AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಮೆಸೇಜ್ ಡಿಲೀಟ್ ಮಾಡುವ ಆಯ್ಕೆಯಲ್ಲಿ ವಿನೂತನ ಫೀಚರ್: ಬಳಕೆದಾರರು ಫುಲ್ ಖುಷ್

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ಹೊಸ ಆಯ್ಕೆ ನೀಡುವ ಕೆಲಸದಲ್ಲಿ ನಿರತವಾಗಿದೆ. ಹೌದು, ವಾಟ್ಸ್​ಆ್ಯಪ್​ ಡಿಲಿಟ್‌ ಫಾರ್‌ ಎವರಿಒನ್‌ ಫೀಚರ್​ನ ಲಿಮಿಟ್‌ ಅನ್ನು ಹೆಚ್ಚಿಸಲಾಗುತ್ತಿದೆ.

WhatsApp: ಮೆಸೇಜ್ ಡಿಲೀಟ್ ಮಾಡುವ ಆಯ್ಕೆಯಲ್ಲಿ ವಿನೂತನ ಫೀಚರ್: ಬಳಕೆದಾರರು ಫುಲ್ ಖುಷ್
WhatsApp
TV9 Web
| Updated By: Vinay Bhat|

Updated on: Jul 16, 2022 | 2:51 PM

Share

ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಅಪ್ಡೇಟ್​ಗಳನ್ನು ಬಿಡುಗಡೆ ಮಾಡುತ್ತಲೇ ಇದೆ. ಅಥವಾ ಈಗಾಗಲೇ ಇರುವ ಕೆಲ ಫೀಚರ್​ಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ (WhatsApp)​ ಮತ್ತೊಂದು ಪ್ರಮುಖ ಫೀಚರ್ಸ್‌ನಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ಹೊಸ ಆಯ್ಕೆ ನೀಡುವ ಕೆಲಸದಲ್ಲಿ ನಿರತವಾಗಿದೆ. ಹೌದು, ವಾಟ್ಸ್​ಆ್ಯಪ್​ ಡಿಲಿಟ್‌ ಫಾರ್‌ ಎವರಿಒನ್‌ ಫೀಚರ್​ನ ಲಿಮಿಟ್‌ ಅನ್ನು ಹೆಚ್ಚಿಸಲಾಗುತ್ತಿದೆ. ಅಂದರೆ ಮಾಡಿದ ಮೆಸೇಜ್ (Message) ಅನ್ನು ಯಾರಿಗೂ ಕಾಣದಂತೆ ಡಿಲೀಟ್ ಮಾಡಲು ಹೆಚ್ಚಿನ ಕಾಲವಕಾಶ ನೀಡಲಾಗುತ್ತಿದೆ.

ಪ್ರಸ್ತುತ ವಾಟ್ಸ್​ಆ್ಯಪ್​​ ಬಳಕೆದಾರರು ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ತಾವು ಸೆಂಡ್‌ ಮಾಡಿದ ಸಂದೇಶವನ್ನು ಹಂಚಿಕೊಂಡ ಸಮಯದಿಂದ ಒಂದು ಗಂಟೆ ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳ ಅವಧಿಯಲ್ಲಿ ಡಿಲೀಟ್‌ ಮಾಡಬಹುದು. ಇದೀಗ ಇದರ ಟೈಂ ಲಿಮಿಟ್‌ ಅನ್ನು ಹೆಚ್ಚಿಸಲಾಗುತ್ತಿದೆ. ಮೆಟಾ ಕಂಪನಿ ಇದೀಗ ಈ ಸಮಯವನ್ನು ಬರೋಬ್ಬರಿ ಎರಡು ದಿನಗಳಿಗೆ ವಿಸ್ತರಿಸಲು ಮುಂದಾಗಿದೆ. ಇದರಿಂದ ನೀವು ಸಂದೇಶವನ್ನು ಕಳುಹಿಸಿದ ಎರಡು ದಿನಗಳ ನಂತರ ಡಿಲೀಟ್‌ ಫಾರ್‌ ಎವರಿಒನ್‌ ಬಳಸಿ ಡಿಲೀಟ್‌ ಮಾಡಬಹುದಾಗಿದೆ. Wabetainfo ಈ ಕುರಿತು ಸ್ಕ್ರೀನ್​ಶಾಟ್ ಒಂದನ್ನು ಹಂಚಿಕೊಂಡಿದೆ.

ಸದ್ಯಕ್ಕೆ ಈ ಹೊಸ ಫೀಚರ್ ವಾಟ್ಸ್​ಆ್ಯಪ್​ ಬೀಟಾದ ಇತ್ತೀಚಿನ ಆವೃತ್ತಿಯನ್ನು ಬಳಸುತ್ತಿರುವ ಆಯ್ದ ಬಳಕೆದಾರರಿಗೆ ಲಭ್ಯವಿದೆ ಎನ್ನಲಾಗಿದೆ. ಅದರಂತೆ ಈ ಫೀಚರ್ಸ್‌ ಒಂದು ಗಂಟೆ, ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳಿಂದ ಎರಡು ದಿನಗಳು ಮತ್ತು 12 ಗಂಟೆಗಳವರೆಗೆ ಹೆಚ್ಚಿಸಲು ಪ್ಲಾನ್‌ ಮಾಡಿದೆ. ಆದಷ್ಟು ಬೇಗ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಈ ಆಯ್ಕೆ ಸಿಗಲಿದೆಯಂತೆ.

ಇದನ್ನೂ ಓದಿ
Image
Amazon: ಜುಲೈ 23ಕ್ಕೆ ಅಮೆಜಾನ್ ಪ್ರೈಮ್ ಡೇ ಸೇಲ್: ಟಾಪ್ ಡೀಲ್ಸ್ ಕುರಿತ ಮುಖ್ಯ ಮಾಹಿತಿ ಇಲ್ಲಿದೆ
Image
Reliance Jio: 100GB ಫ್ರೀ ಡೇಟಾ: ರಿಲಯನ್ಸ್​ ಜಿಯೋದಿಂದ ಹಿಂದೆಂದೂ ನೀಡಿರದ ಬಂಪರ್ ಆಫರ್
Image
OnePlus 10R 5G: ನಥಿಂಗ್ ಫೋನ್ ರಿಲೀಸ್ ಬೆನ್ನಲ್ಲೇ ಒನ್​ಪ್ಲಸ್​ 10R 5G ಮೇಲೆ ಬಂಪರ್ ಡಿಸ್ಕೌಂಟ್: ಮಿಸ್ ಮಾಡ್ಬೇಡಿ ಆಫರ್
Image
Home Theater Cost: ಮನೆಯೇ ಚಿತ್ರಮಂದಿರ ಕಾಸಿದ್ದರೆ ಎಲ್ಲ ಸುಂದರ; ಇಲ್ಲಿದೆ ಹೋಮ್ ಥಿಯೇಟರ್​ ಮಾಡಲು ಎಷ್ಟು ಖರ್ಚಾಗುತ್ತದೆ ಎಂಬ ವಿವರ

ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ಹೊಸ ಆಯ್ಕೆ:

ಇನ್ನು ವಾಟ್ಸ್​ಆ್ಯಪ್ ತನ್ನ ಸ್ಟೇಟಸ್​ನಲ್ಲಿ ಹೊಸ ಫೀಚರ್ ಅನ್ನು ಅಳವಡಿಸಲು ಮುಂದಾಗಿದೆ. ಸದ್ಯಕ್ಕೆ ಸ್ಟೇಟಸ್​ನಲ್ಲಿ ನಿಮಗೆ ಫೋಟೋಸ್, ಜಿಫ್ ಫೈಲ್, ವಿಡಿಯೋ ಮತ್ತು ಟೆಕ್ಸ್ಟ್​​ಗಳನ್ನು ಹಾಕಲು ಅನುಮತಿಯಿದೆ. ಇನ್ನು ಕೆಲವೇ ದಿನಗಳಲ್ಲಿ ಇವುಗಳ ಜೊತೆಗೆ ವಾಯ್ಸ್ ಮೆಸೇಜ್ ಅನ್ನು ಕೂಡ ಸ್ಟೇಟಸ್ ಹಾಕಬಹುದು. WABetaInfo ದಲ್ಲಿ ಈ ಬಗ್ಗೆ ವರದಿಯಾಗಿದ್ದು ಸದ್ಯದಲ್ಲೇ ನೂತನ ಅಪ್ಡೇಟ್​ನಲ್ಲಿ ಬಳಕೆದಾರರಿಗೆ ಈ ಆಯ್ಕೆ ಸಿಗಲಿದೆಯಂತೆ. ಚಾಟ್ ಬಾಕ್ಸ್​ನಲ್ಲಿ ನಿಮಗೆ ವಾಯ್ಸ್ ಮೆಸೇಜ್ ರೆಕಾರ್ಡ್ ಮಾಡಲು ಯಾವರೀತಿ ಆಯ್ಕೆ ಇದೆಯೋ ಅದೇರೀತಿ ಸ್ಟೇಟಸ್​ನಲ್ಲೂ ಕಾಣಲಿದೆಯಂತೆ. ಇದರ ಜೊತೆಗೆ ಆಡಿಯೋ ಫೈಲ್​ಗಳನ್ನು ಸ್ಟೇಟಸ್​ಗೆ ಹಂಚಿಕೊಳ್ಳುವ ಆಯ್ಕೆ ಬರಲಿದೆ ಎಂಬ ಮಾತುಕೂಡ ಹರಿದಾಡುತ್ತಿದೆ.

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ