AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಡಿಜಿಲಾಕರ್‌ ಸೇವೆ: ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ವಾಟ್ಸ್​ಆ್ಯಪ್​ನಲ್ಲೇ ಡೌನ್‌ಲೋಡ್

DigiLocker: ವಾಟ್ಸ್​ಆ್ಯಪ್​ ಬಳಕೆದಾರರು ಡಿಜಿಲಾಕರ್ ಖಾತೆಯನ್ನು ರಚಿಸುವುದು ಮತ್ತು ದೃಢೀಕರಿಸುವುದು ಮತ್ತು ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಪ್ರಮಾಣಪತ್ರ ಮುಂತಾದ ದಾಖಲೆಗಳನ್ನು ಡೌನ್‌ಲೋಡ್ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಡಿಜಿಲಾಕರ್‌ ಸೇವೆ: ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ವಾಟ್ಸ್​ಆ್ಯಪ್​ನಲ್ಲೇ ಡೌನ್‌ಲೋಡ್
WhatsApp and DigiLocker
TV9 Web
| Updated By: Vinay Bhat|

Updated on: May 24, 2022 | 11:56 AM

Share

ಭಾರತದಲ್ಲಿ ವಾಟ್ಸ್​ಆ್ಯಪ್ (WhatsApp) ಮೂಲಕ​ ಬಳಕೆದಾರರು ಪ್ಯಾನ್ ಕಾರ್ಡ್ (PAN Card), ಡ್ರೈವಿಂಗ್ ಲೈಸೆನ್ಸ್ ಮತ್ತು ವಿಮಾ ಪಾಲಿಸಿಯಂತಹ ದಾಖಲೆಗಳನ್ನು ಡೌನ್‌ಲೋಡ್ ಮಾಡಲು ಅನುವು ಮಾಡಿಕೊಡಲು ಸರ್ಕಾರ ಮುಂದಾಗಿದೆ. MyGov ಹೆಲ್ಫ ಡೆಸ್ಕ್‌ ವಾಟ್ಸ್​ಆ್ಯಪ್​ ಜೊತೆಗೆ ಪಾಲುದಾರಿಕೆಯನ್ನು ಮಾಡಿಕೊಂಡಿದ್ದು, ಇನ್ಮುಂದೆ ಡಿಜಿಲಾಕರ್ ಸೇವೆಗಳು ವಾಟ್ಸ್​ಆ್ಯಪ್​ನಲ್ಲಿ ಕೂಡ ಲಭ್ಯವಾಗಲಿದೆ. ಅದರಂತೆ ವಾಟ್ಸ್​ಆ್ಯಪ್​ ಬಳಕೆದಾರರು ಡಿಜಿಲಾಕರ್ (DigiLocker) ಖಾತೆಯನ್ನು ರಚಿಸುವುದು ಮತ್ತು ದೃಢೀಕರಿಸುವುದು ಮತ್ತು ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಪ್ರಮಾಣಪತ್ರ ಮುಂತಾದ ದಾಖಲೆಗಳನ್ನು ಡೌನ್‌ಲೋಡ್ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ.

“ಸರ್ಕಾರವು ಡಿಜಿಟಲ್ ಇಂಡಿಯಾದ ಮೂಲಕ ಜೀವನ ಸುಲಭವಾಗಿಸಲು  ಕೆಲಸ ಮಾಡುತ್ತಿದೆ ಮತ್ತು ವಾಟ್ಸ್​ಆ್ಯಪ್​ನಲ್ಲಿ MyGov ಹೆಲ್ಪ್‌ಡೆಸ್ಕ್ ಆಡಳಿತ ಮತ್ತು ಸರ್ಕಾರಿ ಸೇವೆಗಳು ನಾಗರಿಕರ ಬೆರಳ ತುದಿಯಲ್ಲಿದೆ ಎಂದು ಖಚಿತಪಡಿಸಿಕೊಳ್ಳಲು ಒಂದು ಪ್ರಮುಖ ಹೆಜ್ಜೆಯಾಗಿದೆ” ಎಂದು ಅಧಿಕೃತ ಪತ್ರಿಕಾ ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹೊಸ ಸೇವೆಯ ಬಗ್ಗೆ ಪ್ರತಿಕ್ರಿಯಿಸಿರುವ ವಾಟ್ಸ್​​ಆ್ಯಪ್​​​ನ ಸಾರ್ವಜನಿಕ ನೀತಿಯ ನಿರ್ದೇಶಕ ಶಿವನಾಥ್ ತುಕ್ರಾಲ್, “ಮೈಗೌವ್ ಹೆಲ್ಪ್‌ಡೆಸ್ಕ್ ಅನ್ನು ನೇರವಾಗಿ ವಾಟ್ಸ್​​ಆ್ಯಪ್​​​ ಮೂಲಕ ಪ್ರವೇಶಿಸಬಹುದಾದ ಡಿಜಿಲಾಕರ್ ಸೇವೆಗಳೊಂದಿಗೆ ಸಜ್ಜುಗೊಳಿಸುವುದು, ನಾಗರಿಕರಿಗೆ ಅಗತ್ಯ ಸೇವೆಗಳ ಪ್ರಯೋಜನಗಳನ್ನು ವಿಸ್ತರಿಸಲು ನಾವು ತಂತ್ರಜ್ಞಾನದ ಸಾಮರ್ಥ್ಯವನ್ನು ಅನ್‌ಲಾಕ್ ಮಾಡಲು ಬಯಸುತ್ತೇವೆ ಎಂದು ಹೇಳಿದ್ದಾರೆ. ಇದು ಡಿಜಿಟಲ್ ಇಂಡಿಯಾ ದೃಷ್ಟಿ ಮತ್ತು ಡಿಜಿಟಲ್ ಸಶಕ್ತ ದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
WhatsApp ಇನ್ನುಮುಂದೆ ಕೆಲವು iPhone ಮಾಡೆಲ್‌ಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ !!
Image
iPhone 14 Max: ಭಾರತದಲ್ಲಿ ಯಾವಾಗ ರಿಲೀಸ್ ಆಗಲಿದೆ ಐಫೋನ್ 14 ಮ್ಯಾಕ್ಸ್?: ಇದರ ಬೆಲೆ ಎಷ್ಟಿರಬಹುದು?
Image
iPhone SE 2022: ಐಫೋನ್ ಖರೀದಿಗೆ ಕ್ಯೂ ನಿಂತ ಜನರು: ಕೇವಲ 18,599 ರೂ. ಗೆ ಸಿಗುತ್ತಿದೆ ಆ್ಯಪಲ್ ಫೋನ್
Image
ಐಫೋನ್ ಬಳಕೆದಾರರಿಗೆ ಸಿಹಿ ಸುದ್ದಿ, ಐಫೋನ್ಗಳಿಗು ಯುಎಸ್‌ಬಿ ಟೈಪ್-ಸಿ ಚಾರ್ಜರ್ ಅಳವಡಿಸಲು ಚಿಂತನೆ

Best Smartphone: 20,000 ರೂ. ಒಳಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ ಇರುವ ಸ್ಮಾರ್ಟ್​​ಫೋನ್​ ಬೇಕೇ: ಇಲ್ಲಿದೆ ನೋಡಿ

ವಾಟ್ಸ್​​ಆ್ಯಪ್​​​ನಲ್ಲಿ ಡಿಜಿಲಾಕರ್ ಖಾತೆಯನ್ನು ರಚಿಸುವುದು ಮತ್ತು ದೃಢೀಕರಿಸುವುದು, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಪ್ರಮಾಣಪತ್ರದಂತಹ ದಾಖಲೆಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಇದರಿಂದ ಸರ್ಕಾರಿ ಸೇವೆಗಳನ್ನು ವಾಟ್ಸ್​​ಆ್ಯಪ್​​​ನಲ್ಲಿಯೇ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ. ಇನ್ನು ಡಿಜಿಲಾಕರ್‌ ನಂತಹ ಹೊಸ ಸೇರ್ಪಡೆಗಳೊಂದಿಗೆ, ವಾಟ್ಸಾಪ್‌ನಲ್ಲಿನ MyGov ಚಾಟ್‌ಬಾಟ್ ನಾಗರಿಕರಿಗೆ ಅಗತ್ಯ ಸೇವೆಗಳನ್ನು ಪ್ರವೇಶಿಸಲು ಅವಕಾಶ ಸಿಗಲಿದೆ.

ವಾಟ್ಸ್​​ಆ್ಯಪ್​​​ನಲ್ಲಿ MyGov ಹೆಲ್ಪ್‌ಡೆಸ್ಕ್ ಆಡಳಿತ ಮತ್ತು ಸರ್ಕಾರಿ ಸೇವೆಗಳು ನಾಗರಿಕರ ಬೆರಳ ತುದಿಯಲ್ಲಿ ಸಿಗುವಂತೆ ಮಾಡಲು ವಾಟ್ಸ್​​ಆ್ಯಪ್​​​ ಸಹಾಯವಾಣಿ ಸಂಖ್ಯೆಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಸಂಖ್ಯೆಯ ಸಹಾಯದಿಂದ ಡಿಜಿಲಾಕರ್ ಖಾತೆಗೆ ಸೈನ್ ಅಪ್ ಆಗುವ ಮೂಲಕ ವಾಟ್ಸ್​​ಆ್ಯಪ್​​​ನಲ್ಲಿ ದಾಖಲೆಗಳನ್ನು ಪಡೆಯಬಹುದು. ಈಗಾಗಲೇ ಡಿಜಿಲಾಕರ್ ಅಕೌಂಟ್ ಅನ್ನು ನೀವು ಈಗಾಗಲೇ ಒಂದನ್ನು ಹೊಂದಿದ್ದರೆ, ದಾಖಲೆಗಳನ್ನು ಪಡೆಯುವುದು ಸುಲಭವಾಗುತ್ತದೆ.

ವಾಟ್ಸ್​​ಆ್ಯಪ್​​​ನಲ್ಲಿ ಈ ಎಲ್ಲ ಮಾಹಿತಿಯನ್ನು ಡೌನ್‌ಲೋಡ್ ಮಾಡುವುದು ಹೇಗೆ?:

  • ಈ ವಿವರಗಳನ್ನು ಪಡೆಯಲು, ಬಳಕೆದಾರರು ಕೇವಲ ‘Namaste’ ಅಥವಾ ‘Hi’ ಅಥವಾ ‘Digilocker’ ಎಂದು ವಾಟ್ಸ್​​ಆ್ಯಪ್​​​ ಸಂಖ್ಯೆ +91 9013151515 ಗೆ ಕಳುಹಿಸಬೇಕು.
  • ಇದಕ್ಕೂ ಮೊದಲು ನಿಮ್ಮ ಕಾಂಟ್ಯಾಕ್ಟ್​ ಲಿಸ್ಟ್​​ನಲ್ಲಿ +91 9013151515 ಸಂಖ್ಯೆಯನ್ನು ಸೇವ್‌ ಮಾಡಿ.
  • ನಂತರ ವಾಟ್ಸ್​​ಆ್ಯಪ್​​​ ತೆರೆಯಿರಿ‌‌.
  • ವಾಟ್ಸ್​​ಆ್ಯಪ್​​​ ಸಂಖ್ಯೆ +91 9013151515ಗೆ ‘Namaste’ ಅಥವಾ ‘Hi’ ಕಳುಹಿಸಿ.
  • ಆಗ ಡಿಜಿಲಾಕರ್ ಹೆಲ್ಪ್‌ಡೆಸ್ಕ್ ಅದು ನೀಡುವ ಸೇವೆಗಳ ಪಟ್ಟಿಯನ್ನು ಕಳುಹಿಸುತ್ತದೆ.
  • ನೀವು ಪಡೆಯಲು ಬಯಸುವ ಸೇವೆಯ ಸಂಖ್ಯೆಯನ್ನು ನಮೂದಿಸಿ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ