WhatsApp New Feature: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಾಕಿದ್ರೆ ಫೇಸ್​ಬುಕ್​ನಲ್ಲೂ ಕಾಣಿಸುತ್ತೆ: ಬಂದಿದೆ ಹೊಸ ಫೀಚರ್

ವಾಟ್ಸ್​ಆ್ಯಪ್ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಅಂದರೆ ನೀವು ವಾಟ್ಸ್​ಆ್ಯಪ್​ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್​ಬುಕ್​ ಸ್ಟೇಟಸ್​ನಲ್ಲೂ ಕಾಣಿಸಲಿದೆ.

WhatsApp New Feature: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಾಕಿದ್ರೆ ಫೇಸ್​ಬುಕ್​ನಲ್ಲೂ ಕಾಣಿಸುತ್ತೆ: ಬಂದಿದೆ ಹೊಸ ಫೀಚರ್
WhatsApp
Follow us
|

Updated on:Apr 20, 2023 | 1:57 PM

ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ದಿನಕ್ಕೊಂದು ಅಪ್ಡೇಟ್ ಅನ್ನು ಘೋಷಿಸುತ್ತಿದೆ. ಈಗಾಗಲೇ ಸಾಲು ಸಾಲು ಹೊಸ ಫೀಚರ್​ಗಳು ಬಿಡುಗಡೆಗೆ ತಯಾರಾಗಿ ನಿಂತಿದ್ದರೆ ಇನ್ನೂ ಕೆಲವು ಪರೀಕ್ಷಾ ಹಂತದಲ್ಲಿದೆ. ವಾಟ್ಸ್​ಆ್ಯಪ್ (WhatsApp) ಕೇವಲ ತನ್ನ ಆ್ಯಪ್​ಗೆ ಸಹಕಾರಿ ಆಗುವ ಫೀಚರ್​ಗಳನ್ನು ಮಾತ್ರ ಅಭಿವೃದ್ದಿ ಪಡಿಸುತ್ತಿಲ್ಲ. ಬದಲಾಗಿ ತನ್ನ ಒತರೆ ಸಾಮಾಜಿಕ ತಾಣಕ್ಕೆ ಸಹಕಾರಿ ಆಗುವಂತಹ ಆಯ್ಕೆಯನ್ನು ಕೂಡ ನೀಡುತ್ತಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್​ಗಳು ಬರಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ನೂತನ ಫೀಚರ್ ಪರಿಚಯಿಸಿದ್ದು ಇದರಿಂದ ಫೇಸ್​ಬುಕ್ (Facebook) ಪ್ರಿಯರಂತು ಸಖತ್ ಖುಷಿ ಆಗಿದ್ದಾರೆ.

ವಾಟ್ಸ್​ಆ್ಯಪ್ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಅಂದರೆ ನೀವು ವಾಟ್ಸ್​ಆ್ಯಪ್​ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್​ಬುಕ್​ ಸ್ಟೇಟಸ್​ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್​ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್​ಆ್ಯಪ್​ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್​ಬುಕ್​ ಸ್ಟೇಟಸ್​ಗೂ ಅಪ್​ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್​ಆ್ಯಪ್​ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್​-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಈಗಾಗಲೇ ಈ ಫೀಚರ್ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.

Lava Blaze 2: ಕೇವಲ 8,999 ರೂ. ಗೆ ಮಾರಾಟ ಕಾಣುತ್ತಿದೆ ನಮ್ಮ ಭಾರತದ ಸ್ಮಾರ್ಟ್​ಫೋನ್

ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ (Video Message) ಫೀಚರ್ ಅನ್ನು ನೀಡಲಿದೆಯಂತೆ. ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

ವಿಡಿಯೋ ಮೆಸೇಜ್ ಫೀಚರ್ ಎಂಡ್-ಟು-ಎಂಡು ಎನ್ಕ್ರಿಪ್ಟೆಡ್ ಆಗಿದೆ. ಬಳಕೆದಾರ ರಿಸೀಸ್ ಮಾಡಿಕೊಂಡ ವಿಡಿಯೋ ಮೆಸೇಜ್ ಅನ್ನು ಫಾರ್ವಡ್ ಮಾಡಲು ಸಾಧ್ಯವಿಲ್ಲ. ಹಾಗೆಯೆ ಇದು ಗ್ಯಾಲರಿಯಲ್ಲಿ ಸೇವ್ ಆಗುವುದಿಲ್ಲ. ನಿಮಗೆ ಆ ವಿಡಿಯೋ ಬೇಕಿದ್ದಲ್ಲಿ ಸ್ಕ್ರೀನ್ ರೆಕಾರ್ಡ್ ಆಯ್ಕೆಯ ಮೂಲಕ ಸೇವ್ ಮಾಡಿಕೊಳ್ಳಬಹುದು. ಇದು ವೀವ್ ಒನ್ಸ್ ಮೋಡ್ ಆಯ್ಕೆಯನ್ನು ಹೊಂದಿಲ್ಲ. ಸದ್ಯಕ್ಕೆ ಈ ಆಯ್ಕೆ ಪರೀಕ್ಷಾ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ವಿಡಿಯೋ ಮೆಸೇಜ್ ಆಯ್ಕೆ ಸಿಗಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:56 pm, Thu, 20 April 23