AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ಸುದ್ದಿ: 19 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆ ಬ್ಯಾನ್

ವಾಟ್ಸ್​ಆ್ಯಪ್​ ಮೇ ತಿಂಗಳ ಮಾಸಿಕ ವರದಿಯಲ್ಲಿ, ಸೊಶೀಯಲ್‌ ಮೀಡಿಯಾ ನಿಯಮ ಉಲ್ಲಂಘನೆ ಜೊತೆಗೆ ವಾಟ್ಸ್​ಆ್ಯಪ್​​ನಿಯಮಗಳನ್ನು ಉಲ್ಲಂಘಿಸಿರುವವರ ಖಾತೆಗಳನ್ನು ನಿಷೇದಿಸಲಾಗಿದೆ ಎಂದು ಹೇಳಿದೆ. ರದಿಯಲ್ಲಿ ಭಾರತದ 19 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್‌ ಮಾಡಿದೆ ಎಂದು ಬರೆಯಲಾಗಿದೆ.

WhatsApp Ban: ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ಸುದ್ದಿ: 19 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆ ಬ್ಯಾನ್
WhatsApp Block
TV9 Web
| Updated By: Vinay Bhat|

Updated on: Jul 02, 2022 | 1:21 PM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಆಕರ್ಷಕ ಫೀಚರ್​ಗಳನ್ನು ಪರಚಯಿಸುತ್ತಾ ಇರುತ್ತದೆ. ಇದರ ಜೊತೆಗೆ ಕಳೆದ ಕೆಲವು ಸಮಯದಿಂದ ಬಳಕೆದಾರರು ನೀಡುತ್ತಿರುವ ದೂರನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು ಕಠಿಣ ಕ್ರಮಗಳನ್ನು ಕೂಡ ಕೈಗೊಳ್ಳುತ್ತಿದೆ. ಐಟಿ ನಿಯಮಗಳಿಗೆ ಅನುಸಾರವಾಗಿ ಅಕೌಂಟ್‌ಗಳನ್ನು ಬ್ಯಾನ್‌ ಮಾಡಲಾಗುತ್ತಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ವಾಟ್ಸ್​ಆ್ಯಪ್​ (WhatsApp) 16.6 ಲಕ್ಷಕ್ಕೂ ಅಧಿಕ ಖಾತೆಯನ್ನು ಮಾಡಿತ್ತು. ಇದೀಗ ಮೇ ತಿಂಗಳ ವರದಿ ಬಿಡುಗಡೆ ಮಾಡಿದ್ದು ಭಾರತದ 19 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧ ಮಾಡಿರುವುದಾಗಿ ಹೇಳಿದೆ. ಐಟಿ ನಿಯಮ (IT Rule) 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗುತ್ತಿದ್ದು ಸಾಮಾಜಿಕ ಜಾಲತಾಣಗಳಿಂದ ತಿಂಗಳಿಗೆ 5 ಮಿಲಿನುಯನ್​ಗೂ ಅಧಿಕ ದೂರುಗಳು ಬರುತ್ತವೆಯಂತೆ.

ವಾಟ್ಸ್​ಆ್ಯಪ್​ ನೀತಿಗಳ ಉಲ್ಲಂಘನೆಯಿಂದಾಗಿ ಹೆಚ್ಚಿನ ಖಾತೆಗಳನ್ನು ನಿಷೇಧಿಸಲಾಗಿದೆಯಾದರೂ, ಭಾರತದಲ್ಲಿನ ಇತರ ಬಳಕೆದಾರರು ವರದಿ ಮಾಡುವ ಕುಂದುಕೊರತೆಗಳ ಮೇಲೆ ಅಕೌಂಟ್‌ ಬ್ಯಾನ್‌ ಮಾಡುವ ಕ್ರಮ ತೆಗೆದುಕೊಳ್ಳುತ್ತದೆ. ಇತ್ತೀಚಿನ ವರದಿಯ ಪ್ರಕಾರ ಇದುವರೆಗೆ 2,069,000 ಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಕಂಪನಿ ಹೇಳಿದೆ.

Best Smartphones: ಭಾರತದಲ್ಲಿ ಕೇವಲ 6,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​​ಫೋನ್​ಗಳು ಇಲ್ಲಿದೆ ನೋಡಿ

ಇದನ್ನೂ ಓದಿ
Image
Nokia G11 Plus: ಬಜೆಟ್ ಬೆಲೆಗೆ ಬಂಪರ್ ಫೋನ್: ನೋಕಿಯಾದಿಂದ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಬ್ಯಾಟರಿ ಪವರ್ ಇನ್ನಷ್ಟು ಸ್ಟ್ರಾಂಗ್ ಆಗಬೇಕೇ?: ಇಲ್ಲಿದೆ ಟಿಪ್ಸ್
Image
Galaxy F13: 11,000 ರೂ. ಒಳಗಿನ ಬೆಸ್ಟ್​ ಸ್ಮಾರ್ಟ್​​​ಫೋನ್​ ಗ್ಯಾಲಕ್ಸಿ F13 ಖರೀದಿಗೆ ಲಭ್ಯ: ಆಫರ್ ಮಿಸ್ ಮಾಡ್ಬೇಡಿ
Image
ನಿಮ್ಮ ವಾಹನ ಸೇಫ್ ಆಗಿದೆಯೇ?; ಭಾರತದಲ್ಲಿ ವರ್ಷಕ್ಕೆ ಎಷ್ಟು ಕಾರುಗಳು ಕಳ್ಳತನವಾಗುತ್ತದೆ ಗೊತ್ತಾ?

ವಾಟ್ಸ್​ಆ್ಯಪ್​ ಮೇ ತಿಂಗಳ ಮಾಸಿಕ ವರದಿಯಲ್ಲಿ, ಸೊಶೀಯಲ್‌ ಮೀಡಿಯಾ ನಿಯಮ ಉಲ್ಲಂಘನೆ ಜೊತೆಗೆ ವಾಟ್ಸ್​ಆ್ಯಪ್​​ನಿಯಮಗಳನ್ನು ಉಲ್ಲಂಘಿಸಿರುವವರ ಖಾತೆಗಳನ್ನು ನಿಷೇದಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ವಾಟ್ಸ್​ಆ್ಯಪ್​​ನಲ್ಲಿ ಬಳಕೆದಾರರು ಮಾಡುವ ರಿಪೋರ್ಟ್‌ ಆಧಾರದ ಮೇಲೂ ಕೂಡ ಅನೇಕ ಅಕೌಂಟ್‌ಗಳನ್ನು ನಿಷೇಧ ಮಾಡಿದೆ. ಭಾರತದಲ್ಲಿ ಹೊಸ ಐಟಿ ನಿಯಮ ಜಾರಿಗೆ ಬಂದ ನಂತರ ಪ್ರತಿ ತಿಂಗಳು ಕೂಡ ಕುಂದುಕೊರತೆಯ ವರದಿ ನೀಡುವುದು ಕಡ್ಡಾಯವಾಗಿದೆ. ಅದರಂತೆ ವಾಟ್ಸ್​ಆ್ಯಪ್​​ ಮಾರ್ಚ್ ತಿಂಗಳ ಅವಧಿಯಲ್ಲಿ ತಾನು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ವರದಿಯಲ್ಲಿ ತಿಳಿಸಿದೆ.

ಮೇ 1 ರಿಂದ ಮೇ 31 2022 ರ ನಡುವಿನ ಮಾಸಿಕ ವರದಿಯಲ್ಲಿ ಭಾರತದ 19 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್‌ ಮಾಡಿದೆ ಎಂದು ಬರೆಯಲಾಗಿದೆ. ಇನ್ನು ಈ ಮಾಸಿಕ ಬಳಕೆದಾರ-ಸುರಕ್ಷತಾ ವರದಿಯು ಬಳಕೆದಾರರಿಂದ ಸ್ವೀಕರಿಸಿದ ದೂರುಗಳು ಮತ್ತು ವಾಟ್ಸ್​​ಆ್ಯಪ್​​ ತೆಗೆದುಕೊಂಡ ಕ್ರಮಗಳ ವಿವರಗಳನ್ನು ವರದಿ ಮಾಡಿದೆ. ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ. ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು. ಹೀಗಾಗಿ ಎಚ್ಚರದಿಂದಿರಿ.

OnePlus Nord: ಭಾರತದಲ್ಲಿ ಬಿಡುಗಡೆಯಾಯ್ತು OnePlus Nord 2T 5G, ಬಿಡುಗಡೆಯ ವಿಶೇಷ ಕೊಡುಗೆಗಳು ಇಲ್ಲಿವೆ ನೋಡಿ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ