ಮೆಟಾ (Meta) ಒಡೆತನದ ವಾಟ್ಸ್ಆ್ಯಪ್ ಅಪ್ಲೆಕೇಶನ್ ಅನ್ನು ಇಂದು ಅನೇಕ ಜನರು ಬಳಕೆ ಮಾಡುತ್ತಿದ್ದು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಹಾಗೆಯೇ ಬಳಕೆದಾರರ ಖಾಸಗಿ ಮಾಹಿತಿ ಸುರಕ್ಷತೆಗೂ ಕೆಲವೊಂದು ಆಯ್ಕೆಗಳನ್ನು ನೀಡಿದೆ. ಆದರೆ, ಕೆಲವೊಂದು ತೀರಾ ವೈಯಕ್ರಿವಾದ ವಿಷಯಗಳನ್ನು ಯಾರಿಗೂ ಕಾಣದಂರೆ ಹೈಡ್ ಮಾಡಬೇಕಾದ ಅನಿವಾರ್ಯತೆ ಇರುತ್ತದೆ. ಈ ಆಯ್ಕೆಯನ್ನ ವಾಟ್ಸ್ಆ್ಯಪ್ (WhatsApp) ತನ್ನ ಬಳಕೆದಾರರಿಗೆ ನೇರವಾಗಿ ನೀಡಲ್ಲ. ಹಾಗಂತ ಅದಕ್ಕಾಗಿ ಥರ್ಡ್ ಪಾರ್ಟಿ ಆ್ಯಪ್ಗಳ ಅಗತ್ಯವಿಲ್ಲ. ನಿಮ್ಮ ವಾಟ್ಸ್ಆಪ್ನಲ್ಲಿಯೇ ಚಾಟ್ ಮರೆ ಮಾಡುವ ಫೀಚರ್ ಇದೆ. ಅದೇ ಆರ್ಕೈವ್ಡ್ (Archived). ಈ ರೀತಿ ಆರ್ಕೈವ್ ಮಾಡಿದ ಚಾಟ್‌ಗಳು ಡಿಲೀಟ್ ಆಗುವುದಿಲ್ಲ. ಅವುಗಳು ನಿಮ್ಮ ಫೋನ್ನಲ್ಲಿಯೇ ಇರುತ್ತವೆ. ಆದರೆ ಚಾಟ್ ಲಿಸ್ಟ್ನಲ್ಲಿ ಇವು ಕಾಣಿಸುವುದಿಲ್ಲ. ಈ ಆಯ್ಕೆಯ ನೆರವಿನಿಂದ ಬಳಕೆದಾರರು ಅನಗತ್ಯ ಚಾಟ್‌ಗಳನ್ನು ಹಾಗೂ ಸಂಭಾಷಣೆಗಳನ್ನು ಶಾಶ್ವತವಾಗಿ ಕೂಡ ಮರೆಮಾಡಬಹುದು.
ಆರ್ಕೈವ್ಡ್ ಫೀಚರ್ ಮುಖಾಂತರ ನೀವು ನಿಮ್ಮ ಚಾಟ್ ಸ್ಕ್ರೀನ್ ಅನ್ನು ಹೈಡ್ ಮಾಡಬಹುದು ಮತ್ತು ಕೆಲವು ಸಮಯದ ನಂತರ ನಿಮಗೆ ಅಗತ್ಯವಿದ್ದಾಗ ಆ ಚಾಟಿನ ಮಾತುಕತೆಗಳನ್ನು ಅನ್ಹೈಡ್ ಮಾಡಿ ನೋಡುವುದಕ್ಕೂ ಅವಕಾಶವಿರುತ್ತದೆ. ಕೇವಲ ನಿಮ್ಮ ವೈಯಕ್ತಿಕ ಚಾಟ್ ಮಾತ್ರವಲ್ಲದೆ ಗ್ರೂಪ್ ಚಾಟ್ ಎರಡನ್ನೂ ಕೂಡ ಆರ್ಕೈವ್ ಮಾಡುವುದಕ್ಕೆ ಈ ಫೀಚರ್ ನಲ್ಲಿ ಅವಕಾಶವಿರುತ್ತದೆ.
ವಾಟ್ಸ್ಆ್ಯಪ್ನಲ್ಲಿ ಶಾಶ್ವತವಾಗಿ ಚಾಟ್ ಹೈಡ್ ಮಾಡುವುದು ಹೇಗೆ?:
ಗಮನಿಸಿ: ಆರ್ಕೈವ್ ಮಾಡಿದ ವೈಯಕ್ತಿಕ ಅಥವಾ ಗುಂಪು ಚಾಟ್‌ಗಳು ಆ ವ್ಯಕ್ತಿ ಅಥವಾ ಗುಂಪು ಚಾಟ್‌ನಿಂದ ಹೊಸ ಸಂದೇಶವನ್ನು ಸ್ವೀಕರಿಸಿದಾಗ ಆರ್ಕೈವ್ ಆಗಿರುತ್ತವೆ. ಆರ್ಕೈವ್ ಮಾಡಿದ ಚಾಟ್‌ಗಳಲ್ಲಿ ಮೆನ್ಶನ್ ಮಾಡಿದರೆ ಅಥವಾ ಉತ್ತರಿಸಿದರೆ ಮಾತ್ರ ನೋಟಿಫಿಕೇಶನ್ ಬರುತ್ತದೆ. ಇಲ್ಲದಿದ್ದರೆ ಬರುವುದಿಲ್ಲ.
ತಾತ್ಕಾಲಿಕವಾಗಿ ಚಾಟ್ ಮರೆ ಮಾಡುವುದು ಹೇಗೆ?:
ನಿಮ್ಮ ವಾಟ್ಸ್ ಆಪ್ ತೆರೆಯಿರಿ. ಯಾವ ವ್ಯಕ್ತಿಯ ಚಾಟ್ನ್ನು ನೀವು ಮರೆ ಮಾಡಬೇಕೆಂದಿದ್ದೀರೋ ಆ ಚಾಟ್ ಮೇಲೆ ಒತ್ತಿ ಹಿಡಿಯಿರಿ. ಆ ಚಾಟ್ ಸೆಲೆಕ್ಟ್ ಆದ ಕೂಡಲೇ ಮೇಲ್ಭಾಗದಲ್ಲಿ ಆರ್ಕೈವ್ ಬಾಕ್ಸ್ (ಚಿಕ್ಕ ಬಾಣದ ಗುರುತು ಕೆಳಮುಖ ಮಾಡಿರುವ ಪುಟ್ಟ ಬಾಕ್ಸ್ ) ಕಾಣಿಸುತ್ತದೆ. ಅದನ್ನು ಕ್ಲಿಕ್ಕಿಸಿ. ಈಗ ನಿಮ್ಮ ಚಾಟ್ ಲಿಸ್ಟ್ ನಿಂದ ಆ ವ್ಯಕ್ತಿಯ ಚಾಟ್ ಮರೆಯಾಗುತ್ತದೆ. ವೈಯಕ್ತಿಕ ಖಾತೆ ಮಾತ್ರ ಅಲ್ಲ ಗ್ರೂಪ್ ಚಾಟ್ ಕೂಡಾ ಇದೇ ರೀತಿ ಬಚ್ಚಿಡಬಹುದು.
Amazon Fab Phones Fest sale: ಕೇವಲ 6,299 ರೂ. ಗೆ ಮಾರಾಟವಾಗುತ್ತಿದೆ ಈ ಫೋನ್: ಆಫರ್ ಮಿಸ್ ಮಾಡ್ಬೇಡಿ
Realme 9 4G: 108MP ಕ್ಯಾಮೆರಾ, ಕೇವಲ 17,999 ರೂ.: ರಿಯಲ್ ಮಿ 9 ಫೋನ್ ಈಗ ಖರೀದಿಗೆ ಲಭ್ಯ
Published On - 2:51 pm, Tue, 12 April 22