WhatsApp New Feature: ಮೆಟಾದಿಂದ ಮಹತ್ವದ ನಿರ್ಧಾರ: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ

Spam and Scam Call: ವರ್ಕ್ ಫ್ರಮ್ ಹೋಮ್​ನಿಂದ ಲಕ್ಷ, ಲಕ್ಷ ಗಳಿಸಿ, ಉಚಿತ ಇಂಟರ್ನೆಟ್ ಸಂಪರ್ಕ ಸೇರಿದಂತೆ ಹಲವು ಸುಳ್ಳು ಮೆಸೇಜ್, ಕಾಲ್​ಗಳು ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ. ಆದರೀಗ ಮೆಟಾ ಇದನ್ನು ತಡೆಯಲು ಹೊಸ ಫೀಚರ್ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

WhatsApp New Feature: ಮೆಟಾದಿಂದ ಮಹತ್ವದ ನಿರ್ಧಾರ: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ
WhatsApp New Feature
Follow us
Vinay Bhat
|

Updated on: May 06, 2023 | 1:05 PM

ಇಂದಿನ ದಿನಗಳಲ್ಲಿ ಜನರಿಗೆ ಕಿರಿ ಕಿರಿ ಉಂಟುಮಾಡುವಂತಹ ಸ್ಪ್ಯಾಮ್ (Spam) ಮತ್ತು ಸ್ಕ್ಯಾಮ್ (Scam) ಕರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸುಳ್ಳು ಕರೆಗಳನ್ನು ನಂಬಿ ಇದರಿಂದ ಹಣ ಕಳೆದುಕೊಂಡವರು ಅನೇಕರಿದ್ದಾರೆ. ಕೇವಲ ಮೊಬೈಲ್ ಸಂಖ್ಯೆಗೆ ಮಾತ್ರವಲ್ಲದೆ ಈಗೀಗ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್​ನಲ್ಲೂ ಸ್ಕ್ಯಾಮ್ ಕರೆಗಳು ಬರುತ್ತಿದೆ. ವರ್ಕ್ ಫ್ರಮ್ ಹೋಮ್​ನಿಂದ ಲಕ್ಷ, ಲಕ್ಷ ಗಳಿಸಿ, ಉಚಿತ ಇಂಟರ್ನೆಟ್ ಸಂಪರ್ಕ ಸೇರಿದಂತೆ ಹಲವು ಸುಳ್ಳು ಮೆಸೇಜ್, ಕಾಲ್​ಗಳು ವಾಟ್ಸ್​ಆ್ಯಪ್​ನಲ್ಲಿ (WhatsApp) ಹರಿದಾಡುತ್ತಿದೆ. ಆದರೀಗ ಮೆಟಾ ಇದನ್ನು ತಡೆಯಲು ಹೊಸ ಫೀಚರ್ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಬಳಕೆದಾರರ ಪ್ರೈವಸಿ ವಿಚಾರದಲ್ಲಿ ಕಟ್ಟುನಿಟ್ಟಾಗಿರುವ ವಾಟ್ಸ್​ಆ್ಯಪ್ ಉಪಯುಕ್ತವಾದ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ.

ವಾಟ್ಸ್​ಆ್ಯಪ್ ಸದ್ಯದಲ್ಲೇ ತನ್ನ ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯವನ್ನು ನೀಡಲಿದೆ. ಈ ಫೀಚರ್‌ ಆಯ್ದ ಬೀಟಾ ಟೆಸ್ಟರ್‌ಗಳಿಗೆ ಮಾತ್ರ ಲಭ್ಯವಿದೆ. ಕೆಲವೆ ದಿನಗಳಲ್ಲಿ ಆಂಡ್ರಾಯ್ಡ್‌ ಬಳಕೆದಾರರಿಗೆ ಸಿಗಲಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್​ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್‌ ಮಾಡಬಹುದು. WABetaInfo ತಾಣದಲ್ಲಿ ಪ್ರಕಟವಾದ ಮಾಹಿತಿ ಪ್ರಕಾರ ಈ ಫೀಚರ್‌ ವಾಟ್ಸ್​ಆ್ಯಪ್ ಆಂಡ್ರಾಯ್ಡ್‌ 2.23.10.7 ಅಪ್‌ಡೇಟ್‌ನಲ್ಲಿ ದೊರಕಲಿದೆ. ಇದಕ್ಕಾಗಿ ಸೆಟ್ಟಿಂಗ್‌> ಪ್ರೈವೇಸಿ ಮೆನುಗೆ ಹೋಗಿ ಕ್ಲಿಕ್‌ ಮಾಡಬೇಕು. ಇದರಿಂದ ಸ್ಪ್ಯಾಮ್‌ ಕರೆಗಳನ್ನು ನಿಯಂತ್ರಿಸಲು ವಾಟ್ಸ್​ಆ್ಯಪ್ ಬಳಕೆದಾರರಿಗೆ ಸಾಧ್ಯವಾಗಲಿದೆ.

Amazon Great Summer Sale: ಅಮೆಜಾನ್ ಗ್ರೇಟ್ ಸಮ್ಮರ್ ಡೇಸ್ ಸೇಲ್: ಸ್ಮಾರ್ಟ್​ಫೋನ್​ಗಳ ಮೇಲೆ ಬಂಪರ್ ಆಫರ್

ಇದನ್ನೂ ಓದಿ
Image
Tech Tips: 5G ಇಂಟರ್ನೆಟ್ ಬಳಸುವಾಗ ಡೇಟಾ ಸೇವ್ ಮಾಡುವುದು ಹೇಗೆ?; ಇಲ್ಲಿದೆ ನೋಡಿ ಟ್ರಿಕ್ಸ್
Image
Vivo X90: 120W ಫಾಸ್ಟ್ ಚಾರ್ಜರ್, ಅದ್ಭುತ ಕ್ಯಾಮೆರಾ: ಭಾರತದಲ್ಲಿ ವಿವೋ X90 ಸರಣಿ ಖರೀದಿಗೆ ಲಭ್ಯ
Image
Galaxy A53: ನಂಬಲಾಗದ ಆಫರ್: 38,990 ರೂ. ಬೆಲೆಯ ಈ ಫೋನ್ ಮೇಲೆ 34,000 ರೂ. ಡಿಸ್ಕೌಂಟ್
Image
Flipkart Big Saving Days sale: ಫ್ಲಿಪ್​ಕಾರ್ಟ್​ನಲ್ಲಿ ಇಂದಿನಿಂದ​ ಬಿಗ್‌ ಸೇವಿಂಗ್‌ ಡೇಸ್‌: ಈ ಬಾರಿ ಕೂಡ ಬಂಪರ್ ಆಫರ್ಸ್

47 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್:

ವಾಟ್ಸ್​ಆ್ಯಪ್ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 47 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮಾರ್ಚ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,715,906 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಕೂಡ ಭಾರತದಲ್ಲಿ 46 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ.

ವಿಡಿಯೋ ಮೆಸೇಜ್:

ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ ಫೀಚರ್ ಅನ್ನು ನೀಡಲಿದೆ. ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್