AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನ ಹೊಸ ಫೀಚರ್ ಕಂಡು ವೆಬ್ ಬಳಕೆದಾರರು ಫುಲ್ ಶಾಕ್: ಅಪ್ಡೇಟ್​ನಲ್ಲಿ ಏನಿದೆ?

WhatsApp’s message reactions feature: ಇನ್​ಸ್ಟಾಗ್ರಾಮ್, ಫೇಸ್​ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್​ನಲ್ಲಿ ಇರುವಂತಹ ಜನಪ್ರಿಯ ಆಯ್ಕೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಕೂಡ ಸದ್ಯದಲ್ಲೇ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಇದೀಗ ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ಆಯ್ಕೆ ನೀಡಲು ಕಂಪನಿ ಮುಂದಾಗಿದೆ.

WhatsApp: ವಾಟ್ಸ್​ಆ್ಯಪ್​ನ ಹೊಸ ಫೀಚರ್ ಕಂಡು ವೆಬ್ ಬಳಕೆದಾರರು ಫುಲ್ ಶಾಕ್: ಅಪ್ಡೇಟ್​ನಲ್ಲಿ ಏನಿದೆ?
WhatsApp Web
TV9 Web
| Edited By: |

Updated on: Feb 25, 2022 | 1:10 PM

Share

ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp)​ ಈಗೀಗ ಹೊಸ ಹೊಸ ಅಪ್ಡೇಟ್​ಗಳನ್ನು ನೀಡುತ್ತಿದೆ. 2022 ರಲ್ಲಿ ಬಳಕೆದಾರರಿಗೆ ಉತ್ತಮ ಅನುಭವವನ್ನು ನೀಡಲು ಹೊಸ ಫೀಚರ್ಸ್‌ ಪರಿಚಯಿಸಲು ವಾಟ್ಸ್​ಆ್ಯಪ್ ಮುಂದಾಗಿದೆ ಈಗಾಗಲೇ ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್, ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಆಯ್ಕೆ, ಕವರ್ ಫೋಟೋ ಸೇರಿದಂತೆ ಅನೇಕ ಫೀಚರ್ಸ್​​ ಪರೀಕ್ಷಾ ಹಂತದಲ್ಲಿದೆ. ಅಲ್ಲದೆ ಇನ್​ಸ್ಟಾಗ್ರಾಮ್, ಫೇಸ್​ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್​ನಲ್ಲಿ ಇರುವಂತಹ ಜನಪ್ರಿಯ ಆಯ್ಕೆ ಮೆಸೇಜ್‌ ರಿಯಾಕ್ಷನ್‌ (Message Reactions) ಫೀಚರ್ಸ್‌ ಕೂಡ ಸದ್ಯದಲ್ಲೇ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಇದೀಗ ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ಆಯ್ಕೆ ನೀಡಲು ಕಂಪನಿ ಮುಂದಾಗಿದೆ. ಹೌದು, ಸದ್ಯದಲ್ಲೇ ವಾಟ್ಸ್​ಆ್ಯಪ್ ವೆಬ್​ನಲ್ಲಿ ಮೆಸೇಜ್‌ ರಿಯಾಕ್ಷನ್‌ ಫೀಚರ್ ಸೇರಿಸಲು ಕಂಪನಿ ಸಿದ್ಧತೆ ನಡೆಸಿದೆ.

ವಾಟ್ಸ್​ಆ್ಯಪ್​ನ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಎಮೋಜಿ ಐಕಾನ್‌ಗಳೊಂದಿಗೆ ಪ್ರತಿಕ್ರಿಯಿಸಲು ನಿಮಗೆ ಅನುಮತಿಸುತ್ತದೆ. ಇದು ಫೇಸ್‌ಬುಕ್‌ನಲ್ಲಿನ ಪೋಸ್ಟ್‌ಗಳಿಗೆ ನೀವು ಹೇಗೆ ಪ್ರತಿಕ್ರಿಯಿಸುತ್ತಿರೋ ಅದೇ ಮಾದರಿಯಲ್ಲಿ ಇರಲಿದೆ. ಪಾಪ್ ಅಪ್ ಆಗುವ ಯಾವುದೇ ಎಮೋಜಿಗಳಿಂದ ಆಯ್ಕೆ ಮಾಡಬೇಕಾಗುತ್ತದೆ. ನಿಮ್ಮ ಮೆಚ್ಚಿನದನ್ನು ನೀವು ಆಯ್ಕೆ ಮಾಡಿದ ನಂತರ, ನೀವು ಯಾರ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದೀರೋ ಅವರು ಅದೇ ಪ್ರತಿಕ್ರಿಯೆಗೆ ಅಧಿಸೂಚನೆಯನ್ನು ಪಡೆಯುತ್ತೀರಿ.

ಇನ್ನು ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್. ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ. ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

ಇದರ ಜೊತೆಗೆ ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ. ಇದರ ಕೆಳಬಾಗದಲ್ಲಿ ಮ್ಯೂಟ್, ವಾಲ್ಯೂಮ್, ಕರೆ ಕಟ್ ಮಾಡುವ ಆಯ್ಕೆ ನೀಡಲಾಗಿದೆ. ಆರಂಭದಲ್ಲಿ ಈ ಆಯ್ಕೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು, ತದನಂತರ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.

ವಾಟ್ಸ್​ಆ್ಯಪ್​ನಲ್ಲಿ ಕವರ್ ಫೋಟೋ:

ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ. ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ. ಅದಕ್ಕೆ ಕ್ಲಿಕ್ ಮಾಡಿ ಹೊಸ ಫೋಟೋ ಅಥವಾ ಕ್ಯಾಮೆರಾ ಮೂಲಕ ಫೋಟೋ ತೆಗೆಯಲು ಅನುಮತಿ ಕೇಳುತ್ತದೆ. ನಿಮಗಿಷ್ಟದ ಫೋಟೋ ಆಯ್ಕೆ ಮಾಡಿ ಕವರ್ ಫೋಟೋ ಸೆಟ್ ಮಾಡಬಹುದಂತೆ.

Moto Edge 30 Pro: ಭಾರತದಲ್ಲಿ ಪವರ್ಫುಲ್ ಸ್ಮಾರ್ಟ್​ಫೋನ್ ಮೋಟೋರೊಲಾ ಎಡ್ಜ್ 30 ಪ್ರೊ ಬಿಡುಗಡೆ: ಬೆಲೆ ಎಷ್ಟು?

Airtel: ಅತ್ಯಧಿಕ ಡೇಟಾ ಯೋಜನೆ​ ಬೇಕಿದ್ದರೆ ಇದೇ ಬೆಸ್ಟ್: ಏರ್ಟೆಲ್​ನ ಈ ಪ್ಲಾನ್​ನಲ್ಲಿದೆ ಭರ್ಜರಿ ಡೇಟಾ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ