WhatsApp: ವಾಟ್ಸ್​ಆ್ಯಪ್​ನ ಈ ಹೊಸ ಫೀಚರ್​ಗಾಗಿ ಕಾದು ಕುಳಿತ ಬಳಕೆದಾರರು: ಬರುತ್ತಿದೆ ಬಹುಬೇಡಿಕೆಯ ಆಯ್ಕೆ

WhatsApp New Features: ವಾಟ್ಸ್​ಆ್ಯಪ್​ನಲ್ಲಿ ಈ ತಿಂಗಳು ಕೂಡ 4 ರಿಂದ 5 ಹೊಸ ಫೀಚರ್​ಗಳು ಬರಲಿಕ್ಕಿವೆ. ಬಳಕೆದಾರರಂತು ಈ ಆಯ್ಕೆಗಾಗಿ ಕಾದು ಕುಳಿತಿದ್ದಾರೆ. ಹಾಗಾದರೆ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಆಗಬಹುದಾದ ಪ್ರಮುಖ ಫೀಚರ್​​ಗಳು ಯಾವುವು ಎಂಬುದನ್ನು ನೋಡೋಣ.

WhatsApp: ವಾಟ್ಸ್​ಆ್ಯಪ್​ನ ಈ ಹೊಸ ಫೀಚರ್​ಗಾಗಿ ಕಾದು ಕುಳಿತ ಬಳಕೆದಾರರು: ಬರುತ್ತಿದೆ ಬಹುಬೇಡಿಕೆಯ ಆಯ್ಕೆ
WhatsApp
Follow us
TV9 Web
| Updated By: Vinay Bhat

Updated on: Feb 07, 2023 | 12:21 PM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷದಂತೆ ಈ ವರ್ಷ ಕೂಡ ಅನೇಕ ನೂತನ ಆಯ್ಕೆಗಳನ್ನು ಪರಿಚಯಿಸಲು ಶುರು ಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. 2023 ವರ್ಷದ ಮೊದಲ ತಿಂಗಳಲ್ಲೇ ಕೆಲ ಅಪ್ಡೇಟ್​ಗಳನ್ನು ನೀಡಿರುವ ವಾಟ್ಸ್​ಆ್ಯಪ್​ನಲ್ಲಿ ಈ ತಿಂಗಳು ಕೂಡ 4 ರಿಂದ 5 ಹೊಸ ಫೀಚರ್​ಗಳು ಬರಲಿಕ್ಕಿವೆ. ಬಳಕೆದಾರರಂತು ಈ ಆಯ್ಕೆಗಾಗಿ ಕಾದು ಕುಳಿತಿದ್ದಾರೆ. ಹಾಗಾದರೆ ಫೆಬ್ರವರಿ (February) ತಿಂಗಳಲ್ಲಿ ಬಿಡುಗಡೆ ಆಗಬಹುದಾದ ಪ್ರಮುಖ ಫೀಚರ್​​ಗಳು ಯಾವುವು ಎಂಬುದನ್ನು ನೋಡೋಣ.

ಟೆಕ್ಸ್ಟ್ ಎಡಿಟರ್ ಫೀಚರ್ಸ್‌:

ಡ್ರಾಯಿಂಗ್ ಎಡಿಟರ್‌ ಮೂಲಕ ಹೊಸ ಸೌಲಭ್ಯಗಳನ್ನು ಕಲ್ಪಿಸಲು ವಾಟ್ಸ್​ಆ್ಯಪ್ ಮುಂದಾಗಿದೆ. ಈ ಡ್ರಾಯಿಂಗ್ ಎಡಿಟರ್ ಅಡಿಯಲ್ಲಿ ಮೂರು ಹೊಸ ಫೀಚರ್​ಗಳನ್ನು ಕಂಪನಿ ಪರಿಚಯಿಸುತ್ತಿದೆ. ಮೊದಲನೆಯದಾಗಿ ವಾಟ್ಸ್​ಆ್ಯಪ್​ನಲ್ಲಿ ಪಠ್ಯದ ಶೈಲಿ ಸಂಪೂರ್ಣ ಬದಲಾವಣೆ ಆಗಲಿದೆ. ಇದು ಟೆಕ್ಸ್ಟ್ ಎಡಿಟರ್ ಫೀಚರ್ಸ್‌ ಆಗಿದ್ದು ಕೀಬೋರ್ಡ್ ಮೇಲೆ ಪ್ರದರ್ಶಿಸಲಾದ ಫಾಂಟ್ ಆಯ್ಕೆಗಳಲ್ಲಿ ಒಂದನ್ನು ಟ್ಯಾಪ್ ಮಾಡುವ ಮೂಲಕ ವಿವಿಧ ಫಾಂಟ್‌ಗಳನ್ನು ತ್ವರಿತವಾಗಿ ಬದಲಾಯಿಸುವ ಆಯ್ಕೆಯನ್ನು ಬಳಕೆದಾರರಿಗೆ ನೀಡಲಾಗುತ್ತದೆ. ಎರಡನೆಯದಾಗಿ ಪಠ್ಯ ಜೋಡಣೆ ಎಂಬ ಆಯ್ಕೆ ನೀಡುತ್ತಿದ್ದು ಇದರ ಸಹಾಯದಿಂದ ಬಳಕೆದಾರರು ಪಠ್ಯವನ್ನು ಎಡ, ಮಧ್ಯ ಅಥವಾ ಬಲಕ್ಕೆ ಸುಲಭವಾಗಿ ಇರಿಸಲು ಸಾಧ್ಯವಾಗುತ್ತದೆ.

ಕೊನೆಯದಾಗಿ ಪಠ್ಯದ ಹಿನ್ನೆಲೆ ಬಣ್ಣ ಬದಲಾವಣೆ ಮಾಡುವ ಆಯ್ಕೆ. ಇದು ಬಳಕೆದಾರರಿಗೆ ಸುಲಭವಾಗಿ ಪಠ್ಯದ ಹಿನ್ನೆಲೆ ಬಣ್ಣವನ್ನು ಬದಲಾಯಿಸುವಲ್ಲಿ ಸಹಕಾರ ನೀಡುವುದರ ಜೊತೆಗೆ ಪಠ್ಯವನ್ನು ಪ್ರತ್ಯೇಕಿಸಲು ಸುಲಭವಾಗಿ ಸಹಾಯ ಮಾಡಲಿದೆ. ಈಗಾಗಲೇ ಈ ಎಲ್ಲ ಆಯ್ಕೆ ಬೀಟಾ ಬಳಕೆದಾರರಿಗೆ ಲಭ್ಯವಿದೆ. ಸದ್ಯದಲ್ಲೇ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
Poco X5 Pro: ಭಾರತಕ್ಕೆ ಬಂತು 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?
Image
Food order on WhatsApp: ಹೊಸ ಸೇವೆ ಪ್ರಾರಂಭಿಸಿದ ರೈಲ್ವೆ, WhatsAppನಲ್ಲಿ ಫುಡ್ ಆರ್ಡರ್ ಮಾಡಿ
Image
Best Smartphones: 15,000 ರೂ. ಒಳಗೆ ಸಿಗುತ್ತಿರುವ ಆಕರ್ಷಕ ಕ್ಯಾಮೆರಾದ ಬೆಸ್ಟ್ 5 ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ
Image
Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಸ್ಯಾಮ್​ಸಂಗ್​ನ ಈ ಫೋನನ್ನು ಕೇವಲ 16,999 ರೂ. ಗೆ ಖರೀದಿಸಿ

Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಸ್ಯಾಮ್​ಸಂಗ್​ನ ಈ ಫೋನನ್ನು ಕೇವಲ 16,999 ರೂ. ಗೆ ಖರೀದಿಸಿ

ಒರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸಿ:

ವಾಟ್ಸ್​ಆ್ಯಪ್​ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿ ಸಿಗುವುದಿಲ್ಲ. ತನ್ನ ನೈಜ್ಯ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಇದಕ್ಕಾಗಿ ವಾಟ್ಸ್​ಆ್ಯಪ್​ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲ ಗುಣಮಟ್ಟದ ಫೋಟೋಗಳನ್ನು ಸೆಂಡ್‌ ಮಾಡಲು ಅನುಮತಿಸುವ ಹೊಸ ಫೀಚರ್ಸ್‌ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ.

ವಾಟ್ಸ್​ಆ್ಯಪ್​ಪರಿಚಯಿಸಲಿರುವ ಹೊಸ ಫೀಚರ್ಸ್‌ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್‌ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು. ಇದರಿಂದ ನಿಮ್ಮ ಫೋಟೋದ ಒರಿಜಿನಲ್ ಕ್ವಾಲಿಟಿಯಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ಸೆಂಡ್‌ ಮಾಡುತ್ತದೆ. ಸದ್ಯ ಆಂಡ್ರಾಯ್ಡ್‌ ಬೇಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿದ್ದು ಆದಷ್ಟು ಬೇಗ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ.

ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್:

ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಈಗಾಗಲೇ ಇದು ಆಂಡ್ರಾಯ್ಡ್ ಬೇಟಾ ವರ್ಷನ್​ನಲ್ಲಿ ಲಭ್ಯವಾಗಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್​ಕ್ರಿಪ್ಟೆಡ್ ಆಗಿದೆ.

ಐದು ಚಾಟ್‌ ಪಿನ್‌ ಮಾಡುಬಹುದು:

ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡುವಂತಹ ಆಯ್ಕೆ ನೀಡಲು ಮುಂದಾಗಿದೆ. ಈ ಫೀಚರ್ ಮೂಲಕ ನೀವು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಚಾಟ್‌ ಮಾಡುವ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡಬಹುದಾಗಿದೆ. ಈ ಚಾಟ್‌ಗಳು ನಿಮ್ಮ ವಾಟ್ಸ್​ಆ್ಯಪ್ ಚಾಟ್‌ನ ಮೇಲ್ಭಾಗದಲ್ಲಿ ಗೋಚರಿಸುತ್ತದೆ. ಸದ್ಯದಲ್ಲೇ ಈ ಆಯ್ಕೆ ಆಂಡ್ರಾಯ್ಡ್, ಐಒಎಸ್ ಮತ್ತು ವೆಬ್ ಬಳಕೆದಾರರಿಗೆ ಸಿಗಲಿದೆಯಂತೆ. ಸದ್ಯ ಈ ಹೊಸ ಫೀಚರ್ಸ್‌ ಬಗ್ಗೆ ವಾಬೇಟಾಇನ್ಫೋ ವೆಬ್‌ಸೈಟ್‌ ವರದಿ ಮಾಡಿದೆ. ಪ್ರಸ್ತುತ, ವಾಟ್ಸ್​ಆ್ಯಪ್ ಬಳಕೆದಾರರು ತಮ್ಮ ಚಾಟ್‌ ವಿಂಡೋದ ಮೇಲೆ ಕೇವಲ ಮೂರು ಚಾಟ್‌ಗಳನ್ನು ಮಾತ್ರ ಪಿನ್ ಮಾಡಬಹುದು. ಆದರೆ ಹೊಸ ಆಯ್ಕೆಯಲ್ಲಿ ನೀವು ಐದು ಚಾಟ್‌ಗಳನ್ನು ಪಿನ್‌ ಮಾಡುವುದಕ್ಕೆ ಅವಕಾಶ ಸಿಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್