AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Tips: ಮೊಬೈಲ್​ನಲ್ಲಿ ಡೇಟಾ ಆನ್ ಮಾಡದೆ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಕಳುಹಿಸುವ ಟ್ರಿಕ್ ಗೊತ್ತೇ?

Tips and Tricks: ಫೋನ್ ಇಲ್ಲದೆ ಅಥವಾ ಇಂಟರ್ನೆಟ್ ಇಲ್ಲದೆ ನಿಮ್ಮ ಸ್ನೇಹಿತರು, ಕುಟುಂಬದವರು ಅಥವಾ ಯಾರ ಜೊತೆ ಬೇಕಾದರು ಚಾಟ್ ಮಾಡಬಹುದಾದ ಆಯ್ಕೆಯನ್ನು ವಾಟ್ಸ್​​ಆ್ಯಪ್ ನೀಡಿದೆ. ಇದು ಹೇಗೆ ಅಂತೀರಾ?, ಇಲ್ಲಿದೆ ನೋಡಿ ಟ್ರಿಕ್

WhatsApp Tips: ಮೊಬೈಲ್​ನಲ್ಲಿ ಡೇಟಾ ಆನ್ ಮಾಡದೆ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಕಳುಹಿಸುವ ಟ್ರಿಕ್ ಗೊತ್ತೇ?
Whatsapp Tricks
TV9 Web
| Edited By: |

Updated on: Sep 04, 2022 | 6:45 AM

Share

ಫೋನ್ ಇಲ್ಲದೆಯೇ ಅಥವಾ ನಿಮ್ಮ ಬಳಿಕ ಇರುವ ಸ್ಮಾರ್ಟ್​ಫೋನ್​ನಲ್ಲಿ ಮೊಬೈಲ್ ಡೇಟಾ ಆನ್ ಮಾಡದೆಯೇ ಸ್ನೇಹಿತರು, ಕುಟುಂಬದವರು ಅಥವಾ ಯಾರ ಜೊತೆ ಬೇಕಾದರು ಚಾಟ್ ಮಾಡಬಹುದಾದ ಆಯ್ಕೆಯನ್ನು ವಾಟ್ಸ್​​ಆ್ಯಪ್ ನೀಡಿದೆ. ಅರೇ ಫೋನ್ ಇಲ್ಲದೆ ಅಥವಾ ಇಂಟರ್ನೆಟ್ ಇಲ್ಲದೆ ಇದು ಹೇಗೆ ಅಂತೀರಾ?. ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ಇತ್ತೀಚೆಗಷ್ಟೆ ನಿರೀಕ್ಷೆಗೂ ಮೀರಿದ ವಿಶೇಷ ಫೀಚರ್ (New WhatsApp Feature) ಒಂದನ್ನು ಪರಿಚಯಿಸಿತ್ತು. ಅದುವೆ ನಿಮ್ಮ ವಾಟ್ಸ್​ಆ್ಯಪ್ ಖಾತೆಯನ್ನು ಒಂದೇ ಸಮಯದ ವೇಳೆ ಬೇರೆ ಬೇರೆ ಡಿವೈಸ್​ಗೆ ಲಿಂಕ್ ಮಾಡುವುದು. ಈ ಮೂಲಕ ವಾಟ್ಸ್​ಆ್ಯಪ್ ಅನ್ನು ಹಲವು ಡಿವೈಸ್​ಗಳಲ್ಲಿ (WhatsApp Multiple Device) ಬಳಕೆ ಮಾಡಬಹುದಾಗಿದೆ. ಒಂದು ಬಾರಿ ನಿಮ್ಮ ಮೊಬೈಲ್ ಮೂಲಕ ಲಿಂಕ್ ಮಾಡಿದರೆ ನಂತರ ಆ ಮೊಬೈಲ್ ಲಿಂಕ್ ಮಾಡಿದ ಡಿವೈಸ್ ಹತ್ತಿರ ಇರಬೇಕೆಂದಿಲ್ಲ.

ಅಂದರೆ ಈ ಮಲ್ಟಿಡಿವೈಸ್ ಫೀಚರ್‌ ಬಳಸಿಕೊಂಡು ಬಳಕೆದಾರರು ಒಂದೇ ಸಮಯದಲ್ಲಿ ನಾಲ್ಕು ಸಾಧನಗಳು ಮತ್ತು ಒಂದು ಫೋನ್ ಅನ್ನು ಸಂಪರ್ಕಿಸಬಹುದು. ಒಂದೇ ವಾಟ್ಸ್​​​ಆ್ಯಪ್ ಅನ್ನು ಇತರೆ ಮೂರು ಲ್ಯಾಪ್ಟರ್ ಅಥವಾ ಡೆಸ್ಕ್​ಟಾಪ್​ನಲ್ಲಿ ವಾಟ್ಸ್​ಆ್ಯಪ್ ಬಳಸಬಹುದು. ಆದರೆ, ಫೋನ್ 14 ದಿನಗಳವರೆಗೆ ನಿಷ್ಕ್ರಿಯವಾಗಿದ್ದರೆ ಸಂಪರ್ಕಿತ ಸಾಧನಗಳು ಸಂಪರ್ಕ ಕಡಿತಗೊಳ್ಳುತ್ತವೆ.

  1. ಈ ಫೀಚರ್ ಅನ್ನು ಬಳಸಬೇಕಾದರೆ ನಿಮ್ಮ ಮೊಬೈಲ್‌ನಲ್ಲಿ ವಾಟ್ಸ್​​ಆ್ಯಪ್​ ಮೇಲೆ ಕ್ಲಿಕ್ ಮಾಡಿ ಮತ್ತು ಮೂರು–ಡಾಟ್ ಮೆನು ಮೇಲೆ ಟ್ಯಾಪ್ ಮಾಡಿ.
  2. ಲಿಂಕ್ ಮಾಡಲಾದ ಸಾಧನಗಳನ್ನು ಆಯ್ಕೆಮಾಡಿ. ಐಒಎಸ್ ಬಳಕೆದಾರರಿಗೆ, ಸೆಟ್ಟಿಂಗ್‌ಗಳ ಐಕಾನ್ ಟ್ಯಾಪ್ ಮಾಡುವ ಮೂಲಕ ವಾಟ್ಸ್​ಆ್ಯಪ್​​ ಆಯ್ಕೆಮಾಡಿ ಲಿಂಕ್ಡ್ ಸಾಧನಗಳನ್ನು ಕ್ಲಿಕ್ ಮಾಡಿ, ಆಯ್ಕೆಮಾಡಿ.
  3. ಬಯೋಮೆಟ್ರಿಕ್ ದೃಢೀಕರಣದೊಂದಿಗೆ ನಿಮ್ಮ ಫೋನ್ ಅನ್ನು ಅನ್ಲಾಕ್ ಮಾಡಿ ಅಥವಾ ಪಿನ್ ನಮೂದಿಸಿ.
  4. web.whatsapp.com ಅಥವಾ WhatsApp ಅನ್ನು ಡೆಸ್ಕ್‌ಟಾಪ್ PC ಅಥವಾ ಲ್ಯಾಪ್‌ಟಾಪ್‌ನಲ್ಲಿ ತೆರೆಯಿರಿ.
  5. ಸೆಲ್ಫೋನ್ ಮೂಲಕ ಪರದೆಯ ಮೇಲೆ ಪ್ರದರ್ಶಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡಿ. ಈಗ ಲಿಂಕ್ ಆಗುತ್ತಿದೆ. ಈ ಮೂಲಕ ಉಪಯೋಗಿಸಬಹುದು. ಇಲ್ಲಿ ಸ್ಮಾರ್ಟ್​​ಫೋನ್​ನಲ್ಲಿ ಇಂಟರ್ನೆಟ್ ಆಫ್ ಇದ್ದರೂ, ಮೊಬೈಲ್ ಸ್ವಿಚ್ ಆಫ್ ಆಗಿದ್ದರೂ ಉಪಯೋಗಿಸಬಹುದಾಗಿದೆ.
  6. ಅನ್​ಲಿಂಕ್ ಮಾಡಲು ಬಳಕೆದಾರರು ತಮ್ಮ ವಾಟ್ಸ್​ಆ್ಯಪ್​ ಅನ್ನು ತೆರೆದು ಮೂರು–ಡಾಟ್ ಮೆನುವಿನಲ್ಲಿ ಟ್ಯಾಪ್ ಮಾಡಿ. ಲಿಂಕ್ ಮಾಡಲಾದ ಸಾಧನಗಳನ್ನು ಆಯ್ಕೆಮಾಡಿ. ಈಗ ನೀವು ಲಿಂಕ್ ಆದ ಡಿವೈಸ್​ಗಳ ಪಟ್ಟಿಯನ್ನು ಕಾಣುತ್ತೀರಿ. ಯಾವ ಡಿವೈಸ್ ಅನ್ನು ಅನ್​ಲಿಂಕ್ ಮಾಡಬೇಕು ಅದರ ಮೇಲೆ ಕ್ಲಿಕ್ ಮಾಡಿ ನಂತರ ಲಾಗೌಟ್ ಆಯ್ಕೆ ಸೆಲೆಕ್ಟ್ ಮಾಡಿ.

Follow Us
TV9 Web
TV9 Web

TV9 Kannada

Read More
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ