WhatsApp New Feature: ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್: ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು

|

Updated on: May 29, 2023 | 12:52 PM

WhatsApp Update; ಇದೀಗ ಹೊಸ ಅಪ್ಡೇಟ್ ಕುರಿತು ವಾಟ್ಸ್​ಆ್ಯಪ್ ಒಂದು ಸುದ್ದಿ ಪ್ರಕಟಿಸಿದೆ. ಇದರ ಮೂಲಕ ಬಳಕೆದಾರರು ವಿಡಿಯೋ ಕರೆಯಲ್ಲಿ (Video Call) ಹೊಸ ಅನುಭವವನ್ನು ಪಡೆಯಬಹುದು.

WhatsApp New Feature: ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್: ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು
WhatsApp Update
Follow us on

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್​ಗೆ ಈಗ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಯಾರ ಬಳಿ ಸ್ಮಾರ್ಟ್​ಫೋನ್ ಇದೆಯೋ ಅವರ ಬಳಿಯೆಲ್ಲ ವಾಟ್ಸ್​ಆ್ಯಪ್ (WhatsApp) ಇದ್ದೇ ಇದೆ. ತನ್ನ ಬಳಕೆದಾರರ ಪ್ರೈವಸಿ ವಿಚಾರವಾಗಿ ಹೆಚ್ಚು ಗಮನ ಹರಿಸುತ್ತಿರುವುದರಿಂದ ಇದು ಸೇಫ್ ಕೂಡ ಆಗಿದೆ. ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಯೂಸರ್ಸ್ ಅನ್ನು ಈ ಆ್ಯಪ್ ಹೊಂದಿದೆ. ಕ್ಷಣಾರ್ಧದಲ್ಲಿ ಸಂದೇಶಗಳ ಮೂಲಕ ಮಾತುಕತೆ ನಡೆಸಲು ಉಪಯೋಗಿಸುವ ವಾಟ್ಸ್​ಆ್ಯಪ್​ ಸಾಲು ಸಾಲು ಫೀಚರ್​ಗಳನ್ನು ಪರಿಚಯಿಸುತ್ತದೆ. ಇದೀಗ ಹೊಸ ಅಪ್ಡೇಟ್ ಕುರಿತು ವಾಟ್ಸ್​ಆ್ಯಪ್ ಒಂದು ಸುದ್ದಿ ಪ್ರಕಟಿಸಿದೆ. ಇದರ ಮೂಲಕ ಬಳಕೆದಾರರು ವಿಡಿಯೋ ಕರೆಯಲ್ಲಿ (Video Call) ಹೊಸ ಅನುಭವವನ್ನು ಪಡೆಯಬಹುದು.

ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ವಿಡಿಯೋ ಕರೆ ಸಮಯದಲ್ಲಿ ತಮ್ಮ ಸ್ಕ್ರೀನ್‌ ಅನ್ನು ಸುಲಭವಾಗಿ ಶೇರ್ ಮಾಡಬಹುದಾದ ಆಯ್ಕೆಯನ್ನು ನೀಡುತ್ತಿದೆ. ಬಳಕೆದಾರರು ಕರೆ ನಿಯಂತ್ರಣ ವೀಕ್ಷಣೆಯಲ್ಲಿ ಹೊಸ ಐಕಾನ್ ಅನ್ನು ಕಾಣುತ್ತಾರೆ. ಅದನ್ನು ಬಳಸಿಕೊಂಡು ಅವರ ಸ್ಕ್ರೀನ್‌ ಅನ್ನು ಶೇರ್‌ ಮಾಡಲು ಪ್ರೇರೇಪಿಸಲಾಗುತ್ತದೆ. ಸ್ಕ್ರೀನ್‌ ಅನ್ನು ಶೇರ್ ಮಾಡಿದಾಗ ರೆಕಾರ್ಡ್ ಮಾಡಲಾಗುತ್ತದೆ ಮತ್ತು ಸ್ವೀಕರಿಸುವವರೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಆಯ್ಕೆಯು ಆಂಡ್ರಾಯ್ಡ್‌ ಆವೃತ್ತಿ ಸಂಖ್ಯೆ 2.23.11.19 ಗಾಗಿ ವಾಟ್ಸ್​ಆ್ಯಪ್ ಬೀಟಾದೊಂದಿಗೆ ಬರುತ್ತದೆ. ಹೀಗಾಗಿ ಪ್ರಸ್ತುತ ಆಂಡ್ರಾಯ್ಡ್‌ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಸದ್ಯದಲ್ಲೇ ಎಲ್ಲ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ.

5G Smartphones: ಅಮೆಜಾನ್​ನಲ್ಲಿ ಅತಿ ಕಡಿಮೆ ಬೆಲೆಗೆ ಸಿಗುತ್ತಿದೆ ಅತ್ಯುತ್ತಮ 5G ಸ್ಮಾರ್ಟ್​ಫೋನ್ಸ್: ಆಫರ್ ಮಿಸ್ ಮಾಡ್ಬೇಡಿ

ಇದನ್ನೂ ಓದಿ
Redmi A2: ಬಜೆಟ್ ಫೋನ್ ಪ್ರಿಯರಿಗೆ ಬಂದಿದೆ ಹೊಸ ಶಓಮಿ ರೆಡ್ಮಿ ಫೋನ್
ISRO: GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ
Tech Tips: ನಿಮ್ಮಲ್ಲಿರುವ ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ಗೊತ್ತೇ?; ಇಲ್ಲಿದೆ ಮಾಹಿತಿ
Google Street View: ಗೂಗಲ್ ಸ್ಟ್ರೀಟ್ ವ್ಯೂ ಇದೀಗ ಭಾರತದ ಹಳ್ಳಿ-ಪಟ್ಟಣಗಳಲ್ಲಿ ಲಭ್ಯ: ಏನಿದರ ಪ್ರಯೋಜನ

ಎಡಿಟ್ ಸೆಂಟ್ ಮೆಸೇಜ್ ಆಯ್ಕೆ:

ವಾಟ್ಸ್​ಆ್ಯಪ್ ಎಡಿಟ್ ಸೆಂಟ್ ಮೆಸೇಜ್ ಎಂಬ ನೂತನ ಅಪ್ಡೇಟ್ ಪರಿಚಯಿಸುತ್ತಿದೆ. ಎಡಿಟ್ ಸೆಂಟ್ ಮೆಸೇಜ್ ಆಯ್ಕೆಯ ಮೂಲಕ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಇದರ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಈ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಇಲ್ಲಿ ಗಮನಿಸ ಬೇಕಾದ ಸಂಗತಿ ಎಂದರೆ, ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಅನ್ನು ಡಿಲೀಟ್ ಮಾಡಿದರೆ ಹೇಗೆ ಚಾಟ್​ನಲ್ಲಿ ಮಾಹಿತಿ ನೀಡುತ್ತದೆಯೊ ಅದೇರೀತಿ ಎಡಿಟ್ ಮಾಡಿದರೆ ಕೂಡ ಕಳುಹಿಸಿದವರಿಗೆ ತಿಳಿಯುತ್ತದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿದ್ದರೂ ಟ್ವಿಟರ್​ನಲ್ಲಿ ಈ ಕುರಿತು ವರದಿ ಬಂದ ಬೆನ್ನಿಗೆ ಅದನ್ನು ಕೈಬಿಟ್ಟಿತ್ತು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Mon, 29 May 23