WhatsApp: ಕೂಡಲೇ ವಾಟ್ಸ್​ಆ್ಯಪ್​ ಅಪ್ಡೇಟ್ ಮಾಡಿ: ನೂತನ ಫೀಚರ್ ಕಂಡು ಬಳಕೆದಾರರು ಫುಲ್ ಖುಷ್

| Updated By: Vinay Bhat

Updated on: Feb 17, 2023 | 12:19 PM

WhatsApp New Features: ವಾಟ್ಸ್​ಆ್ಯಪ್ ಇದೀಗ ತನ್ನ ಆಂಡ್ರಾಯ್ಡ್ (Android) ಬಳಕೆದಾರರಿಗೆ ವಿಶೇಷ ಫೀಚರ್​ವೊಂದನ್ನು ಬಿಡುಗಡೆ ಮಾಡಿದೆ. ವಾಟ್ಸ್​ಆ್ಯಪ್​ನಲ್ಲಿ ಫೋಟೋ ಕಳುಹಿಸುವವರಿಗೆ ಈ ಆಯ್ಕೆ ಸಹಕಾರಿ ಆಗಲಿದೆ.

WhatsApp: ಕೂಡಲೇ ವಾಟ್ಸ್​ಆ್ಯಪ್​ ಅಪ್ಡೇಟ್ ಮಾಡಿ: ನೂತನ ಫೀಚರ್ ಕಂಡು ಬಳಕೆದಾರರು ಫುಲ್ ಖುಷ್
Whatsapp
Follow us on

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಕಳೆದ ವರ್ಷ ಸಾಕಷ್ಟು ಅಭಿವೃದ್ದಿ ಕಂಡ ಈ ಆ್ಯಪ್ ಇದೀಗ ಬಳಕೆದಾರರ ನೆಚ್ಚಿನ ಅಪ್ಲಿಕೇಷನ್ ಆಗಿಬಿಟ್ಟಿದೆ. ಕಳೆದ ವರ್ಷದಂತೆ ಈ ವರ್ಷ ಅನೇಕ ಹೊಸ ಹೊಸ ಫೀಚರ್​ಗಳ ಮೇಲೆ ಕಣ್ಣಿಟ್ಟಿರುವ ವಾಟ್ಸ್​ಆ್ಯಪ್ (WhatsApp) ಒಂದೊಂದು ಅಪ್ಡೇಟ್ ಪರಿಯಿಸುತ್ತಿದೆ. ಇದರ ನಡುವೆ ಅನೇಕ ಆಯ್ಕೆಗಳು ಬೇಟಾ ವರ್ಷನ್​ನಲ್ಲಿ ಟೆಸ್ಟಿಂಗ್ ನಡೆಯುತ್ತಿದೆ. ಇದರ ನಡುವೆ ವಾಟ್ಸ್​ಆ್ಯಪ್ ಇದೀಗ ತನ್ನ ಆಂಡ್ರಾಯ್ಡ್ (Android) ಬಳಕೆದಾರರಿಗೆ ವಿಶೇಷ ಫೀಚರ್​ವೊಂದನ್ನು ಬಿಡುಗಡೆ ಮಾಡಿದೆ. ವಾಟ್ಸ್​ಆ್ಯಪ್​ನಲ್ಲಿ ಫೋಟೋ ಕಳುಹಿಸುವವರಿಗೆ ಈ ಆಯ್ಕೆ ಸಹಕಾರಿ ಆಗಲಿದೆ.

ಈ ಹಿಂದೆ ವಾಟ್ಸ್​ಆ್ಯಪ್​ನಲ್ಲಿ ಒಂದೇ ಬಾರಿಗೆ ಕೇವಲ 30 ಫೋಟೋಗಳನ್ನು ಮಾತ್ರ ಕಳುಹಿಸಬಹುದಾಗುತ್ತು, ಆದರೀಗ ನೂತನ ಅಪ್ಡೇಟ್​ನಲ್ಲಿ ಇದರ ಮಿತಿಯನ್ನು ಹೆಚ್ಚಿಸಲಾಗಿದೆ. ಆಂಡ್ರಾಯ್ಡ್ ಆವೃತ್ತಿ 2.22.24.73 ಕ್ಕೆ ವಾಟ್ಸ್​ಆ್ಯಪ್ ಅನ್ನು ಅಪ್ಡೇಟ್ ಮಾಡಿದರೆ ಒಂದೇ ಬಾರಿಗೆ 100 ಫೋಟೋಗಳನ್ನು ಅಥವಾ ವಿಡಿಯೋಗಳನ್ನು ಕಳುಹಿಸಬಹುದು. ಇದರ ಜೊತೆಗೆ ಮತ್ತೊಂದು ಆಯ್ಕೆ ಕೂಡ ನೀಡಿದ್ದು, ಇದರ ಮೂಲಕ ವಾಟ್ಸ್​ಆ್ಯಪ್​ನಲ್ಲಿ ನೀವು ಡಾಕ್ಯುಮೆಂಟ್‌ ಫೈಲ್​ಗಳನ್ನು ಕಳುಹಿಸುವಾಗ ಶೀರ್ಷಿಕೆಗಳನ್ನು ಸೇರಿಸಲು ಅವಕಾಶ ನೀಡಲಾಗಿದೆ. ಈ ಹಿಂದೆ ಫೋಟೋಗಳಿಗೆ ಮತ್ತು ವಿಡಿಯೋಗಳಿಗೆ ಮಾತ್ರ ಕ್ಯಾಪ್ಷನ್ ಆಯ್ಕೆ ನೀಡಲಾಗಿತ್ತು. ಸದ್ಯಕ್ಕೆ ಈ ಆಯ್ಕೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಐಒಎಸ್ ಬಳಕೆದಾರರಿಗೂ ಸಿಗಲಿದೆಯಂತೆ.

Vivo Y100: ಇದು ಬಣ್ಣ ಬದಲಾಯಿಸುವ ಸ್ಮಾರ್ಟ್​ಫೋನ್: ವಿವೋದಿಂದ ಭಾರತದಲ್ಲಿ ವಿಶಿಷ್ಠ ಮೊಬೈಲ್ ರಿಲೀಸ್: ಬೆಲೆ ಎಷ್ಟು?

ಇದನ್ನೂ ಓದಿ
Airtel 5G: 80ಕ್ಕೂ ಅಧಿಕ ನಗರಗಳಲ್ಲಿ ಏರ್ಟೆಲ್ 5G ಲಾಂಚ್: ಪ್ಲಾನ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
Google India: ಭಾರತದ 453 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ ಗೂಗಲ್
Lava Blaze 5G: ವಿದೇಶಿ ಮೊಬೈಲ್ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ ಬ್ಲೇಜ್ ಈಗ ಖರೀದಿಗೆ ಲಭ್ಯ
Tech Tips: ಪವರ್ ಬ್ಯಾಂಕ್ ಅಲ್ಲ: ಕರೆಂಟ್ ಇಲ್ಲದೆಯೂ ನಿಮ್ಮ ಮೊಬೈಲ್ ಚಾರ್ಜ್ ಮಾಡಬಹುದು: ಹೇಗೆ ಗೊತ್ತೇ?

ವೆಬ್ ಬಳಕೆದಾರರಿಗೆ ನೂತನ ಫೀಚರ್:

ಹೆಚ್ಚಾಗಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಅಪ್ಡೇಟ್​ಗಳನ್ನು ನೀಡುತ್ತಿದ್ದ ಕಂಪನಿ ಈಗ ವೆಬ್ ಬಳಕೆದಾರರಿಗೆ ನೂತನ ಪೀಚರ್​ವೊಂದನ್ನು ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್ ವೆಬ್​ನಲ್ಲಿ ಫೋಟೋ ಸೆಂಡ್‌ ಮಾಡುವಾಗ ವಿಶೇಷವಾದ ಆಯ್ಕೆಯೊಂದು ಕಾಣಿಸಲಿದ್ದು, ಇದರ ಮೂಲಕ ಮೂಲ ಗುಣಮಟ್ಟದಲ್ಲೇ ಆ ಫೋಟೋ ಸೆಂಡ್ ಆಗಲಿದೆ. ಈ ಆಯ್ಕೆ ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ವೆಬ್​ ಬಳಕೆದಾರರಿಗೆ ನೀಡುತ್ತಿದೆ. ಈ ಮೂಲಕ ಉತ್ತಮ ಕ್ವಾಲಿಟಿ ಇರುವ ಫೋಟೋ ಅಥವಾ ಫೈಲ್‌ಗಳನ್ನು ಅದೇ ಗುಣಮಟ್ಟದಲ್ಲಿ ಸೆಂಡ್‌ ಮಾಡಬಹುದು. ಈಗಾಗಲೇ ಆಂಡ್ರಾಯ್ಡ್‌ ಹಾಗೂ ಐಓಎಸ್‌ ಬಳಕೆದಾರರಿಗೆ ಈ ಆಯ್ಕೆ ನೀಡಲಾಗಿದೆ. ಈ ಫೀಚರ್ ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ.

ವಾಟ್ಸ್​ಆ್ಯಪ್ ಕರೆಯನ್ನು ಶೆಡ್ಯುಲ್‌ ಮಾಡಿ:

ವಾಟ್ಸ್​ಆ್ಯಪ್ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಹೌದು, ಯಾವುದೇ ಸ್ಮಾರ್ಟ್​ಫೋನ್​ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್​ಆ್ಯಪ್ ಇದೇ ಮೊದಲ ಬಾರಿಗೆ ತನ್ನ ಕರೆಗಳನ್ನು ಶೆಡ್ಯುಲ್‌ ಮಾಡುವ ಆಯ್ಕೆ ನೀಡುತ್ತಿದೆ. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ