AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಇಂದು ಬರಲಿದೆ ಬಹುನಿರೀಕ್ಷಿತ ಫೀಚರ್: ಅಪ್ಡೇಟ್​ಗಾಗಿ ಕಾದು ಕುಳಿತ ಬಳಕೆದಾರರು

WhatsApp Emoji Reactions: ವಾಟ್ಸ್​ಆ್ಯಪ್​ನಲ್ಲಿ ಇದೀಗ ಫೇಸ್​ಬುಕ್​ನಲ್ಲಿರುವಂತೆಯೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಅನ್ನು ಪರಿಚಯಿಸಲು ಮುಂದಾಗಿದೆ. ಇಂದು ಈ ಫೀಚರ್ ಬಳಕೆದಾರರಿಗೆ ಸಿಗಲಿದೆ ಎಂದು ಹೇಳಲಾಗಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಇಂದು ಬರಲಿದೆ ಬಹುನಿರೀಕ್ಷಿತ ಫೀಚರ್: ಅಪ್ಡೇಟ್​ಗಾಗಿ ಕಾದು ಕುಳಿತ ಬಳಕೆದಾರರು
WhatsApp Update
TV9 Web
| Updated By: Vinay Bhat|

Updated on:May 06, 2022 | 1:54 PM

Share

ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ದಿನದಿಂದ ದಿನಕ್ಕೆ ವಾಟ್ಸ್​ಆ್ಯಪ್​​ (WhatsApp) ತನ್ನ ಫೀಚರ್ ಅಪ್ಡೇಟ್ ಮಾಡುತ್ತಲೇ ಇದ್ದು ಮತ್ತಷ್ಟು ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ವಾರವಷ್ಟೆ ವಾಟ್ಸ್​ಆ್ಯಪ್​​ ಕೆಲವೊಂದು ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡುವುದರ ಬಗ್ಗೆ ಘೋಷಣೆ ಮಾಡಿತ್ತು. ಸಾಲು ಸಾಲು ಅಪ್ಡೇಟ್​ಗಳು ವಾಟ್ಸ್​ಆ್ಯಪ್​ನಲ್ಲಿ ಬರಲು ತಯಾರಿರುವಾಗ ಇದೀಗ ಫೇಸ್​ಬುಕ್​ನಲ್ಲಿರುವಂತೆಯೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಅನ್ನು ಪರಿಚಯಿಸಲು ಮುಂದಾಗಿದೆ. ಇಂದು ಈ ಫೀಚರ್ ಬಳಕೆದಾರರಿಗೆ ಸಿಗಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಫೇಸ್‌ಬುಕ್‌ನ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್(Mark Zuckerberg) ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಈಗಾಗಲೇ ಇನ್​ಸ್ಟಾಗ್ರಾಮ್, ಫೇಸ್​ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್​ನಲ್ಲಿ ಇರುವಂತಹ ಜನಪ್ರಿಯ ಅಪ್ಲಿಕೇಶನ್‌ಗಳು ಬಳಕೆದಾರರಿಗೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ಗಳನ್ನು ನೀಡುತ್ತಿವೆ. ಇದೇ ಕಾರಣಕ್ಕೆ ವಾಟ್ಸ್​ಆ್ಯಪ್​ ಕೂಡ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೆಸೇಜ್‌ ರಿಯಾಕ್ಷನ್‌ ಸೇರಿಸಿದೆ. ವಾಟ್ಸ್​ಆ್ಯಪ್​ನ ಮೆಸೇಜ್‌ ರಿಯಾಕ್ಷನ್‌ ಫಿಚರ್ಸ್‌ ಎಮೋಜಿ ಐಕಾನ್‌ಗಳೊಂದಿಗೆ ಪ್ರತಿಕ್ರಿಯಿಸಲು ನಿಮಗೆ ಅನುಮತಿಸುತ್ತದೆ. ಇದು ಫೇಸ್‌ಬುಕ್‌ನಲ್ಲಿನ ಪೋಸ್ಟ್‌ಗಳಿಗೆ ನೀವು ಹೇಗೆ ಪ್ರತಿಕ್ರಿಯಿಸುತ್ತಿರೋ ಅದೇ ಮಾದರಿಯಲ್ಲಿ ಇರಲಿದೆ. ಅಂದರೆ ಎಮೋಜಿಗಳ ರಿಯಾಕ್ಷನ್​ಗಾಗಿ ನೀವು ಸಂದೇಶವನ್ನು ಲಾಂಗ್‌ ಪ್ರೆಸ್‌ ಮಾಡಬೇಕಾಗುತ್ತದೆ. ಪಾಪ್ ಅಪ್ ಆಗುವ ಯಾವುದೇ ಎಮೋಜಿಗಳಿಂದ ಆಯ್ಕೆ ಮಾಡಬೇಕಾಗುತ್ತದೆ. ನಿಮ್ಮ ಮೆಚ್ಚಿನದನ್ನು ನೀವು ಆಯ್ಕೆ ಮಾಡಿದ ನಂತರ, ನೀವು ಯಾರ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದೀರೋ ಅವರು ಅದೇ ಪ್ರತಿಕ್ರಿಯೆಗೆ ಅಧಿಸೂಚನೆಯನ್ನು ಪಡೆಯುತ್ತೀರಿ.

ಇದನ್ನೂ ಓದಿ
Image
Smartphone Tips: ನಿಮ್ಮ ಸ್ಮಾರ್ಟ್​​ಫೋನ್​ಗಳನ್ನು ತಪ್ಪಿಯೂ ಈ ರೀತಿ ಮಾಡಬೇಡಿ: ಬ್ಲಾಸ್ಟ್​ ಆದೀತು
Image
OnePlus 10R: ಭರ್ಜರಿ ಆಫರ್​​ನೊಂದಿಗೆ 150W ಫಾಸ್ಟ್​ ಚಾರ್ಜರ್​ನ ಒನ್‌ಪ್ಲಸ್‌ 10R ಫೋನ್ ಮಾರಾಟ ಆರಂಭ
Image
WhatsApp: ಇನ್ನುಂದೆ ಚಾಟ್​​ಲಿಸ್ಟ್​​ನಲ್ಲೇ ನೋಡಿ ಸ್ಟೇಟಸ್: ವಾಟ್ಸ್​ಆ್ಯಪ್​​ನಿಂದ ವಿನೂತನ ಪ್ರಯೋಗ
Image
WhatsApp: 18 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆ ನಿಷೇಧಿಸಿದ ಕಂಪನಿ: ಎಚ್ಚರದಿಂದಿರಿ

ಈ ಹೊಸ ಫೀಚರ್ಸ್‌ ಆಯ್ಕೆಗೆ ನೀವು ಹೊಸ ಆವೃತ್ತಿಯ ವಾಟ್ಸ್​ಆ್ಯಪ್​ಗೆ ಅಪ್ಡೇಟ್‌ ಆಗ ಬೇಕಾಗುತ್ತದೆ. ವಾಟ್ಸ್​ಆ್ಯಪ್​ ನೀವು ಪ್ರತಿಕ್ರಿಯೆಯನ್ನು ಬೆಂಬಲಿಸದ ಹಳೆಯ ಆವೃತ್ತಿಯನ್ನು ಬಳಸುತ್ತಿರುವ ಎಚ್ಚರಿಕೆಯ ಸಂದೇಶವನ್ನು ಪ್ರದರ್ಶಿಸಲಿದೆ. ಈ ಫೀಚರ್ಸ್‌ ಮೊದಲು ವಾಟ್ಸ್​ಆ್ಯಪ್​ನ ಆಂಡ್ರಾಯ್ಡ್ ಆವೃತ್ತಿಯಲ್ಲಿ ಮತ್ತು ನಂತರ ಐಒಎಸ್ ಬಳಕೆದಾರರಿಗೆ ಲಭ್ಯವಿರುತ್ತದೆ ಎನ್ನಲಾಗಿದೆ. ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ನಿಂದಾಗಿ ನಿಮಗೆ ಬಂದ ಸಂದೇಶಗಳಿಗೆ ತ್ವರಿತವಾಗಿ ಎಮೊಜಿಗಳ ಮೂಲಕ ಉತ್ತರಿಸಲು ಸಾಧ್ಯವಾಗಲಿದೆ. ಇದರಿಂದ ನಿಮ್ಮ ಚಾಟ್‌ ಸಂಬಾಷಣೆ ಇನ್ನಷ್ಟು ಉಲ್ಲಾಸದಾಯಕವಾಗಿರಲಿದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ಕ್ವಿಕ್‌ ರಿಯಾಕ್ಷನ್‌ ಫೀಚರ್ ಕೂಡ ಬರಲಿದೆ ಎಂದು ವಾಟ್ಸ್​ಆ್ಯಪ್ ಹೇಳಿದೆ. ಇದು ವಾಟ್ಸ್​ಆ್ಯಪ್​​ ಸ್ಟೇಟಸ್‌ ಅಪ್ಡೇಟ್‌ ಅನ್ನು ವೀಕ್ಷಿಸುವಾಗ ಬಳಕೆದಾರರಿಗೆ ಎಮೋಜಿಯನ್ನು ಕಳುಹಿಸಲು ಅನುಮತಿಸುತ್ತದೆ. ಅಂದರೆ ಇನ್‌ಸ್ಟಾಗ್ರಾಮ್​ನಲ್ಲಿ ಇರುವ ರೀತಿಯಲ್ಲೇ ವಾಟ್ಸ್​ಆ್ಯಪ್​ನಲ್ಲೂ ರಿಯಾಕ್ಷನ್ ಫೀಚರ್ ಕಾಣಿಸಲಿದೆ. ಈ ಕ್ವಿಕ್ ರಿಯಾಕ್ಷನ್‌ ಆಯ್ಕೆಯು ಎಂಟು ಎಮೋಜಿ ಐಕಾನ್‌ಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಲಾಗಿದೆ. ಇದು ಬಳಕೆದಾರರಿಗೆ ವೈಯಕ್ತಿಕ ಎಮೋಜಿಯನ್ನು ಸಂದೇಶವಾಗಿ ಕಳುಹಿಸದೆಯೇ ಸ್ಟೇಟಸ್‌ ಅಪ್ಡೇಟ್‌ ಕಡೆಗೆ ಭಾವನೆಗಳನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Fri, 6 May 22

ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ