WhatsApp: ವಾಟ್ಸ್ಆ್ಯಪ್ ಗ್ರೂಪ್‌ಗೆ ಎಷ್ಟು ಮಂದಿಯನ್ನು ಆ್ಯಡ್ ಮಾಡಬಹುದು?: ಬರುತ್ತಿದೆ ಅಚ್ಚರಿಯ ಆಯ್ಕೆ
WhatsApp New Feature: ಇದೀಗ ವಾಟ್ಸ್ಆ್ಯಪ್ ಗ್ರೂಪ್ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಆಯ್ಕೆಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಾಟ್ಸ್ಆ್ಯಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಗ್ರೂಪ್ ಸದಸ್ಯರ ಸಂಖ್ಯೆ ಹೆಚ್ಚಿಸಲಿದೆ ಎಂದು ವರದಿಯಾಗಿದೆ.
ಮೆಟಾ ಮಾಲೀಕತ್ವದ ಜನಪ್ರಿಯ ಮೆಸೆಜಿಂಗ್ ಆ್ಯಪ್ ವಾಟ್ಸ್ಆ್ಯಪ್ (WhatsApp) ಅತೀ ಹೆಚ್ಚಿನ ಸಕ್ರಿಯ ಬಳಕೆದಾರರನ್ನು ಹೊಂದಿದೆ. ಈ ವರ್ಷ ಮೆಸೇಜ್ಗೆ ಎಮೋಜಿ ರಿಯಾಕ್ಷನ್ನಿಂದ ಹಿಡಿದು ಮೆಸೇಜ್ ಡಿಲೀಟ್ ಮಾಡುವ ಸಮಯವನ್ನು ಹೆಚ್ಚಿಸಿ ಇನ್ನು ಕೆಲವೇ ದಿನಗಳಲ್ಲಿ ಲಾಗೌಟ್ ಆಯ್ಕೆ, ಗ್ರೂಪ್ ಅಡ್ಮಿನ್ಗೆ (Admin) ಮೆಸೇಜ್ ಡಿಲೀಟ್ ಮಾಡುವ ಆಯ್ಕೆ, ಕಳುಹಿಸಿದ ಮೆಸೇಜ್ ಎಡಿಟ್ ಮಾಡುವ ಆಯ್ಕೆ ಹೀಗೆ ಅನೇಕ ಫೀಚರ್ಗಳನ್ನು ಪರಿಚಯಿಸಲು ಮುಂದಾಗಿದೆ. ಯಾವುದೇ ಮಾಹಿತಿಯನ್ನು ಹಲವು ಮಂದಿಯೊಂದಿಗೆ ಹಂಚಿಕೊಳ್ಳಬೇಕು ಎಂಬ ಸಂದರ್ಭದಲ್ಲಿ ವಾಟ್ಸ್ಆ್ಯಪ್ ಗ್ರೂಪ್ (WhatsApp Group) ಚಾಟ್ ಫೀಚರ್ ಬಹಳ ಪ್ರಯೋಜನಕಾರಿಯಾಗಿದೆ. ಅಥವಾ ಯಾವುದೇ ಒಂದು ವಿಚಾರದ ಬಗ್ಗೆ ಸ್ನೇಹಿತರ ಜೊತೆಗೆ, ಕುಟುಂಬದ ಜೊತೆಗೆ, ಬ್ಯುಸಿನೆಸ್ ಸಹದ್ಯೋಗಿಗಳ ಜೊತೆಗೆ, ಸಹಪಾಠಿಗಳ ಜೊತೆಗೆ ಚರ್ಚಿಸುವುದಕ್ಕೆ ಗ್ರೂಪ್ ಅನುಕೂಲಕರವಾಗಿದೆ.
ಇದೀಗ ವಾಟ್ಸ್ಆ್ಯಪ್ ಗ್ರೂಪ್ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಆಯ್ಕೆಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಾಟ್ಸ್ಆ್ಯಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಗ್ರೂಪ್ ಸದಸ್ಯರ ಸಂಖ್ಯೆ ಹೆಚ್ಚಿಸಲಿದೆ ಎಂದು ವರದಿಯಾಗಿದೆ.
ಆರಂಭದಲ್ಲಿ ವಾಟ್ಸ್ಆ್ಯಪ್ ಗ್ರೂಪ್‌ಗೆ 256 ಸದಸ್ಯರನ್ನು ಸೇರಿಸಲು ಅವಕಾಶ ಇತ್ತು. ಬಳಿಕ ಆ ಸಂಖ್ಯೆಯನ್ನು 512 ಕ್ಕೆ ಹೆಚ್ಚಿಸಿತ್ತು. ಈಗ ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲು ಮುಂದಾಗಿದೆ. WaBetaInfo ನ ವರದಿಯ ಪ್ರಕಾರ, ವಾಟ್ಸ್ಆ್ಯಪ್ ಗ್ರೂಪ್ ರಚನೆಯ ಸದಸ್ಯರ ಮಿತಿಯನ್ನು 1024 ಗೆ ಹೆಚ್ಚಿಸಲು ಕೆಲಸ ಮಾಡುತ್ತಿದೆ. ಈ ಆಯ್ಕೆಯು ಪ್ರಸ್ತುತ ಆಯ್ದ ಬೀಟಾ ಬಳಕೆದಾರರಿಗೆ ಸೀಮಿತವಾಗಿದೆ ಎಂದು ಹೇಳಲಾಗಿದೆ. ಆದಷ್ಟು ಬೇಗ ಈ ನೂತನ ಫೀಚರ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.
ಕಳೆದ ವಾರವಷ್ಟೆ ವಾಟ್ಸ್ಆ್ಯಪ್ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ಅನುಕೂಲವಾಗುವ ಪ್ರೈವೆಸಿ ಫೀಚರ್ಸ್ ಅನ್ನು ಪರಿಚಯಿಸಿತ್ತು. ಈ ಫೀಚರ್ಸ್ ಮೂಲಕ ವಾಟ್ಸ್ಆ್ಯಪ್ ಚಾಟ್‌ಗಳಲ್ಲಿ ನೀವು ನಿಮ್ಮ ಆನ್‌ಲೈನ್ ಸ್ಟೇಟಸ್ ಅನ್ನು ಹೈಡ್ ಮಾಡಬಹುದು. ಈ ಆಯ್ಕೆಯನ್ನು ಆ್ಯಕ್ಟಿವ್ ಮಾಡಲು ಮೊದಲಿಗೆ ವಾಟ್ಸ್ಆ್ಯಪ್ ಅಪ್ಲಿಕೇಶನ್ ತೆರೆಯಿರಿ. ಮೇಲಿನ ಬಲ ಮೂಲೆಯಲ್ಲಿರುವ ಮೂರು-ಚುಕ್ಕೆಗಳ ಐಕಾನ್ ಮೇಲೆ ಟ್ಯಾಪ್ ಮಾಡಿರಿ. ನಂತರ ಸೆಟ್ಟಿಂಗ್ಸ್ >ಅಕೌಂಟ್> ಪ್ರೈವೆಸಿ ಆಯ್ಕೆಯನ್ನು ಟ್ಯಾಪ್ ಮಾಡಿರಿ. ಇದರಲ್ಲಿ ನಿಮಗೆ ಲಾಸ್ಟ್ ಸೀನ್ ಆಂಡ್ ಆನ್‌ಲೈನ್ ಫೀಚರ್ಸ್ ಕಾಣಲಿದೆ. ಇದರ ಮೇಲೆ ಟ್ಯಾಪ್ ಮಾಡಿ ನಂತರ Nobody ಮತ್ತು Same as last seen” ಆಯ್ಕೆಯನ್ನು ಆರಿಸಿ. ಇದರಲ್ಲಿ ನೀವು ಯಾರೂ ಇಲ್ಲ ಅನ್ನು ಟ್ಯಾಪ್ ಮಾಡಿದಾಗ, ನೀವು ಪ್ರತಿಯೊಬ್ಬರಿಂದ ಆನ್‌ಲೈನ್ ಸ್ಟೇಟಸ್ ಅನ್ನು ಹೈಡ್ ಮಾಡಲು ಸಾಧ್ಯವಾಗಲಿದೆ.
ಇದರ ಜೊತೆಗೆ ಎಡಿಟ್ ಆಯ್ಕೆ ಪರಿಚಯಿಸುವ ಬಗ್ಗೆ ವರದಿಯಾಗಿದೆ. ಅಂದರೆ ನೀವು ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಈ ಬಗ್ಗೆ ವಾಬೇಟಾಇನ್ಫೊ ವರದಿ ಮಾಡಿದ್ದು, ವಾಟ್ಸ್ಆ್ಯಪ್ ಸದ್ಯದಲ್ಲೇ ಎಡಿಟ್ ಮೆಸೇಜ್ ಆಯ್ಕೆಯನ್ನು ನೀಡಲಿದೆ ಎಂದು ಹೇಳಿದೆ. ಈ ಆಯ್ಕೆಯನ್ನು ಬಳಸಿಕೊಂಡು ಬಳಕೆದಾರರು ಇತರರಿಗೆ ಮೆಸೇಜ್ ಮಾಡುವ ಸಂದರ್ಭ ಅಕ್ಷರ ತಪ್ಪಿ ಸೆಂಡ್ ಮಾಡಿದ್ದರೆ ಪುನಃ ಅದನ್ನು ಸರಿಗೊಳಿಸಬಹುದು. ಸದ್ಯಕ್ಕೆ ಈ ಇದು ಆಂಡ್ರಾಯ್ಡ್ ಬೇಟಾ ವರ್ಷನ್ನಲ್ಲಿ ಲಭ್ಯವಿದೆ. ಈಗಾಗಲೇ ಇರುವ ಡಿಲೀಟ್ ಫಾರ್ ಎವರಿವನ್ ಆಯ್ಕೆ ಸಂಪೂರ್ಣ ಮೆಸೇಜ್ ಅನ್ನು ಡಿಲೀಟ್ ಮಾಡುತ್ತದೆ. ಆದರೆ, ಈ ಎಡಿಟ್ ಆಯ್ಕೆಯಲ್ಲಿ ಮೆಸೇಜ್ ಅನ್ನು ಡಿಲೀಟ್ ಮಾಡುವ ಬದಲು ಅಕ್ಷರವನ್ನು ಸರಿಪಡಿಸುವುದಾಗಿದೆ.
Published On - 2:51 pm, Tue, 11 October 22