World Computer Literacy Day 2024: ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಕಂಪ್ಯೂಟರ್ ಮತ್ತು ತಂತ್ರಜ್ಞಾನದ ಬಗ್ಗೆ ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸಲು ಹಾಗೂ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಸಾಕ್ಷರತೆಯ ಮಹತ್ವವನ್ನು ಒತ್ತಿಹೇಳಲು ಉದ್ದೇಶದಿಂದ ಪ್ರತಿವರ್ಷ ಡಿಸೆಂಬರ್ 2 ರಂದು ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವವೇನು? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Computer Literacy Day 2024: ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 02, 2024 | 10:34 AM

ಒಂದು ದೇಶವು ವೇಗಗತಿಯಲ್ಲಿ ಬೆಳೆಯುತ್ತಿದೆ ಎಂದರೆ ಅಲ್ಲಿ ತಂತ್ರಜ್ಞಾನದ ಪಾತ್ರವು ಅಗಾಧವಾಗಿದೆ. ಇಂದಿನ ಜಗತ್ತಿನಲ್ಲಿ ಕಂಪ್ಯೂಟರ್ ಹಾಗೂ ಡಿಜಿಟಲ್ ಗ್ಯಾಜೆಟ್ ಗಳ ಬಳಕೆಯೂ ಅಧಿಕವಾಗಿದೆ. ಪ್ರತಿಯೊಂದು ದೇಶದ ಜನರು ಕೂಡ ಎಲ್ಲಾ ಕೆಲಸಗಳಿಗೂ ಕಂಪ್ಯೂಟರ್ ಸೇರಿದಂತೆ ಆಧುನಿಕ ತಂತ್ರಜ್ಞಾನವನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಇಂದಿನ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಮತ್ತು ಇಂಟರ್ನೆಟ್ ಜ್ಞಾನವು ಉದ್ಯೋಗಕ್ಕೆ ಮಾತ್ರವಲ್ಲದೆ ದೈನಂದಿನ ಜೀವನದ ಪ್ರಮುಖ ಭಾಗವಾಗಿದೆ. ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಮತ್ತು ಅಗತ್ಯವಿರುವವರಿಗೆ ಕಂಪ್ಯೂಟರ್ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ದಿನದ ಆಚರಣೆಯೂ ಚಾಲ್ತಿಯಲ್ಲಿದೆ.

ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನದ ಇತಿಹಾಸ

ಭಾರತೀಯ ಕಂಪ್ಯೂಟರ್ ಕಂಪನಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (NIIT) 2001 ರಲ್ಲಿ ತನ್ನ 20 ನೇ ವಾರ್ಷಿಕೋತ್ಸವ ಗುರುತಿಗಾಗಿ ಈ ದಿನವನ್ನು ಆರಂಭಿಸಿತು. ಮೊದಲ ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಡಿಸೆಂಬರ್ 2, 2001 ರಂದು ಆಚರಿಸಲಾಯಿತು. ಅಂದಿನ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮ್ಮುಖದಲ್ಲಿ ಸಂಸತ್ತಿನ ಸದಸ್ಯರಿಗೆ ಕಂಪ್ಯೂಟರ್‌ನಲ್ಲಿ ತರಬೇತಿ ನೀಡಲಾಯಿತು. ದೇಶದಾದ್ಯಂತ ಕಂಪ್ಯೂಟರ್ ಸಾಕ್ಷರತೆಯ ಹರಡುವಿಕೆಯನ್ನು ಗುರುತಿಸಲು ಕಸ್ಟಮೈಸ್ ಮಾಡಿದ ಅಂಚೆ ಲಕೋಟೆಯನ್ನು ಅನಾವರಣಗೊಳಿಸಿದರು. ಅಂದಿನಿಂದ ವಾರ್ಷಿಕವಾಗಿ ವಿಶ್ವದಾದ್ಯಂತ ಕಂಪ್ಯೂಟರ್‌ಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನದ ಮಹತ್ವ ಹಾಗೂ ಆಚರಣೆ

ಇಂದಿನ ಸಮಾಜದಲ್ಲಿ ಕಂಪ್ಯೂಟರ್ ಸಾಕ್ಷರತೆ ಒಂದು ಪ್ರಮುಖ ಕೌಶಲ್ಯವಾಗಿದೆ. ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನವನ್ನು ಪ್ರತಿಯೊಂದು ಕ್ಷೇತ್ರದಲ್ಲೂ ಬಳಸಲಾಗುತ್ತದೆ. ಈ ಕಂಪ್ಯೂಟರ್ ಬಳಕೆಯ ತಿಳಿದಿರುವ ಜನರಿಗೆ ಈ ಹೊಸ ತಂತ್ರಜ್ಞಾನಗಳನ್ನು ಕಲಿಯಲು ಮತ್ತು ಲಾಭ ಪಡೆಯಲು ಸಹಾಯಕವಾಗಿದೆ. ಪ್ರಸ್ತುತ, ಇಡೀ ಜಗತ್ತಿನಲ್ಲಿ ಪ್ರತಿದಿನ 2 ಲಕ್ಷಕ್ಕೂ ಅಧಿಕ ಕಂಪ್ಯೂಟರ್‌ಗಳು ಮಾರಾಟವಾಗುತ್ತಿವೆ. ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವು ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನದ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು. ಕಂಪ್ಯೂಟರ್ ಶಿಕ್ಷಣ ಹಾಗೂ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಈ ದಿನವು ಹೊಸ ತಂತ್ರಜ್ಞಾನಗಳ ಲಾಭ ಪಡೆಯಲು ಮತ್ತು ಜನರ ಜೀವನವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಹಿನ್ನಲೆಯಲ್ಲಿ ವಿಶ್ವ ಸಾಕ್ಷರತಾ ದಿನದಂದು ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳು ಹಾಗೂ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.

ಇದನ್ನೂ ಓದಿ: ಪರಿಸರ ಮಾಲಿನ್ಯವನ್ನು ತಡೆಗಟ್ಟುವುದು ಹೇಗೆ? ತಪ್ಪದೇ ಈ ಕ್ರಮಗಳನ್ನು ಕೈಗೊಳ್ಳಿ

ಶಿಕ್ಷಣ ಕ್ಷೇತ್ರದಲ್ಲಿ ಕಂಪ್ಯೂಟರ್ ಬಳಕೆ

ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಕಂಪ್ಯೂಟರ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಮೆಡಿಕಲ್, ಕೈಗಾರಿಕಾ ಪ್ರಕ್ರಿಯೆ, ವಿವಿಧ ದೊಡ್ಡ ಅಂಗಡಿಗಳು ಹಾಗೂ ಮಾಲ್‌ಗಳು, ಆಸ್ಪತ್ರೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಕಂಪ್ಯೂಟರ್ ಬಳಕೆ ಅಧಿಕವಾಗಿದೆ. ಅದರಲ್ಲಿಯೂ ಶಿಕ್ಷಣ ಕ್ಷೇತ್ರದಲ್ಲಿ ಕಂಪ್ಯೂಟರ್ ಪ್ರಮುಖ ಭಾಗವಾಗಿದೆ. ಪ್ರಾಜೆಕ್ಟ್​ ಹಾಗೂ ಪವರ್​ ಪಾಯಿಂಟ್ ಪ್ರೆಸೆಂಟೇಷನ್ ಸೇರಿದಂತೆ ಪಾಠಕ್ಕೆ ಅನುಕೂಲವಾಗಲೆಂದು ಆಡಿಯೋ-ದೃಶ್ಯ ತಂತ್ರಗಳ ಬಳಸಲಾಗುತ್ತದೆ. ಕಂಪ್ಯೂಟರ್‌ಗಳಲ್ಲಿ ಶೈಕ್ಷಣಿಕ ಸಾಮಗ್ರಿಗಳು, ಪುಸ್ತಕಗಳು, ಪ್ರಶ್ನೆ ಪತ್ರಿಕೆಗಳು ಇತ್ಯಾದಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮಕ್ಕಳ ಕಲಿಕೆಗೆ ಕಂಪ್ಯೂಟರ್ ವರದಾನವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು