AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme GT 3: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿಶ್ವದ ಅತಿ ವೇಗದ ಚಾರ್ಜಿಂಗ್ ಫೋನ್ ರಿಯಲ್‌ ಮಿ GT 3: ಬೆಲೆ ಎಷ್ಟು ಗೊತ್ತೇ?

ಜಾಗತೀಕ ಮಾರುಕಟ್ಟೆಯಲ್ಲಿ ರಿಯಲ್‌ ಮಿ ಜಿಟಿ 3 (Realme GT 3) ಫೋನ್ ರಿಲೀಸ್ ಆಗಿದೆ. ಟೆಕ್ ಪ್ರಿಯರನ್ನು ದಂಗಾಗಿಸಿರುವ ಈ ಫೋನ್​ನಲ್ಲಿ ಅತ್ಯಂತ ವೇಗದ ಚಾರ್ಜಿಂಗ್‌ ಸೌಲಭ್ಯ ನೀಡಲಾಗಿದೆ.

Realme GT 3: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿಶ್ವದ ಅತಿ ವೇಗದ ಚಾರ್ಜಿಂಗ್ ಫೋನ್ ರಿಯಲ್‌ ಮಿ GT 3: ಬೆಲೆ ಎಷ್ಟು ಗೊತ್ತೇ?
Realme GT 3
Vinay Bhat
|

Updated on: Mar 02, 2023 | 2:02 PM

Share

ಪ್ರಸಿದ್ಧ ರಿಯಲ್ ಮಿ ಕಂಪನಿ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿರುವುದು ತೀರಾ ಕಡಿಮೆ ಆಗುತ್ತಿದೆ. ಅಪರೂಪಕ್ಕಷ್ಟೆ ಮೊಬೈಲ್​​ಗಳನ್ನು ಅನಾವರಣ ಮಾಡುತ್ತಿದೆ. ಕೊನೆಯದಾಗಿ ರಿಯಲ್ ಮಿ ಕಂಪನಿ ಪ್ರಸಿದ್ಧ ಪಾನೀಯ ಸಂಸ್ಥೆ ಕೋಕಾ-ಕೋಲಾ ಜೊತೆಗೂಡಿ ರಿಯಲ್ ಮಿ 10 ಪ್ರೊ 5ಜಿ ಕೋಕಾ-ಕೋಲಾ ಎಡಿಷನ್ (Realme 10 Pro Coca-Cola Edition) ಅನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್​ಫೋನ್​ಗೆ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದೆ. ಇದೀಗ ಜಾಗತೀಕ ಮಾರುಕಟ್ಟೆಗೆ ಕಂಪನಿ ಹೊಸ ಮೊಬೈಲ್ ಒಂದನ್ನು ಪರಿಚಯಿಸಿದೆ. ಅದುವೇ ರಿಯಲ್‌ ಮಿ ಜಿಟಿ 3 (Realme GT 3). ಟೆಕ್ ಪ್ರಿಯರನ್ನು ದಂಗಾಗಿಸಿರುವ ಈ ಫೋನ್​ನಲ್ಲಿ ಅತ್ಯಂತ ವೇಗದ ಚಾರ್ಜಿಂಗ್‌ ಸೌಲಭ್ಯ ನೀಡಲಾಗಿದೆ. ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2023 ಈವೆಂಟ್‌ನಲ್ಲಿ ಈ ಫೋನ್ ರಿಲೀಸ್ ಆಗದೆ. ಇದರ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನು ಫೀಚರ್ಸ್?:

ರಿಯಲ್‌ ಮಿ GT 3 ಸ್ಮಾರ್ಟ್​ಫೋನ್ 2772 x 1240 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.74 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅದ್ಭುತವಾದ 144Hz ರಿಫ್ರೆಶ್ ರೇಟ್‌ ಆಯ್ಕೆ ನೀಡಲಾಗಿದೆ. ಬಲಿಷ್ಠವಾದ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 8+ ಜನ್‌ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರ ಮೂಲಕ ನೀವು ಎಷ್ಟೇ ದೊಡ್ಡ ಗಾತ್ರದ ಫೈಲ್​ಗಳನ್ನು ಡೌನ್​ಲೋಡ್ ಮಾಡಿದರೂ ಯಾವುದೇ ಅಡೆತಡೆ ಇಲ್ಲಿದೆ ಉತ್ತಮ ಕಾರ್ಯಕ್ಷಮತೆ ನೀಡಲಿದೆ. 1TB ಇಂಟರ್ನಲ್‌ ಸ್ಟೋರೇಜ್‌ ಆಯ್ಕೆ ಕೊಡಲಾಗಿದೆ.

ಇದನ್ನೂ ಓದಿ
Image
Vivo V27 Series: ಬೆರಗುಗೊಳಿಸುವ ಫೀಚರ್ಸ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ವಿವೋ V27, V27 ಪ್ರೊ ಸ್ಮಾರ್ಟ್​ಫೋನ್
Image
WhatsApp Ban: ಭಾರತದಲ್ಲಿ 29 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ತಪ್ಪಿಯೂ ಹೀಗೆ ಮಾಡಬೇಡಿ
Image
Xiaomi 13 Pro vs Xiaomi 13: ಶಓಮಿ ಯಾವ ಸ್ಮಾರ್ಟ್​ಫೋನ್ ಬೆಸ್ಟ್?
Image
Twitter Down: ಟ್ವಿಟರ್ ಓಪನ್ ಆಗುತ್ತಿಲ್ಲ ಎಂದು ವರದಿ ಮಾಡಿದ ಬಳಕೆದಾರರು

Tech Tips: ನಿಮ್ಮ ಫೇಸ್​ಬುಕ್​ನಲ್ಲಿರುವ ಫೋಟೋ, ವಿಡಿಯೋಗಳನ್ನು ಗೂಗಲ್ ಫೋಟೋಸ್​ಗೆ ವರ್ಗಾಹಿಸಬೇಕೇ?: ಇಲ್ಲಿದೆ ಟ್ರಿಕ್

ಕ್ಯಾಮೆರಾ ವಿಚಾರ ಬರುವುದಾದರೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸರ್​ನ ಮುಖ್ಯ ಕ್ಯಾಮೆರಾ ಒಂದುಕಡೆಯಾದರೆ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಸೆನ್ಸರ್​ನ ಮೊತ್ತೆರಡು ಕ್ಯಾಮೆರಾ ಇದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಇದ್ದು, ಅತ್ಯುತ್ತಮ ಫೋಟೋ ಸೆರೆ ಹಿಡಿಯುತ್ತದೆ.

ರಿಯಲ್‌ ಮಿ GT 3 ಫೋನ್​ನ ಮುಖ್ಯ ಹೈಲೇಟ್ ಇದರ ಫಾಸ್ಟ್ ಚಾರ್ಜರ್. ಇದು ಬರೋಬ್ಬರಿ 240W ಚಾರ್ಜಿಂಗ್‌ಬೆಂಬಲಿಸುವ 4,600mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, ಈ ಮೂಲಕ ಕೇವಲ ನಾಲ್ಕು ನಿಮಿಷದಲ್ಲಿ ಅರ್ಧದಷ್ಟು ಬ್ಯಾಟರಿ ಭರ್ತಿ ಮಾಡಬಹುದಾಗಿದೆ. 10 ನಿಮಿಷಗಳ ಒಳಗೆ 0-100% ಫುಲ್ ಚಾರ್ಜ್ ಆಗುತ್ತಂತೆ.

ಉಳಿದಂತೆ 5G, 4G LTE, ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ. ಡಾಲ್ಬಿ ಅಟ್ಮಾಸ್‌ನೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಈ ಫೋನ್‌ನ ಮತ್ತಷ್ಟು ಫೀಚರ್​ಗಳಲ್ಲಿ ಪ್ರಮುಖವಾದವು. ಇದರ 8GB + 128GB ಮಾದರಿಗೆ $649, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ 53,700 ರೂ. ಇರಬಹುದು. ಸದ್ಯಕ್ಕೆ ಜಾಗತಿಕವಾಗಿ ರಿಲೀಸ್ ಆಗಿರುವ ಈ ಸ್ಮಾರ್ಟ್​ಫೋನ್ ಇದೇ ತಿಂಗಳಲ್ಲಿ ಭಾರತಕ್ಕೂ ಕಾಲಿಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..