WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬಂದ ಮೆಸೇಜ್ ಅನ್ನು ಯಾರೂ ನೋಡದ ಹಾಗೆ ಮಾಡಬಹುದು: ಹೇಗೆ?

WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬಂದ ಮೆಸೇಜ್ ಅನ್ನು ಯಾರೂ ನೋಡದ ಹಾಗೆ ಮಾಡಬಹುದು: ಹೇಗೆ?
WhatsApp

WhatsApp Tips and Tricks: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬಂದ ಕೆಲವೊಂದು ತೀರಾ ವೈಯಕ್ತಿಕವಾದ ಚಾಟ್ ಅನ್ನು ಯಾರಿಗೂ ಕಾಣದಂತೆ ಹೈಡ್ ಮಾಡಬೇಕಾದ ಅನಿವಾರ್ಯತೆ ಇರುತ್ತದೆ. ಈ ಆಯ್ಕೆಯನ್ನ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ನೇರವಾಗಿ ನೀಡಲ್ಲ.

TV9kannada Web Team

| Edited By: Vinay Bhat

May 23, 2022 | 6:44 AM

ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​​ ಅಪ್ಲೆಕೇಶನ್ ಅನ್ನು ಇಂದು ಅನೇಕ ಜನರು ಬಳಕೆ ಮಾಡುತ್ತಿದ್ದು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಹಾಗೆಯೇ ಬಳಕೆದಾರರ ಖಾಸಗಿ ಮಾಹಿತಿ ಸುರಕ್ಷತೆಗೂ ಕೆಲವೊಂದು ಆಯ್ಕೆಗಳನ್ನು ನೀಡಿದೆ. ಆದರೆ, ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬಂದ ಕೆಲವೊಂದು ತೀರಾ ವೈಯಕ್ತಿಕವಾದ ಚಾಟ್ ಅನ್ನು ಯಾರಿಗೂ ಕಾಣದಂತೆ ಹೈಡ್ ಮಾಡಬೇಕಾದ ಅನಿವಾರ್ಯತೆ ಇರುತ್ತದೆ. ಈ ಆಯ್ಕೆಯನ್ನ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ನೇರವಾಗಿ ನೀಡಲ್ಲ. ಹಾಗಂತ ಅದಕ್ಕಾಗಿ ಥರ್ಡ್ ಪಾರ್ಟಿ ಆ್ಯಪ್​ಗಳ ಅಗತ್ಯವಿಲ್ಲ. ನಿಮ್ಮ ವಾಟ್ಸ್​​ಆಪ್​​ನಲ್ಲಿಯೇ ಚಾಟ್ ಮರೆ ಮಾಡುವ ಫೀಚರ್ ಇದೆ. ಅದೇ ಆರ್ಕೈವ್ಡ್ (Archived). ಈ ರೀತಿ ಆರ್ಕೈವ್ ಮಾಡಿದ ಚಾಟ್​​ಗಳು ಡಿಲೀಟ್ ಆಗುವುದಿಲ್ಲ. ಅವುಗಳು ನಿಮ್ಮ ಫೋನ್​ನಲ್ಲಿಯೇ ಇರುತ್ತವೆ. ಆದರೆ ಚಾಟ್ ಲಿಸ್ಟ್​​ನಲ್ಲಿ ಇವು ಕಾಣಿಸುವುದಿಲ್ಲ. ಈ ಆಯ್ಕೆಯ ನೆರವಿನಿಂದ ಬಳಕೆದಾರರು ಅನಗತ್ಯ ಚಾಟ್‌ಗಳನ್ನು ಹಾಗೂ ಸಂಭಾಷಣೆಗಳನ್ನು ಶಾಶ್ವತವಾಗಿ ಕೂಡ ಮರೆಮಾಡಬಹುದು.

ಆರ್ಕೈವ್ಡ್ ಫೀಚರ್ ಮುಖಾಂತರ ನೀವು ನಿಮ್ಮ ಚಾಟ್ ಸ್ಕ್ರೀನ್ ಅನ್ನು ಹೈಡ್ ಮಾಡಬಹುದು ಮತ್ತು ಕೆಲವು ಸಮಯದ ನಂತರ ನಿಮಗೆ ಅಗತ್ಯವಿದ್ದಾಗ ಆ ಚಾಟಿನ ಮಾತುಕತೆಗಳನ್ನು ಅನ್​ಹೈಡ್ ಮಾಡಿ ನೋಡುವುದಕ್ಕೂ ಅವಕಾಶವಿರುತ್ತದೆ. ಕೇವಲ ನಿಮ್ಮ ವೈಯಕ್ತಿಕ ಚಾಟ್ ಮಾತ್ರವಲ್ಲದೆ ಗ್ರೂಪ್ ಚಾಟ್  ಎರಡನ್ನೂ ಕೂಡ ಆರ್ಕೈವ್ ಮಾಡುವುದಕ್ಕೆ ಈ ಫೀಚರ್ ನಲ್ಲಿ ಅವಕಾಶವಿರುತ್ತದೆ.

ವಾಟ್ಸ್​ಆ್ಯಪ್​​ನಲ್ಲಿ ಶಾಶ್ವತವಾಗಿ ಚಾಟ್‌ ಹೈಡ್‌ ಮಾಡುವುದು ಹೇಗೆ?:

  • ವಾಟ್ಸ್​ಆ್ಯಪ್​​ ತೆರೆಯಿರಿ, ನೀವು ಆರ್ಕೈವ್ ಮಾಡಲು ಬಯಸುವ ಚಾಟ್ ಅನ್ನು ಆಯ್ಕೆಮಾಡಿ.
  • ಮೇಲಿನ ಮೂರು ಆಯ್ಕೆಗಳು ಕಾಣಿಸಿಕೊಳ್ಳುತ್ತವೆ. ಪಿನ್ ಮಾಡಿ, ಮ್ಯೂಟ್ ಮಾಡಿ ಮತ್ತು ಆರ್ಕೈವ್ ಮಾಡಿ. ಆರ್ಕೈವ್ ಬಟನ್ ಮೇಲೆ ಕ್ಲಿಕ್ ಮಾಡಿ.
  • ಈ ಆರ್ಕೈವ್ ವಿಭಾಗವು ನಿಮ್ಮ ಚಾಟ್ ಫೀಡ್‌ನ ಮೇಲ್ಭಾಗದಲ್ಲಿ ಕಾಣಿಸುತ್ತದೆ. ನೀವು ವಿಭಾಗಕ್ಕೆ ಹೋಗಬಹುದು ಮತ್ತು ನಿಮ್ಮ ಖಾಸಗಿ ಚಾಟ್‌ಗಳನ್ನು ಯಾವುದೇ ಸಮಯದಲ್ಲಿ ವೀಕ್ಷಿಸಬಹುದು.
  • ಅನ್ ಆರ್ಕೈವ್ ಆಯ್ಕೆಯ ಮೇಲೆ ಕ್ಲಿಕ್ ಮಾಡುವ ಮೂಲಕ ಬಳಕೆದಾರರು ಆ ಚಾಟ್ ಅನ್ನು ಅನ್ ಆರ್ಕೈವ್ ಮಾಡಬಹುದು.
  • ನೀವು ಎಲ್ಲಾ ಚಾಟ್‌ಗಳನ್ನು ಆರ್ಕೈವ್ ಮಾಡಲು ಬಯಸಿದರೆ, ಚಾಟ್ಸ್ ಟ್ಯಾಬ್‌ಗೆ ಹೋಗಿ
  • ಇನ್ನಷ್ಟು ಮೇಲೆ ಟ್ಯಾಪ್ ಮಾಡಿ ಮತ್ತು ನಂತರ ಸೆಟ್ಟಿಂಗ್‌ಗಳಿಗೆ ಹೋಗಿ. ಅಲ್ಲಿ ಚಾಟ್ಸ್ ಮೇಲೆ ಟ್ಯಾಪ್ ಮಾಡಿ
  • ಈಗ ಚಾಟ್ ಹಿಸ್ಟರಿಗೆ ಹೋಗಿ ಮತ್ತು ಎಲ್ಲಾ ಚಾಟ್‌ಗಳನ್ನು ಆರ್ಕೈವ್ ಮಾಡಿ.

iQoo Neo 6: ಭಾರತಕ್ಕೆ ಅಪ್ಪಳಿಸಲಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ ನಿಯೋ 6 5G: ಮೇ 31ಕ್ಕೆ ರಿಲೀಸ್

ಗಮನಿಸಿ: ಆರ್ಕೈವ್ ಮಾಡಿದ ವೈಯಕ್ತಿಕ ಅಥವಾ ಗುಂಪು ಚಾಟ್‌ಗಳು ಆ ವ್ಯಕ್ತಿ ಅಥವಾ ಗುಂಪು ಚಾಟ್‌ನಿಂದ ಹೊಸ ಸಂದೇಶವನ್ನು ಸ್ವೀಕರಿಸಿದಾಗ ಆರ್ಕೈವ್ ಆಗಿರುತ್ತವೆ. ಆರ್ಕೈವ್ ಮಾಡಿದ ಚಾಟ್‌ಗಳಲ್ಲಿ ಮೆನ್ಶನ್ ಮಾಡಿದರೆ ಅಥವಾ ಉತ್ತರಿಸಿದರೆ ಮಾತ್ರ ನೋಟಿಫಿಕೇಶನ್ ಬರುತ್ತದೆ. ಇಲ್ಲದಿದ್ದರೆ ಬರುವುದಿಲ್ಲ.

ತಾತ್ಕಾಲಿಕವಾಗಿ ಚಾಟ್ ಮರೆ ಮಾಡುವುದು ಹೇಗೆ?:

ನಿಮ್ಮ ವಾಟ್ಸ್ ಆಪ್ ತೆರೆಯಿರಿ. ಯಾವ ವ್ಯಕ್ತಿಯ ಚಾಟ್​ನ್ನು ನೀವು ಮರೆ ಮಾಡಬೇಕೆಂದಿದ್ದೀರೋ ಆ ಚಾಟ್ ಮೇಲೆ ಒತ್ತಿ ಹಿಡಿಯಿರಿ. ಆ ಚಾಟ್ ಸೆಲೆಕ್ಟ್ ಆದ ಕೂಡಲೇ ಮೇಲ್ಭಾಗದಲ್ಲಿ ಆರ್ಕೈವ್ ಬಾಕ್ಸ್ (ಚಿಕ್ಕ ಬಾಣದ ಗುರುತು ಕೆಳಮುಖ ಮಾಡಿರುವ ಪುಟ್ಟ ಬಾಕ್ಸ್ ) ಕಾಣಿಸುತ್ತದೆ. ಅದನ್ನು ಕ್ಲಿಕ್ಕಿಸಿ. ಈಗ ನಿಮ್ಮ ಚಾಟ್ ಲಿಸ್ಟ್ ನಿಂದ ಆ ವ್ಯಕ್ತಿಯ ಚಾಟ್ ಮರೆಯಾಗುತ್ತದೆ. ವೈಯಕ್ತಿಕ ಖಾತೆ ಮಾತ್ರ ಅಲ್ಲ ಗ್ರೂಪ್ ಚಾಟ್ ಕೂಡಾ ಇದೇ ರೀತಿ ಬಚ್ಚಿಡಬಹುದು.

ಇದನ್ನೂ ಓದಿ

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada