AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಮೆಸೇಜ್ ಆಯ್ಕೆ: ಹೊಸ ಫೀಚರ್ ಕೇಳಿ ದಂಗಾದ ಬಳಕೆದಾರರು

WhatsApp Video Message: ಇದೀಗ ವಾಟ್ಸ್​ಆ್ಯಪ್ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ವರದಿ ಆಗಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ (Video Message) ಫೀಚರ್ ಅನ್ನು ನೀಡಲಿದೆಯಂತೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಮೆಸೇಜ್ ಆಯ್ಕೆ: ಹೊಸ ಫೀಚರ್ ಕೇಳಿ ದಂಗಾದ ಬಳಕೆದಾರರು
WhatsApp video message
Vinay Bhat
|

Updated on: Apr 14, 2023 | 2:03 PM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳನ್ನು ಘೋಷಣೆ ಮಾಡುತ್ತಿದೆ. ದಿನದಿಂದ ದಿನಕ್ಕೆ ಬಳಕೆದಾರರನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ವಿಶೇಷ ಆಯ್ಕೆಗಳನ್ನು ನೀಡುತ್ತಿದೆ. ಈಗಾಗಲೇ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದ್ದು, ಕೆಲವೊಂದು ಪರೀಕ್ಷಾ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್ (WhatsApp) ನೂತನ ಡಿಸೈನ್​ನಲ್ಲಿ ಕಾಣಿಸಿಕೊಳ್ಳಲಿದೆ. ಈ ಬಗ್ಗೆ ಸುಳಿವು ನೀಡಿದ ಬೆನ್ನಲ್ಲೇ ಇದೀಗ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ವರದಿ ಆಗಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ (Video Message) ಫೀಚರ್ ಅನ್ನು ನೀಡಲಿದೆಯಂತೆ.

ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

Tecno Phantom V Fold: ಅತಿ ಕಡಿಮೆ ದರಕ್ಕೆ ದೊರೆಯುತ್ತಿದೆ ಟೆಕ್ನೋ ಮೊದಲ ಫೋಲ್ಡಿಂಗ್ ಫೋನ್

ಇದನ್ನೂ ಓದಿ
Image
Flipkart Summer Saver Days sale: ಫ್ಲಿಪ್​ಕಾರ್ಟ್​ನಲ್ಲಿ ಸಮ್ಮರ್ ಸೇಲ್: ಈ ಸ್ಮಾರ್ಟ್​ಫೋನ್ಸ್​ಗೆ ಬಂಪರ್ ಡಿಸ್ಕೌಂಟ್
Image
Reliance Jio 5G services: ಜಿಯೋ 5ಜಿ ಡೌನ್‌ಲೋಡ್‌ ವೇಗದಲ್ಲಿ ಮೈಲಿಗಲ್ಲು, ಬಳಕೆದಾರರಿಗೆ 315ಎಂಬಿಪಿಎಸ್‌ ಉತ್ತಮ ಸ್ಪೀಡ್‌ ಲಭ್ಯ: ಓಪನ್ ಸಿಗ್ನಲ್
Image
Vivo T2 5G: ಪ್ರೀಮಿಯಂ ಫೀಚರ್ಸ್ ಇದ್ರೂ ಬಜೆಟ್ ದರಕ್ಕೆ ಲಭ್ಯ ವಿವೊ ಫೋನ್
Image
Sony WH-CH520: ಸಿನಿಮಾ ನೋಡಲು, ಸಂಗೀತ ಕೇಳಲು ಬೆಸ್ಟ್ ಸೋನಿ ಹೆಡ್​ಫೋನ್

ವಿಡಿಯೋ ಮೆಸೇಜ್ ಫೀಚರ್ ಎಂಡ್-ಟು-ಎಂಡು ಎನ್ಕ್ರಿಪ್ಟೆಡ್ ಆಗಿದೆ. ಬಳಕೆದಾರ ರಿಸೀಸ್ ಮಾಡಿಕೊಂಡ ವಿಡಿಯೋ ಮೆಸೇಜ್ ಅನ್ನು ಫಾರ್ವಡ್ ಮಾಡಲು ಸಾಧ್ಯವಿಲ್ಲ. ಹಾಗೆಯೆ ಇದು ಗ್ಯಾಲರಿಯಲ್ಲಿ ಸೇವ್ ಆಗುವುದಿಲ್ಲ. ನಿಮಗೆ ಆ ವಿಡಿಯೋ ಬೇಕಿದ್ದಲ್ಲಿ ಸ್ಕ್ರೀನ್ ರೆಕಾರ್ಡ್ ಆಯ್ಕೆಯ ಮೂಲಕ ಸೇವ್ ಮಾಡಿಕೊಳ್ಳಬಹುದು. ಇದು ವೀವ್ ಒನ್ಸ್ ಮೋಡ್ ಆಯ್ಕೆಯನ್ನು ಹೊಂದಿಲ್ಲ. ಸದ್ಯಕ್ಕೆ ಈ ಆಯ್ಕೆ ಪರೀಕ್ಷಾ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ವಿಡಿಯೋ ಮೆಸೇಜ್ ಆಯ್ಕೆ ಸಿಗಲಿದೆಯಂತೆ.

ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ನೋಟವನ್ನು ಬದಲಾಯಿಸಲು ಮುಂದಾಗಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್ ಹೊಸ ಸ್ಟೈಲ್​ನಲ್ಲಿ ಬಿಡುಗಡೆ ಆಗಲಿದೆ. ಅಂದರೆ ನೀವು ವಾಟ್ಸ್​ಆ್ಯಪ್ ತೆರೆದ ಬಳಿಕ ಸೆಟ್ಟಿಂಗ್ಸ್, ಚಾಟ್ ಲಿಸ್ಟ್​ ಹೊಸ ಮಾದರಿಯಲ್ಲಿ ಗೋಚರಿಸಲಿದೆ. ಮೊದಲಿಗೆ ಈ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ನಂತರ ಆಂಡ್ರಾಯ್ಡ್​ನಲ್ಲಿ ಬರಲಿದೆ.

ಇನ್ನು ವಾಟ್ಸ್​ಆ್ಯಪ್ ಕೆಲವೇ ದಿನಗಳಲ್ಲಿ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಲಿದೆ. ನೀವು ವಾಟ್ಸ್​ಆ್ಯಪ್​ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್​ಬುಕ್​ ಸ್ಟೇಟಸ್​ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್​ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್​ಆ್ಯಪ್​ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್​ಬುಕ್​ ಸ್ಟೇಟಸ್​ಗೂ ಅಪ್​ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್​ಆ್ಯಪ್​ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್​-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸದ್ಯದಲ್ಲೇ ಈ ಆಯ್ಕೆ ಸಿಗಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ