WhatsApp: ನಿಮ್ಮ ಫ್ರೆಂಡ್ಸ್ ನಿಮ್ಮನ್ನ ಹೈಡ್ ಮಾಡಿ ಏನು ಸ್ಟೇಟಸ್ ಹಾಕಿದ್ದಾರೆ ನೋಡಬೇಕೇ?: ಇಲ್ಲಿದೆ ಟ್ರಿಕ್

WhatsApp Tips and Tricks: ಈ ಆಯ್ಕೆ ನೇರವಾಗಿ ವಾಟ್ಸ್​ಆ್ಯಪ್​ನಲ್ಲಿಲ್ಲ. ಬದಲಾಗಿ ಇದಕ್ಕೆ ಮೊದಲು ನೀವು ಥರ್ಡ್ ಪಾರ್ಟಿ ಆ್ಯಪ್​ವೊಂದನ್ನು ಇನ್​ಸ್ಟಾಲ್ ಮಾಡಿಕೊಳ್ಳಬೇಕು. ಅದೇ ಜಿಬಿ ವಾಟ್ಸ್ಆ್ಯಪ್ (GBWhatsApp).

WhatsApp: ನಿಮ್ಮ ಫ್ರೆಂಡ್ಸ್ ನಿಮ್ಮನ್ನ ಹೈಡ್ ಮಾಡಿ ಏನು ಸ್ಟೇಟಸ್ ಹಾಕಿದ್ದಾರೆ ನೋಡಬೇಕೇ?: ಇಲ್ಲಿದೆ ಟ್ರಿಕ್
ಸಾಂದರ್ಭಿಕ ಚಿತ್ರ
Follow us
| Edited By: Vinay Bhat

Updated on: Jun 03, 2022 | 6:48 AM

ಮೆಟಾ (Meta) ಮಾಲೀಕತ್ವದ ಜನಪ್ರಿಯ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಇಂದು ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಎಲ್ಲ ಫೀಚರ್​ಗಳನ್ನು ಪರಿಯಿಸಿ ಜನಸಾಮಾನ್ಯರಿಗೆ ಸಾಕಷ್ಟು ಹತ್ತಿರವಾಗಿದೆ. ಇದಕ್ಕೆ ಸೆಡ್ಡುಹೊಡೆಯುವಂತಹ ಯಾವುದೇ ಇತರೆ ಆ್ಯಪ್ ಬಂದರೂ ವಾಟ್ಸ್​ಆ್ಯಪ್ (WhatsApp) ತನ್ನ ಸ್ಥಾನವನ್ನು ಇಷ್ಟರವರೆಗೆ ಬಿಟ್ಟುಕೊಟ್ಟಿಲ್ಲ. ಇದಕ್ಕಿಂತ ಆಕರ್ಷಕವಾದ ಫೀಚರ್​ಗಳು ಟೆಲಿಗ್ರಾಮ್ ಸೇರಿದಂತೆ ಇತರೆ ಮೆಸೇಜಿಂಗ್ ಆ್ಯಪ್​ಗಳಲ್ಲಿ ಇವೆ. ಆದರೆ, ವಾಟ್ಸ್​ಆ್ಯಪ್​ಗಿರುವಂತಹ ಕ್ರೇಜ್ ಮತ್ಯಾವುದಕ್ಕೂ ಇಲ್ಲ. ಇದಕ್ಕಾಗಿಯೇ ವಾಟ್ಸ್​ಆ್ಯಪ್ ಅನ್ನು ಹಿಂಬಾಲಿಸಿಕೊಂಡು ಅನೇಕ ಇತರೆ ಥರ್ಡ್ ಪಾರ್ಟಿ ಆ್ಯಪ್​ಗಳು ಕೂಡ ಹುಟ್ಟುಕೊಂಡಿವೆ. ತನ್ನ ಬಳಕೆದಾರರಿಗೆ ಸದಾ ಒಂದಲ್ಲ ಒಂದು ಅನುಕೂಲಕರ ಫೀಚರ್​​ಗಳನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್​ನಲ್ಲಿ ಸ್ಟೇಟಸ್ (WhatsApp Status) ಅಪ್ಲೋಡ್ ಮಾಡುವಾಗ ಯಾರಿಗೆ ಬೇಕು ಅವರಿಗೆ ಮಾತ್ರ ಕಾಣಿಸುವಂತೆ ಹಂಚಿಕೊಳ್ಳುವ ಆಯ್ಕೆ ಕೂಡ ಇದೆ.

ಹೌದು, ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಂಚಿಕೊಳ್ಳುವ ಮುನ್ನ ಸೆಟ್ಟಿಂಗ್​ಗೆ ಹೋಗಿ ಅಲ್ಲಿ ನಾವು ಅಪ್ಲೋಡ್ ಮಾಡುವ ಸ್ಟೇಟಸ್ ಎಲ್ಲರಿಗೆ ಕಾಣಬೇಕಾ? ಅಥವಾ ಕೆಲವರಿಗೆ ಮಾತ್ರ ಕಾಣುವಂತೆ ಮಾಡಬೇಕಾ ಎಂಬ ಆಯ್ಕೆಯಿದೆ. ಇದರಿಂದ ನಿಮ್ಮ ಸ್ನೇಹಿತರು ನಿಮಗೆ ಮಾತ್ರ ಕಾಣದಂತೆ ಹಾಗೂ ಉಳಿದವರೆಲ್ಲರಿಗೂ ಕಾಣುವಂತೆ ಸ್ಟೇಟಸ್ ಹಾಕಬಹುದು. ಹೀಗಿದ್ದಾಗ ಇದನ್ನು ನೋಡಲು ನಿಮಗೆ ವಾಟ್ಸ್​ಆ್ಯಪ್​ನಲ್ಲಿ ಸಾಧ್ಯವಿಲ್ಲ. ಆದರೆ, ಇದಕ್ಕೊಂದು ಟ್ರಿಕ್ ಇದೆ. ಹೀಗೆ ಮಾಡಿದರೆ ನಿಮ್ಮನ್ನ ಹೈಡ್ ಮಾಡಿ ನಿಮ್ಮ ಸ್ನೇಹಿತರು ಸ್ಟೇಟಸ್ ಹಾಕಿದರೆ ಅದನ್ನು ನೋಡಬಹುದು.

Vivo: ವಿವೋದ ಹೊಸ ಸ್ಮಾರ್ಟ್​​ಫೋನ್ ಫೀಚರ್ ಕಂಡು ಬೆರಗಾದ ಟೆಕ್ ಮಾರುಕಟ್ಟೆ: ಅಂಥದ್ದೇನಿದೆ ನೋಡಿ

ಇದನ್ನೂ ಓದಿ
Image
WhatsApp: ಇನ್ನಾದರೂ ಎಚ್ಚೆತ್ತುಕೊಳ್ಳಿ: 16 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆ ಬ್ಯಾನ್ ಮಾಡಿದ ವಾಟ್ಸ್​ಆ್ಯಪ್
Image
Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಸ್ಮಾರ್ಟ್‌ಫೋನ್‌: ಇದರ ಬೆಲೆ ಕೇವಲ 8,999 ರೂ.
Image
Redmi K50 Ultra: ಮಾರುಕಟ್ಟೆಗೆ ಬರುತ್ತಿದೆ 100W ಫಾಸ್ಟ್​ ಚಾರ್ಜಿಂಗ್​ನ ಹೊಸ ಫೋನ್: ಯಾವುದು?, ಬೆಲೆ ಎಷ್ಟು?
Image
WhatsApp: ವಾಟ್ಸ್​ಆ್ಯಪ್​ನಲ್ಲಿ ಲೈವ್ ಲೊಕೇಶನ್ ಶೇರ್ ಮಾಡಲು ಈ ಟ್ರಿಕ್ ಉಪಯೋಗಿಸಿ

ಆದರೆ, ಈ ಆಯ್ಕೆ ನೇರವಾಗಿ ವಾಟ್ಸ್​ಆ್ಯಪ್​ನಲ್ಲಿಲ್ಲ. ಬದಲಾಗಿ ಇದಕ್ಕೆ ಮೊದಲು ನೀವು ಥರ್ಡ್ ಪಾರ್ಟಿ ಆ್ಯಪ್​ವೊಂದನ್ನು ಇನ್​ಸ್ಟಾಲ್ ಮಾಡಿಕೊಳ್ಳಬೇಕು. ಅದೇ ಜಿಬಿ ವಾಟ್ಸ್ಆ್ಯಪ್ (GBWhatsApp). ಈ ಆ್ಯಪ್ ಅನ್ನು ಡೌನ್ಲೋಡ್ ಮಾಡಿ ಇನ್​ಸ್ಟಾಲ್ ಮಾಡಿದ ಬಳಿಕ ಆ್ಯಪ್ ಐಕಾಲ್ ಮೇಲೆ ಕ್ಲಿಕ್ ಮಾಡಿ. ಓಪನ್ ಆದ ಕೂಡಲೆ ಬಲ ಬದಿಯಲ್ಲಿರುವ ಮೂರು ಡಾಟ್ ಮೇಲೆ ಒತ್ತಿ. ಈ ಸಂದರ್ಭ ಕೆಳಗಡೆ ಹೈಡ್ ವೀವ್ ಸ್ಟೇಟಸ್ (Hide View Status) ಎಂಬ ಆಯ್ಕೆ ಕಾಣುತ್ತದೆ. ಇದನ್ನು ಒತ್ತಿದರೆ ನಿಮ್ಮನ್ನ ಹೈಡ್ ಮಾಡಿ ಸ್ಟೇಟಸ್ ಹಾಕಿದವರು ಯಾರು?, ಯಾವ ಸ್ಟೇಟಸ್ ಹಾಕಿದ್ದಾರೆ ಎಂಬುದು ಕಾಣಿಸುತ್ತದೆ. ಅಷ್ಟೇ ಅಲ್ಲದೆ ನಿಮ್ಮನ್ನ ಬ್ಲಾಕ್ ಮಾಡಿರುವವರ ಸ್ಟೇಟಸ್ ಕೂಡ ಇದರಲ್ಲಿ ನೋಡಬಹುದು.

ಆದರೆ, ಇದೊಂದು ಥರ್ಡ್ ಪಾರ್ಟಿ ಆ್ಯಪ್ ಆಗಿದ್ದು ಬಳಕೆ ಮಾಡುವ ಮುನ್ನ ಎಚ್ಚರವಹಿಸಿ. ಈ ಆ್ಯಪ್ ನಿಮ್ಮ ಖಾಸಗಿ ಮಾಹಿತಿಯನ್ನು ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೆ ಈ ಆಯ್ಕೆ ಜಿಬಿ ವಾಟ್ಸ್ಆ್ಯಪ್​ನ ನೂತನ ಆವೃತ್ತಿಯಲ್ಲಿ ಕೊಂಚ ಬದಲಾವಣೆ ಹೊಂದಿದೆ.

ಇದೇ ವಾಟ್ಸ್​ಆ್ಯಪ್​ನಲ್ಲಿ ನೀವು ನಿಮ್ಮ ಕಾಂಟ್ಯಾಕ್ಟ್​ನಲ್ಲಿರುವ ಸ್ನೇಹಿತರ ವಾಟ್ಸ್ಆ್ಯಪ್ ಸ್ಟೇಟಸ್ ಅನ್ನು ಅವರಿಗೆ ತಿಳಿಯದಂತೆ ವೀಕ್ಷಿಸಬಹುದಾಗಿದೆ.  ಇದಕ್ಕಾಗಿ ನಿಮ್ಮ ಫೋನಿನಲ್ಲಿನ ವಾಟ್ಸ್ಆ್ಯಪ್ ಅಪ್ಲಿಕೇಶನ್​ಗೆ ಹೋಗಿ ಸೆಟ್ಟಿಂಗ್ ಮೆನು ತೆರೆಯಿರಿ. ನಂತರ ಪ್ರೈವಸಿ ಸೆಟ್ಟಿಂಗ್ ಕೆಳಗೆ ಸ್ಕ್ರಾಲ್ ಮಾಡಿ. ನೀವು ಅಲ್ಲಿ ಕೆಲವು ಆಯ್ಕೆಗಳನ್ನು ನೋಡಲು ಸಾಧ್ಯವಾಗುತ್ತದೆ. ಸ್ಕ್ರೀನ್ ಕೆಳಭಾಗದಲ್ಲಿರುವ Read receipts ಆಯ್ಕೆಯನ್ನು ನಿಷ್ಕ್ರಿಯಗೊಳಿಸಿ. ಅದನ್ನು ಸಕ್ರಿಯಗೊಳಿಸಿದ ನಂತರ, ನಿಮ್ಮ ಕಾಂಟ್ಯಾಕ್ಟ್​ನಲ್ಲಿರುವ ಬಳಕೆದಾರರ ವಾಟ್ಸ್ಆ್ಯಪ್ ಸ್ಟೇಟಸ್ ಅನ್ನು ನೀವು ವೀಕ್ಷಿಸಿದ್ದಿರಾ ಅಥವಾ ಇಲ್ಲವೇ ಎಂಬುದು ಅವರಿಗೆ ತಿಳಿಯುವುದಿಲ್ಲ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್