ಬಳಕೆದಾರರಿಗೆ ಸದಾ ಒಂದಲ್ಲಾ ಒಂದು ಹೊಸ ಹೊಸ ಫೀಚರ್ಗಳನ್ನು ನೀಡುತ್ತಿರುವ ಫೇಸ್ಬುಕ್ (Facebook) ಒಡೆತನದ ವಾಟ್ಸ್ಆ್ಯಪ್ (WhatsApp) ಮುಂದಿನ ದಿನಗಳಲ್ಲಿ ಸಾಲು ಸಾಲು ಅಪ್ಡೇಟ್ಗಳನ್ನು ನೀಡುತ್ತಿದೆ. ವಾಟ್ಸ್ಆ್ಯಪ್ನಲ್ಲೇ ಫೋಟೋ ಎಡಿಟಿಂಗ್, ವಾಯ್ಸ್ ಮೆಸೇಜ್ ಕಳುಹಿಸುವ ಮುನ್ನ ಕೇಳುವ ಆಯ್ಕೆ, ಲಾಗೌಟ್ ಫೀಚರ್, ಸ್ಟೇಟಸ್ನಂತೆ ಪ್ರೊಫೈಲ್ ಪೋಟೋ ಕೂಡ ಕೆಲವರಿಗೆ ಮಾತ್ರ ಕಾಣಿಸುವಂತಹ ಆಯ್ಕೆ ಹೀಗೆ ಅನೇಕ ಹೊಸ ಹೊಸ ಫೀಚರ್ಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಎಲ್ಲ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ಸದ್ಯ ಸಣ್ಣ ಮತ್ತು ದೊಡ್ಡ ಪ್ರಮಾಣದ ವ್ಯಾಪಾರಿಗಳಿಗೆ ಅನುಕೂಲವಾಗುವ ಫೀಚರ್ಸ್ ಅನ್ನು ಪರಿಚಯಿಸಲು ಮುಂದಾಗಿದೆ. ವಾಟ್ಸ್ಆ್ಯಪ್ನ ಈ ಫೀಚರ್ಸ್ ಬಳಸಿ ನಿಮಗೆ ಬೇಕಾದ ಉತ್ಪನ್ನಗಳು ಎಲ್ಲಿ ಸಿಗುತ್ತವೆ, ನೀವು ಬಯಸುವ ಸ್ಟೋರ್ ಎಲ್ಲಿದೆ ಎಂದು ಸರ್ಚ್ ಮಾಡುವುದಕ್ಕೆ ಸಹಾಯ ಮಾಡಲಿದೆ.
ಇದರ ಬಗ್ಗೆ ವಾಟ್ಸ್ಆ್ಯಪ್ ಮುಖ್ಯಸ್ಥ ವಿಲ್ ಕ್ಯಾಥ್‌ಕಾರ್ಟ್ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾವು ವಾಟ್ಸ್ಆ್ಯಪ್ನಲ್ಲಿ ಸ್ಥಳೀಯ ವ್ಯಾಪಾರ ಡೈರೆಕ್ಟರಿಯನ್ನು ಪ್ರಾಯೋಗಿಕವಾಗಿ ಆರಂಭಿಸುತ್ತಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಇದು ನಿಮ್ಮ ನೆರೆಹೊರೆಯ ಕಾಫಿ ಶಾಪ್, ಸೇರಿದಂತೆ ಇತರೆ ಸ್ಥಳೀಯ ವ್ಯವಹಾರಗಳನ್ನು ಸರ್ಚ್ ಮಾಡುವುದಕ್ಕೆ ಅವಕಾಶ ನೀಡಲಿದೆ.
ಈ ಹೊಸ ಫೀಚರ್ಸ್ ಮೂಲಕ ವಾಟ್ಸ್ಆ್ಯಪ್ನಲ್ಲಿ ಜನರು ವಾಣಿಜ್ಯ ಪ್ರಕ್ರಿಯೆಯನ್ನು ಆರಂಭಿಸುವುದಕ್ಕೆ ಸಹಾಯವಾಗಲಿದೆ. ಇದರಿಂದ ಸಣ್ಣ ಪ್ರಮಾಣದ ವ್ಯವಹಾರಗಳು ಬೆಳೆಯಲು ಸಹಾಯ ಮಾಡಲಿದೆ. ಸದ್ಯ ಈ ಫೀಚರ್ಸ್ ಬ್ರೇಜಿಲ್‌ನಲ್ಲಿ ಪರಿಚಯಿಸುವ ಸಾಧ್ಯತೆ ಇದೆ. ಭಾರತೀಯ ಬಳಕೆದಾರರಿಗೆ ಯಾವಾಗ ಲಭ್ಯವಾಗಲಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ವ್ಯಾಪಾರಗಳು ಆಹಾರ, ಚಿಲ್ಲರೆ ವ್ಯಾಪಾರ ಮತ್ತು ಸ್ಥಳೀಯ ಸೇವೆಗಳಂತಹ ಕೆಲವು ಸಾವೊ ಪಾಲೊ ನೆರೆಹೊರೆಗಳಲ್ಲಿ ಒಳಗೊಂಡಿರುತ್ತವೆ ಎಂದು ವಾಟ್ಸ್ಆ್ಯಪ್ ಬಹಿರಂಗಪಡಿಸಿದೆ.
ಇನ್ನೂ ವಾಟ್ಸ್ಆ್ಯಪ್ ಭಾರತದಲ್ಲಿ ವಾಯ್ಸ್ ಟ್ರಾನ್ಸ್ಕ್ರಿಪ್ಶನ್ ಫೀಚರ್ ಪರಿಚಯಿಸುವ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ವಾಬೇಟಾ ಇನ್ಫೋ ವರದಿ ಪ್ರಕಾರ, ವಾಟ್ಸ್ಆ್ಯಪ್ ತನ್ನ ಪ್ಲಾಟ್ಫಾರ್ಮ್ನಲ್ಲಿ ಟ್ರಾನ್ಸ್ಕ್ರಿಪ್ಶನ್ ಎಂಬ ಫೀಚರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಹೊಸ ವೈಶಿಷ್ಟ್ಯವು ಹೊಸತನದಿಂದ ಕೂಡಿದೆ ಎಂದಿದೆ.
ವಾಟ್ಸ್ಆ್ಯಪ್ ಪರಿಚಯಿಸಲಿರುವ ಹೊಸ ವಾಯ್ಸ್ ಟ್ರಾನ್ಸ್ಕ್ರಿಪ್ಶನ್ ಫೀಚರ್ನಲ್ಲಿ ಬಳಕೆದಾರರಿಗೆ ಧ್ವನಿ ಸಂದೇಶದ ವಿಷಯವನ್ನು ಓದಬಲ್ಲ ರೂಪದಲ್ಲಿ ನೀಡುತ್ತದೆ. ಅಂದರೆ ಇದು ಇದು ಪಠ್ಯ ರೂಪದಲ್ಲಿ ಸಿಗಲಿದೆ. ಈ ಫೀಚರ್ ಅನ್ನು ಆಯ್ಕೆಯ ಆಧಾರ ಮೇಲೆ ನೀಡಲಾಗುತ್ತದೆ. ಅಂದರೆ ಈ ಫೀಚರ್ ಟ್ರಾನ್ಸ್ಕ್ರಿಪ್ಶನ್ ಮಾಡಲು ಅನುಮತಿಸಿದಾಗ ಮಾತ್ರ ಸೇವೆ ಸಿಗಲಿದೆ. ವಾಟ್ಸ್ಆ್ಯಪ್ ಕ್ಯಾಮೆರಾ, ಮೈಕ್ರೋಫೋನ್ಗೆ ಅನುಮತಿ ನೀಡಿದಂತೆ ಇದಕ್ಕೂ ಅನುಮತಿ ಕೇಳುತ್ತದೆ.
Google Pixel 6: ಆಲೂ ಚಿಪ್ಸ್ ಮಾರಾಟ ಮಾಡುತ್ತಿರುವ ಗೂಗಲ್: ಏತಕ್ಕಾಗಿ ಗೊತ್ತೇ?
Jio: 3GB ಡೇಟಾ ಸಿಗುವ ಅತೀ ಕಡಿಮೆ ಬೆಲೆಯ ರಿಚಾರ್ಜ್ ಪ್ಲ್ಯಾನ್ ಪರಿಚಯಿಸಿದ ಜಿಯೋ
(WhatsApps This new feature will help small and large-scale businesses bloom)