Best Camera Phones: ಇಂದು ವಿಶ್ವ ಛಾಯಾಗ್ರಹಣ ದಿನ: ಇಲ್ಲಿವೆ ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಕ್ಯಾಮೆರಾ ಫೋನುಗಳು

World Photography Day 2021: 2021ರಲ್ಲಿ ಆಗಸ್ಟ್‌ 19 ಗುರುವಾರದಂದು ವಿಶ್ವ ಛಾಯಾಗ್ರಹಣ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಸಂದರ್ಭ ಸ್ಮಾರ್ಟ್​ಫೋನ್ ಪ್ರಿಯರಿಗಾಗಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಆಕರ್ಷಕ ಕ್ಯಾಮೆರಾ ಫೋನುಗಳ ಬಗ್ಗೆ ಮಾಹಿತಿಯನ್ನು ನಾವು ನೀಡುತ್ತೇವೆ.

Best Camera Phones: ಇಂದು ವಿಶ್ವ ಛಾಯಾಗ್ರಹಣ ದಿನ: ಇಲ್ಲಿವೆ ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಕ್ಯಾಮೆರಾ ಫೋನುಗಳು
Smartphone Camera
Follow us
TV9 Web
| Updated By: Vinay Bhat

Updated on: Aug 19, 2021 | 1:06 PM

ಇಂದು ವಿಶ್ವ ಛಾಯಾಗ್ರಹಣ ದಿನ (World Photography Day). ಪದಗಳಲ್ಲಿ ಹೇಳಲಾಗದ್ದನ್ನ ಫೋಟೋ ಮೂಲಕ ಹೇಳಬಹುದಾದ ಅದ್ಬುತ ಶಕ್ತಿ ಈ ಫೋಟೋಗ್ರಫಿದಲ್ಲಿದೆ. ಛಾಯಾಚಿತ್ರದ ಮೂಲಕ ವಿಶ್ವವನ್ನು ಸಕಾರಾತ್ಮಕವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಆರಂಭವಾದ ವಿಶ್ವ ಛಾಯಾಗ್ರಹಣ ದಿನವನ್ನು 2021ರಲ್ಲಿ ಆಗಸ್ಟ್‌ 19 ಗುರುವಾರದಂದು ಆಚರಿಸಲಾಗುತ್ತದೆ. ಈ ಸಂದರ್ಭ ಸ್ಮಾರ್ಟ್​ಫೋನ್ ಪ್ರಿಯರಿಗಾಗಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಆಕರ್ಷಕ ಕ್ಯಾಮೆರಾ ಫೋನುಗಳ ಬಗ್ಗೆ ಮಾಹಿತಿಯನ್ನು ನಾವು ನೀಡುತ್ತೇವೆ…

ಶವೋಮಿಯ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್: ಬರೋಬ್ಬರಿ 108 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್​ಫೋನ್ ಕಡಿಮೆ ಬೆಲೆಗೆ ಲಭ್ಯವಿದೆ. ಇದರಲ್ಲಿ ಸೂಪರ್ ನಿಫ್ಟ್ 5 ಮೆಗಾಫಿಕ್ಸೆಲ್​ನ ಮಾಕ್ರೊ ಕ್ಯಾಮೆರಾ ಕೂಡ ಇದೆ. 8 ಮೆಗಾಫಿಕ್ಸೆಲ್​ನ ಆಲ್ಟ್ರಾ ವೈಡ್ ಕ್ಯಾಮೆರಾ ಜೊತೆಗೆ 2 ಮೆಗಾಫಿಕ್ಸೆಲ್​ನ ಡೆಪ್ತ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್​ಫೋನ್​ನ ಬೆಲೆ ಕೇವಲ 19,999 ರೂ. ಆಗಿದೆ.

ಪೋಕೋ ಎಕ್ಸ್​3 ಪ್ರೊ: 2000 ರೂ. ಒಳಗಿನ ಬೆಸ್ಟ್ ಕ್ಯಾಮೆರಾ ಫೋನುಗಳ ಸಾಲಿನಲ್ಲಿ ಪೋಕೋ ಎಕ್ಸ್​3 ಪ್ರೊ ಪ್ರಮುಖವಾದೂದು. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರ ಬೆಲೆ 18,999 ರೂ.

ರಿಯಲ್ ಮಿ ನಾರ್ಜೊ 30 ಪ್ರೊ: ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಫೋಟೋ ತೆಗೆಯುವಾಗ ನಿಮಗೆ ಸಾಕಷ್ಟು ಮೋಡ್​ಗಳ ಆಯ್ಕೆ ಸಿಗುತ್ತದೆ. ಇದರ ಬೆಲೆ 18,499 ರೂ.

ಐಕ್ಯೂ ಝೆಡ್​ 3: ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಎಐ ಪೋಲಾರ್ ನೈಟ್ ಸೆಲ್ಫಿಗಳು ಮತ್ತು 10x ಡಿಜಿಟಲ್ ಜೂಮ್ ಬೆಂಬಲವನ್ನು ನೀಡುತ್ತದೆ. ಇದರ ಬೆಲೆ 19,990 ರೂ. ಆಗಿದೆ.

Facebook Content Report: ಪೇಸ್​ಬುಕ್​ನಲ್ಲಿ ಯಾರು ಏನನ್ನು ಹೆಚ್ಚು ನೋಡಿದ್ದಾರೆ?: 2021 ಕ್ವಾರ್ಟರ್ 2 ವರದಿ ಬಿಡುಗಡೆ

Realme GT 5G: ರಿಯಲ್​ಮಿ ಹೊಸ ಮೊಬೈಲ್: ಕೇವಲ 35 ನಿಮಿಷದಲ್ಲಿ ಫುಲ್​ ಚಾರ್ಜ್

(World Photography Day 2021 Redmi Poco Realme The Best Camera Phones That Dont Cost A Lot)

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್