WhatsApp: ಕೂಡಲೇ ವಾಟ್ಸ್ಆ್ಯಪ್ ಅಪ್ಡೇಟ್ ಮಾಡಿ: ನೂತನ ಫೀಚರ್ ಕಂಡು ಬಳಕೆದಾರರು ಫುಲ್ ಖುಷ್
WhatsApp New Features: ವಾಟ್ಸ್ಆ್ಯಪ್ ಇದೀಗ ತನ್ನ ಆಂಡ್ರಾಯ್ಡ್ (Android) ಬಳಕೆದಾರರಿಗೆ ವಿಶೇಷ ಫೀಚರ್ವೊಂದನ್ನು ಬಿಡುಗಡೆ ಮಾಡಿದೆ. ವಾಟ್ಸ್ಆ್ಯಪ್ನಲ್ಲಿ ಫೋಟೋ ಕಳುಹಿಸುವವರಿಗೆ ಈ ಆಯ್ಕೆ ಸಹಕಾರಿ ಆಗಲಿದೆ.
ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಕಳೆದ ವರ್ಷ ಸಾಕಷ್ಟು ಅಭಿವೃದ್ದಿ ಕಂಡ ಈ ಆ್ಯಪ್ ಇದೀಗ ಬಳಕೆದಾರರ ನೆಚ್ಚಿನ ಅಪ್ಲಿಕೇಷನ್ ಆಗಿಬಿಟ್ಟಿದೆ. ಕಳೆದ ವರ್ಷದಂತೆ ಈ ವರ್ಷ ಅನೇಕ ಹೊಸ ಹೊಸ ಫೀಚರ್ಗಳ ಮೇಲೆ ಕಣ್ಣಿಟ್ಟಿರುವ ವಾಟ್ಸ್ಆ್ಯಪ್ (WhatsApp) ಒಂದೊಂದು ಅಪ್ಡೇಟ್ ಪರಿಯಿಸುತ್ತಿದೆ. ಇದರ ನಡುವೆ ಅನೇಕ ಆಯ್ಕೆಗಳು ಬೇಟಾ ವರ್ಷನ್ನಲ್ಲಿ ಟೆಸ್ಟಿಂಗ್ ನಡೆಯುತ್ತಿದೆ. ಇದರ ನಡುವೆ ವಾಟ್ಸ್ಆ್ಯಪ್ ಇದೀಗ ತನ್ನ ಆಂಡ್ರಾಯ್ಡ್ (Android) ಬಳಕೆದಾರರಿಗೆ ವಿಶೇಷ ಫೀಚರ್ವೊಂದನ್ನು ಬಿಡುಗಡೆ ಮಾಡಿದೆ. ವಾಟ್ಸ್ಆ್ಯಪ್ನಲ್ಲಿ ಫೋಟೋ ಕಳುಹಿಸುವವರಿಗೆ ಈ ಆಯ್ಕೆ ಸಹಕಾರಿ ಆಗಲಿದೆ.
ಈ ಹಿಂದೆ ವಾಟ್ಸ್ಆ್ಯಪ್ನಲ್ಲಿ ಒಂದೇ ಬಾರಿಗೆ ಕೇವಲ 30 ಫೋಟೋಗಳನ್ನು ಮಾತ್ರ ಕಳುಹಿಸಬಹುದಾಗುತ್ತು, ಆದರೀಗ ನೂತನ ಅಪ್ಡೇಟ್ನಲ್ಲಿ ಇದರ ಮಿತಿಯನ್ನು ಹೆಚ್ಚಿಸಲಾಗಿದೆ. ಆಂಡ್ರಾಯ್ಡ್ ಆವೃತ್ತಿ 2.22.24.73 ಕ್ಕೆ ವಾಟ್ಸ್ಆ್ಯಪ್ ಅನ್ನು ಅಪ್ಡೇಟ್ ಮಾಡಿದರೆ ಒಂದೇ ಬಾರಿಗೆ 100 ಫೋಟೋಗಳನ್ನು ಅಥವಾ ವಿಡಿಯೋಗಳನ್ನು ಕಳುಹಿಸಬಹುದು. ಇದರ ಜೊತೆಗೆ ಮತ್ತೊಂದು ಆಯ್ಕೆ ಕೂಡ ನೀಡಿದ್ದು, ಇದರ ಮೂಲಕ ವಾಟ್ಸ್ಆ್ಯಪ್ನಲ್ಲಿ ನೀವು ಡಾಕ್ಯುಮೆಂಟ್ ಫೈಲ್‌ಗಳನ್ನು ಕಳುಹಿಸುವಾಗ ಶೀರ್ಷಿಕೆಗಳನ್ನು ಸೇರಿಸಲು ಅವಕಾಶ ನೀಡಲಾಗಿದೆ. ಈ ಹಿಂದೆ ಫೋಟೋಗಳಿಗೆ ಮತ್ತು ವಿಡಿಯೋಗಳಿಗೆ ಮಾತ್ರ ಕ್ಯಾಪ್ಷನ್ ಆಯ್ಕೆ ನೀಡಲಾಗಿತ್ತು. ಸದ್ಯಕ್ಕೆ ಈ ಆಯ್ಕೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಐಒಎಸ್ ಬಳಕೆದಾರರಿಗೂ ಸಿಗಲಿದೆಯಂತೆ.
Vivo Y100: ಇದು ಬಣ್ಣ ಬದಲಾಯಿಸುವ ಸ್ಮಾರ್ಟ್ಫೋನ್: ವಿವೋದಿಂದ ಭಾರತದಲ್ಲಿ ವಿಶಿಷ್ಠ ಮೊಬೈಲ್ ರಿಲೀಸ್: ಬೆಲೆ ಎಷ್ಟು?
ವೆಬ್ ಬಳಕೆದಾರರಿಗೆ ನೂತನ ಫೀಚರ್:
ಹೆಚ್ಚಾಗಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಅಪ್ಡೇಟ್ಗಳನ್ನು ನೀಡುತ್ತಿದ್ದ ಕಂಪನಿ ಈಗ ವೆಬ್ ಬಳಕೆದಾರರಿಗೆ ನೂತನ ಪೀಚರ್ವೊಂದನ್ನು ನೀಡಲು ಮುಂದಾಗಿದೆ. ವಾಟ್ಸ್ಆ್ಯಪ್ ವೆಬ್ನಲ್ಲಿ ಫೋಟೋ ಸೆಂಡ್ ಮಾಡುವಾಗ ವಿಶೇಷವಾದ ಆಯ್ಕೆಯೊಂದು ಕಾಣಿಸಲಿದ್ದು, ಇದರ ಮೂಲಕ ಮೂಲ ಗುಣಮಟ್ಟದಲ್ಲೇ ಆ ಫೋಟೋ ಸೆಂಡ್ ಆಗಲಿದೆ. ಈ ಆಯ್ಕೆ ಸದ್ಯದಲ್ಲೇ ವಾಟ್ಸ್ಆ್ಯಪ್ ತನ್ನ ವೆಬ್ ಬಳಕೆದಾರರಿಗೆ ನೀಡುತ್ತಿದೆ. ಈ ಮೂಲಕ ಉತ್ತಮ ಕ್ವಾಲಿಟಿ ಇರುವ ಫೋಟೋ ಅಥವಾ ಫೈಲ್‌ಗಳನ್ನು ಅದೇ ಗುಣಮಟ್ಟದಲ್ಲಿ ಸೆಂಡ್ ಮಾಡಬಹುದು. ಈಗಾಗಲೇ ಆಂಡ್ರಾಯ್ಡ್ ಹಾಗೂ ಐಓಎಸ್ ಬಳಕೆದಾರರಿಗೆ ಈ ಆಯ್ಕೆ ನೀಡಲಾಗಿದೆ. ಈ ಫೀಚರ್ ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ.
ವಾಟ್ಸ್ಆ್ಯಪ್ ಕರೆಯನ್ನು ಶೆಡ್ಯುಲ್ ಮಾಡಿ:
ವಾಟ್ಸ್ಆ್ಯಪ್ ಕರೆಯನ್ನು ಶೆಡ್ಯುಲ್ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಹೌದು, ಯಾವುದೇ ಸ್ಮಾರ್ಟ್ಫೋನ್ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ಆ್ಯಪ್ ಇದೇ ಮೊದಲ ಬಾರಿಗೆ ತನ್ನ ಕರೆಗಳನ್ನು ಶೆಡ್ಯುಲ್ ಮಾಡುವ ಆಯ್ಕೆ ನೀಡುತ್ತಿದೆ. ಅಂದರೆ ವಾಟ್ಸ್ಆ್ಯಪ್ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್ ಮಾಡಬಹುದು.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ