WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿ ಫೀಚರ್:​ ಗ್ರೂಪ್ ಅಡ್ಮಿನ್​ಗಳು ಇದನ್ನ ನೋಡಲೇಬೇಕು

WhatsApp New Feature: ಇದೀಗ ವಾಟ್ಸ್​ಆ್ಯಪ್​ ಡಿಲೀಟ್ ಮೆಸೇಜ್ ಆಯ್ಕೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಂದರೆ ವಾಟ್ಸ್ಆ್ಯಪ್ ಇದೀಗ ಗ್ರೂಪ್ ಅಡ್ಮಿನ್​ಗಳಿಗೆ ವಿಶೇಷ ಅಧಿಕಾರವೊಂದನ್ನು ನೀಡುವ ಫೀಚರ್ ಅನ್ನು ಪರಿಚಯಿಸುತ್ತಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿ ಫೀಚರ್:​ ಗ್ರೂಪ್ ಅಡ್ಮಿನ್​ಗಳು ಇದನ್ನ ನೋಡಲೇಬೇಕು
WhatsApp Group Admin
Follow us
| Updated By: Vinay Bhat

Updated on: Aug 02, 2022 | 12:13 PM

ವಾಟ್ಸ್​ಆ್ಯಪ್ (WhatsApp) ಒಂದರ ಹಿಂದೆ ಒಂದರಂತೆ ಹೊಸ ಹೊಸ ಫೀಚರ್​ಗಳನ್ನು ಘೋಷಣೆ ಮಾಡುತ್ತಲೇ ಇದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದೆ. ಹೀಗಿರುವಾಗ ಇದೀಗ ವಾಟ್ಸ್​ಆ್ಯಪ್​ ಡಿಲೀಟ್ ಮೆಸೇಜ್ ಆಯ್ಕೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಂದರೆ ವಾಟ್ಸ್ಆ್ಯಪ್ ಇದೀಗ ಗ್ರೂಪ್ ಅಡ್ಮಿನ್​ಗಳಿಗೆ (Group Admin) ವಿಶೇಷ ಅಧಿಕಾರವೊಂದನ್ನು ನೀಡುವ ಫೀಚರ್ ಅನ್ನು ಪರಿಚಯಿಸುತ್ತಿದೆ. ಈ ಹೊಸ ವೈಶಿಷ್ಟ್ಯಗಳು ಶೀಘ್ರದಲ್ಲೇ ಬರಲಿದೆ ಎಂದು ವರದಿಯಾಗಿದೆ. ಈ ನೂತನ ಆಯ್ಕೆಯ (New Feature) ಮೂಲಕ ಗ್ರೂಪ್‌ ಅಡ್ಮಿನ್‌ಗಳು ಸದಸ್ಯರ ಮೇಲೆ ಹೆಚ್ಚು ನಿಯಂತ್ರಣ ಸಾಧಿಸಬಹುದು.

ವಾಟ್ಸ್​ಆ್ಯಪ್ ಪರಿಚಯಿಸಲಿರುವ ಹೊಸ ಅಪ್ಡೇಟ್​ನ ಪ್ರಕಾರ ಗ್ರೂಪ್ ಅಡ್ಮಿನ್​ಗಳು ಗ್ರೂಪ್​ನಲ್ಲಿ ಬಂದ ಯಾವುದೇ ಮೆಸೇಜ್​ಗಳನ್ನು ಡಿಲೀಟ್ ಮಾಡುವ ಅಧಿಕಾರ ಹೊಂದಿರುತ್ತಾರೆ. ಇದು ಸ್ಪಾಮ್ ಮೆಸೇಜ್ ಅಥವಾ ಯಾವುದಾದರು ಅಶ್ಲೀಲ ಸಂಭಾಷಣೆ, ವಿಡಿಯೋ, ಫೋಟೋಗಳನ್ನು ತೆರವು ಮಾಡಲು ಸಹಕಾರಿ ಆಗುತ್ತಾದೆ. ಅಂದರೆ, ಗ್ರೂಪ್​ನಲ್ಲಿ ಬೇರೆ ಯಾರಾದರು ಅನಗತ್ಯ ಮೆಸೇಜ್​​ಗಳನ್ನು ಕಳುಹಿಸಿದರೆ ಅದನ್ನು ಅಡ್ಮಿನ್ ನೇರವಾಗಿ ಡಿಲೀಟ್ ಮಾಡಬಹುದಾಗಿದೆ.

ಗ್ರೂಪ್ ಅಡ್ಮಿನ್ ಡಿಲೀಟ್ ಮೆಸೇಜ್ ಆಯ್ಕೆ ಸದ್ಯಕ್ಕೆ ಪರೀಕ್ಷಾ ಹಂತದಲ್ಲಿದೆ. ಕೆಲ ಬೇಟಾ ಬಳಕೆದಾರರಿಗೆ ಈ ಆಯ್ಕೆ ನೀಡಲಾಗಿದೆ. ಮೆಸೇಜ್ ಡಿಲೀಟ್ ಆದ ಸಂದರ್ಭ This was removed by an admin ಎಂದು ಕಾಣಿಸುತ್ತದೆ. ಇದನ್ನು ಆಯ್ಕೆ ಮಾಡುವ ಮೂಲಕ ಅಡ್ಮಿನ್ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು.

ಇದನ್ನೂ ಓದಿ
Image
Best Laptops: ಭಾರತದಲ್ಲಿ ಸಿಗುತ್ತಿರುವ 30,000 ರೂ. ಒಳಗಿನ ಬೆಸ್ಟ್​ ಲ್ಯಾಪ್​ಟಾಪ್​ಗಳು ಇಲ್ಲಿದೆ ನೋಡಿ
Image
Redmi Note 10 Pro Max: 108MP ಕ್ಯಾಮೆರಾದ ರೆಡ್ಮಿ ಸ್ಮಾರ್ಟ್​​ಫೋನ್ ಮೇಲೆ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡ್ಬೇಡಿ
Image
Oppo A77: ಸದ್ದಿಲ್ಲದೆ ಭಾರತದಲ್ಲಿ ಬಿಡುಗಡೆ ಆಗಿದೆ ಒಪ್ಪೋ A77: ಬೆಲೆ?, ಏನು ಫೀಚರ್ಸ್?
Image
WhatsApp: ಸ್ಮಾರ್ಟ್​​ಫೋನ್ ಸ್ವಿಚ್ ಆಫ್ ಆಗಿದ್ದರೂ ವಾಟ್ಸ್​ಆ್ಯಪ್​ನಲ್ಲಿ ಚಾಟ್ ಮಾಡಬಹುದು: ಹೇಗೆ ಗೊತ್ತೇ?

ಇನ್ನು ಬಳಕೆದಾರರಿಗೆ ವಾಟ್ಸ್​ಆ್ಯಪ್​ನಲ್ಲಿ ನೂತನ ಅಪ್ಡೇಟ್ ಬಂದಿದೆ ಎಂದು ತಿಳಿಸಲು ಹೊಸ ಚಾಟ್‌ಬಾಟ್ ಎಂಬ ಆಯ್ಕೆಯನ್ನು ನೀಡುತ್ತಿದೆ. ಈ ಚಾಟ್‌ಬಾಟ್‌ ಮೂಲಕ ಯಾವುದೇ ಹೊಸ ಫೀಚರ್ಸ್‌ ಸೇರ್ಪಡೆ ಯಾದರೂ ಮೊದಲಿಗೆ ಮಾಹಿತಿ ನೀಡಲಿದೆ. ಬಿಡುಗಡೆ ಆಗಿರುವ ಹೊಸ ಫೀಚರ್ಸ್‌ ಹಾಗೂ ಅದರ ವಿಶೇಷತೆ ಏನು? ಅದರ ಕಾರ್ಯವೈಖರಿ ಹೇಗಿರಲಿದೆ? ಎಂಬೆಲ್ಲಾ ಮಾಹಿತಿಯನ್ನು ಈ ಚಾಟ್​ಬಾಟ್ ನೀಡುತ್ತದೆ.

WABetaInfo ಪ್ರಕಾರ ವಾಟ್ಸ್​ಆ್ಯಪ್​ನ ಚಾಟ್‌ಬಾಟ್ ಆಯ್ಕೆ ಅಭಿವೃದ್ಧಿಯ ಆರಂಭಿಕ ಹಂತದಲ್ಲಿದೆ ಎನ್ನಲಾಗಿದೆ. ಈ ಚಾಟ್‌ಬಾಟ್‌ನ ಸಹಾಯದಿಂದ ಸಂಭಾಷಣೆಯ ಪಟ್ಟಿಯಲ್ಲಿ ಜನರು ಹೊಸ ಫೀಚರ್ಸ್‌ ಬಗ್ಗೆ ಮೊದಲು ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ. ಅಲ್ಲದೆ ಸಲಹೆಗಳು ಮತ್ತು ತಂತ್ರಗಳನ್ನು ಪಡೆದುಕೊಳ್ಳುತ್ತಾರೆ ಮತ್ತು ಗೌಪ್ಯತೆ ಮತ್ತು ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಇದರಲ್ಲಿ ರಿಪ್ಲೆ ಮಾಡುವುದಕ್ಕೆ ಅವಕಾಶವಿಲ್ಲದೆ ರುವುದರಿಂದ ಇದರಿಂದ ನಿಮಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಎಲ್ಲಾದರು ಈ ಆಯ್ಕೆ ನಿಮಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದಾದರೆ ಚಾಟ್‌ಬಾಟ್‌ ಅಕೌಂಟ್‌ ಅನ್ನು ಬ್ಲಾಕ್‌ ಮಾಡಲು ಕೂಡ ಅವಕಾಶವಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ