ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ದಿನಕ್ಕೊಂದು ಅಪ್ಡೇಟ್ ಅನ್ನು ಘೋಷಿಸುತ್ತಿದೆ. ಈಗಾಗಲೇ ಸಾಲು ಸಾಲು ಹೊಸ ಫೀಚರ್ಗಳು ಬಿಡುಗಡೆಗೆ ತಯಾರಾಗಿ ನಿಂತಿದ್ದರೆ ಇನ್ನೂ ಕೆಲವು ಪರೀಕ್ಷಾ ಹಂತದಲ್ಲಿದೆ. ವಾಟ್ಸ್ಆ್ಯಪ್ (WhatsApp) ಕೇವಲ ತನ್ನ ಆ್ಯಪ್ಗೆ ಸಹಕಾರಿ ಆಗುವ ಫೀಚರ್ಗಳನ್ನು ಮಾತ್ರ ಅಭಿವೃದ್ದಿ ಪಡಿಸುತ್ತಿಲ್ಲ. ಬದಲಾಗಿ ತನ್ನ ಒತರೆ ಸಾಮಾಜಿಕ ತಾಣಕ್ಕೆ ಸಹಕಾರಿ ಆಗುವಂತಹ ಆಯ್ಕೆಯನ್ನು ಕೂಡ ನೀಡುತ್ತಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್ಆ್ಯಪ್ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್ಗಳು ಬರಲಿದೆ. ಸದ್ಯ ವಾಟ್ಸ್ಆ್ಯಪ್ ನೂತನ ಫೀಚರ್ ಬಗ್ಗೆ ಮಾಹಿತಿ ನೀಡಿದ್ದು ಇದರಿಂದ ಫೇಸ್ಬುಕ್ (Facebook) ಪ್ರಿಯರಂತು ಸಖತ್ ಖುಷಿ ಆಗಿದ್ದಾರೆ.
ವಾಟ್ಸ್ಆ್ಯಪ್ ಕೆಲವೇ ದಿನಗಳಲ್ಲಿ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಲಿದೆ. ಅಂದರೆ ನೀವು ವಾಟ್ಸ್ಆ್ಯಪ್ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್ಬುಕ್ ಸ್ಟೇಟಸ್ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್ಬುಕ್ ಸ್ಟೇಟಸ್ಗೂ ಅಪ್ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್ಆ್ಯಪ್ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸದ್ಯದಲ್ಲೇ ಈ ಆಯ್ಕೆ ಸಿಗಲಿದೆಯಂತೆ.
Redmi 12C: ಭಾರತದಲ್ಲಿ ಖರೀದಿಗೆ ಸಿಗುತ್ತಿದೆ ರೆಡ್ಮಿ 12C ಸ್ಮಾರ್ಟ್‌ಫೋನ್: ಬೆಲೆ ಕೇವಲ 8,999 ರೂ.
ಇನ್ನು ಸದ್ಯದಲ್ಲೇ ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು. ವಾಟ್ಸ್ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್ಆ್ಯಪ್ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ.
ಈ ಆಯ್ಕೆ ಚಾಟ್ನ ಕಾಂಟೆಕ್ಟ್ ಅಥವಾ ಗ್ರೂಪ್ನ ಇನ್ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್ಗೆ ಹೋಗುತ್ತದೆ. ಸದ್ಯಕ್ಕೆ ಈ ಫೀಚರ್ಸ್ ಅಭಿವೃದ್ಧಿ ಹಂತದಲ್ಲಿದೆ. ಆಂಡ್ರಾಯ್ಡ್ ಬೀಟಾ ಆವೃತ್ತಿಯ 2.23.8.2 ಅಪ್ಡೇಟ್ನಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರು ಈ ಫೀಚರ್ಸ್ ಅನ್ನು ಬಳಕೆ ಮಾಡಬಹುದು ಎಂದು ತಿಳಿದುಬಂದಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ