WhatsApp: ವಾಟ್ಸ್​ಆ್ಯಪ್​ನಲ್ಲಿ ಊಹಿಸಲಾಗದ ಫೀಚರ್: ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಹಂಚಿಕೊಳ್ಳುವುದು ಹೇಗೆ?

WhatsApp Voice Status: ಈವರೆಗೆ ವಾಟ್ಸ್​ಆ್ಯಪ್ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಊಹಿಸಲಾಗದ ಫೀಚರ್: ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಹಂಚಿಕೊಳ್ಳುವುದು ಹೇಗೆ?
WhatsApp New Features
Follow us
TV9 Web
| Updated By: Vinay Bhat

Updated on: Nov 26, 2022 | 12:38 PM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಈ ವರ್ಷ ಪರಿಚಯಿಸಿರುವ ಫೀಚರ್​ಗಳಿಗೆ ಲೆಕ್ಕವಿಲ್ಲ. 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡ ವಾಟ್ಸ್​ಆ್ಯಪ್ ಅನ್ನು ಇಂದು ವಿಶ್ವದಲ್ಲಿ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಇನ್ನಷ್ಟು ಅನೇಕ ಅಪ್ಡೇಟ್​ಗಳು ಬರಲಿಕ್ಕಿದ್ದು ಪರೀಕ್ಷಾ ಹಂತದಲ್ಲಿದೆ. ಹೆಚ್ಚಾಗಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿದ್ದ ವಾಟ್ಸ್​ಆ್ಯಪ್ (WhatsApp) ಈಗೀಗ ವೆಬ್ ಬಳಕೆದಾರರಿಗೆ ಉಪಯುಕ್ತವಾದ ಆಯ್ಕೆನ್ನು ನೀಡುತ್ತಿದೆ. ಇದೀಗ ವಾಟ್ಸ್​ಆ್ಯಪ್​ನಲ್ಲಿ ಊಹಿಸಲಾಗದ ಫೀಚರ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಅದೇನೆಂದರೆ ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ (Voice Message) ಅನ್ನು ಹಂಚಿಕೊಳ್ಳಬಹುದಂತೆ.

ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಸಿಗಲಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್​ಕ್ರಿಪ್ಟೆಡ್ ಆಗಿದೆ. ಸದ್ಯಕ್ಕೆ ಈ ಆಯ್ಕೆ ಐಒಎಸ್ ಬೇಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

ವೆಬ್ ಬಳಕೆದಾರರಿಗೆ ಸ್ಕ್ರೀನ್‌ ಲಾಕ್‌ ಫೀಚರ್:

ಇದನ್ನೂ ಓದಿ
Image
Price Cut: ಒಂದಲ್ಲ ಎರಡಲ್ಲ 13ಕ್ಕೂ ಅಧಿಕ ಸ್ಮಾರ್ಟ್​ಫೋನ್​ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಲ್ಲಿದೆ ನೋಡಿ ಪಟ್ಟಿ
Image
ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ
Image
ರೈಲು ಟಿಕೆಟ್ ಕನ್​ಫರ್ಮ್ ಆಗಿಲ್ಲವೇ? ಈ ಆ್ಯಪ್​ನಲ್ಲಿ ಉಚಿತವಾಗಿ ಸಿಗುತ್ತೆ ಫ್ಲೈಟ್ ಟಿಕೆಟ್!
Image
Tech Tips: ಸ್ಮಾರ್ಟ್​ಫೋನ್​​ನ ಬ್ಯಾಕ್ ಕವರ್ ಹಳದಿ ಬಣ್ಣವಾಗುವುದು ಏಕೆ ಗೊತ್ತೇ?: ಸ್ವಚ್ಛಗೊಳಿಸುವುದು ಹೇಗೆ?

ಡೆಸ್ಕ್​ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ಬಳಸುವವರಿಗೆ ಸದ್ಯದಲ್ಲೇ ಸ್ಕ್ರೀನ್‌ ಲಾಕ್‌ ಎಂಬ ಹೊಸ ಆಯ್ಕೆ ನೀಡುವುದಾಗಿ ಘೋಷಿಸಿದೆ. ವಾಟ್ಸ್​ಆ್ಯಪ್ ಹಿಂದಿನಿಂದಲೂ ಬಳಕೆದಾರರ ಪ್ರೈವಸಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. ಇದೀಗ ಭದ್ರತೆಯನ್ನು ಮತ್ತಷ್ಟು ಗಟ್ಟಿ ಮಾಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ವಾಟ್ಸ್‌ಆ್ಯಪ್‌ ವೆಬ್​ನಲ್ಲಿ ಬರುವ ಸ್ಕ್ರೀನ್‌ ಲಾಕ್‌ ಎಂಬ ಹೊಸ ಫೀಚರ್​ನಲ್ಲಿ ವಾಟ್ಸ್​ಆ್ಯಪ್ ಓಪನ್‌ ಮಾಡಿದ ಪ್ರತಿ ಬಾರಿ ಬಳಕೆದಾರರು ಪಾಸ್‌ವರ್ಡ್‌ ಹಾಕಬೇಕಾಗುತ್ತದೆ. ಬಳಕೆದಾರರು ತಮ್ಮ ಡೆಸ್ಕ್​​ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ಬಳಸದೇ ಇದ್ದಾಗ ಬೇರೆಯವರು ಅನಧಿಕೃತವಾಗಿ ಬಳಸದಂತೆ ಇದು ರಕ್ಷಣೆ ನೀಡಲಿದೆ ಎಂದು ಕಂಪನಿ ತಿಳಿಸಿದೆ. ಹಾಗಂತ ಇದು ಕಡ್ಡಾಯವಲ್ಲ. ಬಳಕೆದಾರರು ಈ ಸ್ಕ್ರೀನ್‌ ಲಾಕ್‌ ಫೀಚರ್‌ ಅನ್ನು ಬೇಕಾದಾಗ ಮಾತ್ರ ಉಪಯೋಗಿಸಬಹುದು.

ಮಿಸ್ಡ್ ಕಾಲ್ ಅಲರ್ಟ್‌ ಫೀಚರ್:

ವಾಟ್ಸ್​ಆ್ಯಪ್ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮಿಸ್ಡ್ ಕಾಲ್ ಅಲರ್ಟ್‌’ ಎಂಬ ಹೊಸ ಫೀಚರ್ಸ್‌ ಬಿಡುಗಡೆ ಮಾಡುವ ಕುರಿತು ಮಾಹಿತಿ ಹಂಚಿಕೊಂಡಿದೆ. ಈ ಆಯ್ಕೆಯ ಮೂಲಕ ನಿಮ್ಮ ಸ್ಮಾರ್ಟ್​ಫೋನ್‌ ಎಲ್ಲಾದರು ‘ಡೋಂಟ್ ಡಿಸ್ಟರ್ಬ್‌ ಮೋಡ್‌’ನಲ್ಲಿ ಇರಿಸಿದ್ದಾಗ ಯಾರಾದರು ನಿಮ್ಮ ವಾಟ್ಸ್​ಆ್ಯಪ್​ಗೆ ಕರೆ ಮಾಡಿದರೆ ಇದು ಸಹಾಯ ಮಾಡಲಿದೆ. ಅಂದರೆ ನೀವು ಯಾವುದೇ ಕರೆಯನ್ನು ಮಿಸ್‌ ಮಾಡಿಕೊಂಡಿದ್ದರೆ ಅದರ ಮಾಹಿತಿ ಲಭ್ಯವಾಗಲಿದೆ. ವಾಟ್ಸ್​ಆ್ಯಪ್​ ಇದೀಗ ಈ ಫೀಚರ್ಸ್‌ ಹೊರತರಲು ಬಹುತೇಕ ಸಿದ್ಧವಾಗಿದೆ. ಹಾಗೆಯೇ ಇತ್ತೀಚಿನ ಬೀಟಾ ಆವೃತ್ತಿ 2.22.24.7 ಯಲ್ಲಿ ಈ ಫೀಚರ್ಸ್‌ ಲಭ್ಯವಾಗಲಿದೆ. ಜೊತೆಗೆ ಕೆಲವು ಬೀಟಾ ವಾಟ್ಸ್​ಆ್ಯಪ್ ಬಳಕೆದಾರರಿಗೆ ಈ ಫೀಚರ್ಸ್‌ ಅನ್ನು ಈಗಾಗಲೇ ಪರಿಚಯಿಸಲಾಗಿದೆ ಎಂದು ತಿಳಿದುಬಂದಿದೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್