WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಶಾರ್ಟ್ ವಿಡಿಯೋ: ಹೊಸ ಫೀಚರ್ ಕೇಳಿ ದಂಗಾದ ಬಳಕೆದಾರರು

|

Updated on: Apr 29, 2023 | 6:39 PM

WhatsApp Video Message: ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋವನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ವಾಟ್ಸ್​ಆ್ಯಪ್ ಅಭಿವೃದ್ದಿ ಪಡಿಸುತ್ತಿದೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಶಾರ್ಟ್ ವಿಡಿಯೋ: ಹೊಸ ಫೀಚರ್ ಕೇಳಿ ದಂಗಾದ ಬಳಕೆದಾರರು
WhatsApp
Follow us on

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ವಾರಕ್ಕೊಂದು ಹೊಸ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ವಿಶೇಷ ಆಯ್ಕೆಗಳನ್ನು ನೀಡುತ್ತಿದೆ. ಈಗಾಗಲೇ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದ್ದು, ಪರೀಕ್ಷಾ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್ (WhatsApp) ನೂತನ ಡಿಸೈನ್​ನಲ್ಲಿ ಕೂಡ ಕಾಣಿಸಿಕೊಳ್ಳಲಿದೆ. ಇದೀಗ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ವರದಿ ಆಗಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ (Video Message) ಫೀಚರ್ ಅನ್ನು ನೀಡಲಿದೆ.

ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋವನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

Infinix Smart 7 HD: ಭಾರತದಲ್ಲಿ ಕೇವಲ 5,999 ರೂ. ಗೆ ಹೊಸ ಫೋನ್ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರಂಟಿ

ಇದನ್ನೂ ಓದಿ
Airtel 5G: ಹಳ್ಳಿ ಹಳ್ಳಿಗಳಲ್ಲೂ 5G: ಈಗ ಭಾರತದ 3000 ನಗರಗಳಲ್ಲಿ ಏರ್ಟೆಲ್ 5G ಸೇವೆ ಲಭ್ಯ
ANI Twitter Block: ಎಎನ್​​​ಐ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್​ ಕೊಟ್ಟ ಕಾರಣ ಹೀಗಿದೆ
Galaxy S21 FE: ಧಮಾಕ ಆಫರ್: 74,999 ರೂ. ಇರುವ ಗ್ಯಾಲಕ್ಸಿ S21 FE 5G ಸ್ಮಾರ್ಟ್​ಫೋನನ್ನು ಅತಿ ಕಡಿಮೆ ಬೆಲೆಗೆ ಖರೀದಿಸಿ
Tech Tips: ಬಿಸಿಲ ಬೇಗೆಗೆ ಬಾಂಬ್​ನಂತೆ ಸಿಡಿಯುತ್ತಿದೆ ಮೊಬೈಲ್​ಗಳು: ನಿರ್ಲಕ್ಷಿಸದೆ ಸ್ಮಾರ್ಟ್​ಫೋನನ್ನು ಹೀಗೆ ಮಾಡಿ

ವಿಡಿಯೋ ಮೆಸೇಜ್ ಫೀಚರ್ ಎಂಡ್-ಟು-ಎಂಡು ಎನ್ಕ್ರಿಪ್ಟೆಡ್ ಆಗಿದೆ. ಬಳಕೆದಾರ ರಿಸೀಸ್ ಮಾಡಿಕೊಂಡ ವಿಡಿಯೋ ಮೆಸೇಜ್ ಅನ್ನು ಫಾರ್ವಡ್ ಮಾಡಲು ಸಾಧ್ಯವಿಲ್ಲ. ಹಾಗೆಯೆ ಇದು ಗ್ಯಾಲರಿಯಲ್ಲಿ ಸೇವ್ ಆಗುವುದಿಲ್ಲ. ನಿಮಗೆ ಆ ವಿಡಿಯೋ ಬೇಕಿದ್ದಲ್ಲಿ ಸ್ಕ್ರೀನ್ ರೆಕಾರ್ಡ್ ಆಯ್ಕೆಯ ಮೂಲಕ ಸೇವ್ ಮಾಡಿಕೊಳ್ಳಬಹುದು. ಇದು ವೀವ್ ಒನ್ಸ್ ಮೋಡ್ ಆಯ್ಕೆಯನ್ನು ಹೊಂದಿಲ್ಲ. ಸದ್ಯಕ್ಕೆ ಈ ಆಯ್ಕೆ ಪರೀಕ್ಷಾ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ವಿಡಿಯೋ ಮೆಸೇಜ್ ಆಯ್ಕೆ ಸಿಗಲಿದೆಯಂತೆ.

ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ನೋಟವನ್ನು ಬದಲಾಯಿಸಲು ಮುಂದಾಗಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್ ಹೊಸ ಸ್ಟೈಲ್​ನಲ್ಲಿ ಬಿಡುಗಡೆ ಆಗಲಿದೆ. ಅಂದರೆ ನೀವು ವಾಟ್ಸ್​ಆ್ಯಪ್ ತೆರೆದ ಬಳಿಕ ಸೆಟ್ಟಿಂಗ್ಸ್, ಚಾಟ್ ಲಿಸ್ಟ್​ ಹೊಸ ಮಾದರಿಯಲ್ಲಿ ಗೋಚರಿಸಲಿದೆ. ಮೊದಲಿಗೆ ಈ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ನಂತರ ಆಂಡ್ರಾಯ್ಡ್​ನಲ್ಲಿ ಬರಲಿದೆ.

ಇನ್ನು ವಾಟ್ಸ್​ಆ್ಯಪ್ ಕೆಲವೇ ದಿನಗಳಲ್ಲಿ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಲಿದೆ. ನೀವು ವಾಟ್ಸ್​ಆ್ಯಪ್​ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್​ಬುಕ್​ ಸ್ಟೇಟಸ್​ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್​ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್​ಆ್ಯಪ್​ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್​ಬುಕ್​ ಸ್ಟೇಟಸ್​ಗೂ ಅಪ್​ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್​ಆ್ಯಪ್​ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್​-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸದ್ಯದಲ್ಲೇ ಈ ಆಯ್ಕೆ ಸಿಗಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sat, 29 April 23