Xiaomi 11 Lite NE 5G: ಬಿಡುಗಡೆಗು ಮುನ್ನವೇ ಸೋರಿಕೆಯಾಯ್ತು ಶವೋಮಿ 11 ಲೈಟ್‌ NE 5G ಸ್ಮಾರ್ಟ್​ಫೋನ್ ವಿಶೇಷತೆ

ಶವೋಮಿ 11 ಲೈಟ್‌ NE 5G ಸ್ಮಾರ್ಟ್‌ಫೋನ್‌ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಅತ್ಯುತ್ತಮ ಪ್ರೊಸೆಸರ್, ಅದ್ಭುತ ಕ್ಯಾಮೆರಾ. ಬಲಿಷ್ಠ ಬ್ಯಾಟರಿ ಸೇರಿದಂತೆ ನೋಡಲು ಸ್ಟೈಲಿಶ್ ಆಗಿದೆ.

Xiaomi 11 Lite NE 5G: ಬಿಡುಗಡೆಗು ಮುನ್ನವೇ ಸೋರಿಕೆಯಾಯ್ತು ಶವೋಮಿ 11 ಲೈಟ್‌ NE 5G ಸ್ಮಾರ್ಟ್​ಫೋನ್ ವಿಶೇಷತೆ
Xiaomi 11 Lite NE 5G
Follow us
TV9 Web
| Updated By: Vinay Bhat

Updated on:Sep 19, 2021 | 1:33 PM

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಸೇಲ್ ಆಗುತ್ತಿರುವ ಮೊಬೈಲ್​ಗಳ ಸಾಲಿನಲ್ಲಿ ಶವೋಮಿ (Xiaomi) ಮೊದಲ ಸ್ಥಾನದಲ್ಲಿದೆ. ಇದಕ್ಕಾಗಿಯೆ ಶವೋಮಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿವೆ. ಇದೇ ಸಾಲಿಗೆ ಸದ್ಯ ಮತ್ತೊಂದು ಫೋನ್ ಸೇರ್ಪಡೆಯಾಗುವುದರಲ್ಲಿದೆ. ಹೌದು, ಶವೋಮಿ 11 ಲೈಟ್‌ NE 5G (Xiaomi 11 Lite NE 5G) ಸ್ಮಾರ್ಟ್​ಫೋನ್ ಭಾರತದಲ್ಲಿ ಲಾಂಚ್‌ ಮಾಡಲು ಕಂಪೆನಿ ಸಿದ್ಧತೆ ನಡೆಸಿದೆ. ಇದೇ ಸೆಪ್ಟೆಂಬರ್ 29 ರಂದು ದೇಶದಲ್ಲಿ ಶವೋಮಿ 11 ಲೈಟ್‌ NE ಅನಾವರಣಗೊಳ್ಳಲಿದೆ. ಆದರೆ, ಇದಕ್ಕೂ ಮುನ್ನವೇ ಈ ಫೋನಿನ ಕೆಲವು ಮಾಹಿತಿಗಳು ಆನ್​ಲೈನ್​ನಲ್ಲಿ ಸೋರಿಕೆಯಾಗಿದೆ.

ಶವೋಮಿ 11 ಲೈಟ್‌ NE 5G ಸ್ಮಾರ್ಟ್‌ಫೋನ್‌ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಅತ್ಯುತ್ತಮ ಪ್ರೊಸೆಸರ್, ಅದ್ಭುತ ಕ್ಯಾಮೆರಾ. ಬಲಿಷ್ಠ ಬ್ಯಾಟರಿ ಸೇರಿದಂತೆ ನೋಡಲು ಸ್ಟೈಲಿಶ್ ಆಗಿದೆ. ಸದ್ಯ ಲೀಕ್ ಆಗಿರುವ ಮಾಹಿತಿಯ ಪ್ರಕಾರ ಈ ಸ್ಮಾರ್ಟ್​ಫೋನ್ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿರಲಿದೆ. ಇದು 10-ಬಿಟ್ ಫ್ಲಾಟ್ AMOLED ಟ್ರೂಲಿ-ಕಲರ್‌ ಡಿಸ್‌ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ.

ಇನ್ನೂ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಇದು 8GB RAM ಮತ್ತು 256GB ವರೆಗೆ ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಒದಗಿಸಲಿದೆ ಎಂಬ ಮಾತುಕೂಡ ಇದೆ.

ಶವೋಮಿ 11 ಲೈಟ್‌ 5G NE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 5MP ಟೆಲಿಮಾಕ್ರೋ ಶೂಟರ್ ಹೊಂದಿರಲಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿರಲಿದೆ ಎನ್ನಲಾಗಿದೆ.

ಬ್ಯಾಟರಿ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್‌ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿ ಬೆಲೆ ಕೂಡ ಸೋರಿಕೆಯಾಗಿದ್ದು, ಮೂಲಗಳ ಪ್ರಕಾರ 21,999 ರೂ. ಬೆಲೆ ಹೊಂದಿರಲಿದೆ ಎನ್ನಲಾಗಿದೆ. ಇದು 6GB RAM ಮತ್ತು 128GB ಸ್ಟೋರೇಜ್, 8GB RAM ಮತ್ತು 128GB ಸ್ಟೋರೇಜ್ ಹಾಗೂ 8GB RAM ಮತ್ತು 256GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

Infinix Hot 11: ಭಾರತದಲ್ಲಿ ಕೇವಲ 8,999 ರೂ. ಗೆ ಬಿಡುಗಡೆ ಆಯಿತು ಆಕರ್ಷಕ ಫೀಚರ್​ಗಳ ಸ್ಮಾರ್ಟ್​ಫೋನ್

(Xiaomi 11 Lite NE 5G Price in India and other specifications Leak Ahead of September 29 Launch)

Published On - 12:48 pm, Sun, 19 September 21

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು