WhatsApp: ವಾಟ್ಸ್​ಆ್ಯಪ್​ ಆನ್​ಲೈನ್ ಸ್ಟೇಟಸ್​​ನಲ್ಲಿ ಮಹತ್ವದ ಬದಲಾವಣೆ: ಬರುತ್ತಿದೆ ಹೊಸ ಫೀಚರ್

| Updated By: Vinay Bhat

Updated on: Jul 09, 2022 | 12:52 PM

WhatsApp New Feature: ಇದೀಗ ವಾಟ್ಸ್​ಆ್ಯಪ್​ ಮತ್ತೊಂದು ಅತ್ಯಗತ್ಯ ಫೀಚರ್ಸ್‌ನಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಹೌದು ವಾಟ್ಸ್​ಆ್ಯಪ್ ಸದ್ಯದಲ್ಲೇ ನಿರ್ದಿಷ್ಟ ಜನರಿಂದ ಆನ್‌ಲೈನ್‌ ಸ್ಟೇಟಸ್‌ ಹೈಡ್‌ ಮಾಡುವ ಹೊಸ ಆಯ್ಕೆಯನ್ನು ಸೇರ್ಪಡೆ ಮಾಡಲು ಮುಂದಾಗಿದೆ.

WhatsApp: ವಾಟ್ಸ್​ಆ್ಯಪ್​ ಆನ್​ಲೈನ್ ಸ್ಟೇಟಸ್​​ನಲ್ಲಿ ಮಹತ್ವದ ಬದಲಾವಣೆ: ಬರುತ್ತಿದೆ ಹೊಸ ಫೀಚರ್
WhatsApp
Follow us on

ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ದಿನದಿಂದ ದಿನಕ್ಕೆ ವಾಟ್ಸ್​ಆ್ಯಪ್​​ (WhatsApp) ತನ್ನ ಫೀಚರ್ ಅಪ್ಡೇಟ್ ಮಾಡುತ್ತಲೇ ಇದ್ದು ಮತ್ತಷ್ಟು ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಇದೀಗ ವಾಟ್ಸ್​ಆ್ಯಪ್​ ಮತ್ತೊಂದು ಅತ್ಯಗತ್ಯ ಫೀಚರ್ಸ್‌ನಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಹೌದು ವಾಟ್ಸ್​ಆ್ಯಪ್ ಸದ್ಯದಲ್ಲೇ ನಿರ್ದಿಷ್ಟ ಜನರಿಂದ ಆನ್‌ಲೈನ್‌ ಸ್ಟೇಟಸ್‌ (Online Status) ಹೈಡ್‌ ಮಾಡುವ ಹೊಸ ಆಯ್ಕೆಯನ್ನು ಸೇರ್ಪಡೆ ಮಾಡಲು ಮುಂದಾಗಿದೆ. ಅಂದರೆ ನಿಮಗೆ ಬೇಡ ಎನಿಸುವ ಜನರನ್ನು ಆನ್‌ಲೈನ್‌ ಸ್ಟೇಟಸ್‌ ನೋಡದಂತೆ ಹೈಡ್‌ ಮಾಡುವ ಆಯ್ಕೆ ಇದಾಗಿದೆ. ಇದರಿಂದ ಬಳಕೆದಾರರು ಆನ್‌ಲೈನ್‌ನಲ್ಲಿರುವಾಗ ಯಾರು ನೋಡಬಹುದು ಎಂಬುದನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತದೆ.

ಸಾಮಾನ್ಯವಾಗಿ ನಿಮ್ಮ ಕಂಟ್ಯಾಕ್ಟ್‌ ಲಿಸ್ಟ್‌ನಲ್ಲಿರುವವರಿಗೆ ನೀವು ಆನ್‌ಲೈನ್‌ನಲ್ಲಿದ್ದರೆ ತಿಳಿಯುತ್ತದೆ. ಆದರೆ ಈ ಹೊಸ ಆಯ್ಕೆಯು ಸೇರ್ಪಡೆಯಾದ ನಂತರ ನೀವು ಬಯಸದ ವ್ಯಕ್ತಿಗಳು ಆನ್‌ಲೈನ್‌ ಸ್ಟೇಟಸ್‌ ನೋಡದಂತೆ ಮಾಡುವುದಕ್ಕೆ ನಿಮಗೆ ಅವಕಾಶ ಸಿಗಲಿದೆ. ಈ ಆಯ್ಕೆಯ ಮೂಲಕ ಬಳಕೆದಾರರು ಆನ್‌ಲೈನ್‌ನಲ್ಲಿರುವಾಗ ಯಾರು ನೋಡಬಹುದು ಎಂಬುದನ್ನು ಆಯ್ಕೆ ಮಾಡಲು ಸಾಧ್ಯವಾಗಲಿದೆ. ಪ್ರಸ್ತುತ ಈ ಫೀಚರ್ ಇನ್ನೂ ಅಭಿವೃದ್ಧಿ ಹಂತದಲ್ಲಿದ್ದು ಆದಷ್ಟು ಬೇಗ ಬಳಕೆದಾರರಿಗೆ ಸಿಗಲಿದೆಯಂತೆ.

Infinix Note 12 5G: ಭಾರತದಲ್ಲಿ 108MP ಕ್ಯಾಮೆರಾದ ಹೊಸ ಫೋನ್ ಬಿಡುಗಡೆ: ಬೆಲೆ ಕೇವಲ 17,999 ರೂ.

ಇದನ್ನೂ ಓದಿ
Realme C35: ಭಾರತದಲ್ಲಿ ರಿಯಲ್ ಮಿ C35 6GB, 128GB ಸ್ಟೋರೆಜ್ ಬಿಡುಗಡೆ: ಇದು ಬಜೆಟ್ ಬೆಲೆಯ ಬೆಸ್ಟ್​ ಫೋನ್
Amazon Prime Day Sale 2022: ಅಮೆಜಾನ್​ನಿಂದ ಬಹುನಿರೀಕ್ಷಿತ ಪ್ರೈಮ್ ಡೇ ಸೇಲ್ ಘೋಷಣೆ: ಯಾವಾಗ?, ಏನು ಆಫರ್?
Infinix Note 12 5G: ಭಾರತದಲ್ಲಿ ಇನ್ಫಿನಿಕ್ಸ್​ನಿಂದ ನೋಟ್‌ 12 ಸರಣಿಯ 5G ಆವೃತ್ತಿ ಇಂದು ಬಿಡುಗಡೆ
OnePlus TV 50 Y1S Pro: ಹೊಸ ಟಿವಿ ಬೇಕಿದ್ದರೆ ಇಂದೇ ನೋಡಿ: ಮೊದಲ ಸೇಲ್​ನಲ್ಲಿ ಒನ್‌ ಪ್ಲಸ್​ನ ಈ ಟಿವಿಗೆ ಭರ್ಜರಿ ರೆಸ್ಪಾನ್ಸ್

ಇನ್ನು ವಾಟ್ಸ್​ಆ್ಯಪ್​ನಲ್ಲಿ ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ಹೊಸ ಆಯ್ಕೆ ಸದ್ಯದಲ್ಲೇ ಸಿಗಲಿದೆ. ಅದೇನೆಂದರೆ ವಾಟ್ಸ್​ಆ್ಯಪ್​ ಡಿಲಿಟ್‌ ಫಾರ್‌ ಎವರಿಒನ್‌ ಫೀಚರ್​ನ ಲಿಮಿಟ್‌ ಅನ್ನು ಹೆಚ್ಚಿಸಲಾಗಿದೆ. ಅಂದರೆ ಮಾಡಿದ ಮೆಸೇಜ್ ಅನ್ನು ಯಾರಿಗೂ ಕಾಣದಂತೆ ಡಿಲೀಟ್ ಮಾಡಲು ಹೆಚ್ಚಿನ ಕಾಲವಕಾಶ ನೀಡಲಾಗಿದೆ.

ಪ್ರಸ್ತುತ ವಾಟ್ಸ್​ಆ್ಯಪ್​​ ಬಳಕೆದಾರರು ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ತಾವು ಸೆಂಡ್‌ ಮಾಡಿದ ಸಂದೇಶವನ್ನು ಹಂಚಿಕೊಂಡ ಸಮಯದಿಂದ ಒಂದು ಗಂಟೆ ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳ ಅವಧಿಯಲ್ಲಿ ಡಿಲೀಟ್‌ ಮಾಡಬಹುದು. ಇದೀಗ ಇದರ ಟೈಂ ಲಿಮಿಟ್‌ ಅನ್ನು ಹೆಚ್ಚಿಸಲಾಗಿದೆ. ಮೆಟಾ ಕಂಪನಿ ಇದೀಗ ಈ ಸಮಯವನ್ನು ಬರೋಬ್ಬರಿ ಎರಡು ದಿನಗಳಿಗೆ ವಿಸ್ತರಿಸಲು ಮುಂದಾಗಿದೆ. ಇದರಿಂದ ನೀವು ಸಂದೇಶವನ್ನು ಕಳುಹಿಸಿದ ಎರಡು ದಿನಗಳ ನಂತರ ಡಿಲೀಟ್‌ ಫಾರ್‌ ಎವರಿಒನ್‌ ಬಳಸಿ ಡಿಲೀಟ್‌ ಮಾಡಬಹುದಾಗಿದೆ.

ಸದ್ಯಕ್ಕೆ ಈ ಹೊಸ ಫೀಚರ್ ವಾಟ್ಸ್​ಆ್ಯಪ್​ ಬೀಟಾದ ಇತ್ತೀಚಿನ ಆವೃತ್ತಿಯನ್ನು ಬಳಸುತ್ತಿರುವ ಆಯ್ದ ಬಳಕೆದಾರರಿಗೆ ಲಭ್ಯವಿದೆ ಎನ್ನಲಾಗಿದೆ. ಅದರಂತೆ ಈ ಫೀಚರ್ಸ್‌ ಒಂದು ಗಂಟೆ, ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳಿಂದ ಎರಡು ದಿನಗಳು ಮತ್ತು 12 ಗಂಟೆಗಳವರೆಗೆ ಹೆಚ್ಚಿಸಲು ಪ್ಲಾನ್‌ ಮಾಡಿದೆ. ಆದಷ್ಟು ಬೇಗ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಈ ಆಯ್ಕೆ ಸಿಗಲಿದೆಯಂತೆ.

Realme C35: ಭಾರತದಲ್ಲಿ ರಿಯಲ್ ಮಿ C35 6GB, 128GB ಸ್ಟೋರೆಜ್ ಬಿಡುಗಡೆ: ಇದು ಬಜೆಟ್ ಬೆಲೆಯ ಬೆಸ್ಟ್​ ಫೋನ್