ ಎಡಿಟ್ ಆಯ್ಕೆಯಲ್ಲಿ ಮೆಸೇಜ್ ಅನ್ನು ಡಿಲೀಟ್ ಮಾಡುವ ಬದಲು ಅಕ್ಷರವನ್ನು ಸರಿಪಡಿಸುವುದಾಗಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ