Xiaomi 11 Youth Vitality Edition: ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿ ಬಿಡುಗಡೆ: ಈ ಫೋನ್​ನಲ್ಲಿದೆ ವಿಶೇಷ ಫೀಚರ್

ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್​ಫೋನ್ ಸಾಕಷ್ಟು ವಿಶೇಷತೆಯಿಂದ ಕೂಡಿದ್ದು, 64 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ಹೊಂದಿರುವ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

Xiaomi 11 Youth Vitality Edition: ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿ ಬಿಡುಗಡೆ: ಈ ಫೋನ್​ನಲ್ಲಿದೆ ವಿಶೇಷ ಫೀಚರ್
Xiaomi 11 Youth Vitality Edition
Follow us
TV9 Web
| Updated By: Vinay Bhat

Updated on: Dec 09, 2021 | 3:46 PM

ಸದ್ಯ ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯನ್ನು ಆಳುತ್ತಿರುವ ನಂಬರ್ ಒನ್ ಬ್ರ್ಯಾಂಡ್ ಶವೋಮಿ (Xiaomi) ನೂತನ ಪ್ರಯೋಗಕ್ಕೆ ಕೈ ಹಾಕುತ್ತಿದೆ. 200 ಮೆಗಾ ಫಿಕ್ಸೆಲ್ ಕ್ಯಾಮೆರಾದ (200MP Camera) ಸ್ಮಾರ್ಟ್​ಫೋನ್, ಮಡಚುವ ಫೋನ್ ಹೀಗೆ ಅನೇಕ ಹೊಸ ಪ್ರಾಡಕ್ಟ್​ಗಳ ತಯಾರಿಕೆ ಒಂದು ಕಡೆ ಆಗುತ್ತಿದ್ದರೆ, ಇದರ ನಡುವೆ ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿಯನ್ನು (Xiaomi 11 Youth Vitality Edition) ಮಾರುಕಟ್ಟೆಯಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್​ಫೋನ್ ಸಾಕಷ್ಟು ವಿಶೇಷತೆಯಿಂದ ಕೂಡಿದ್ದು, 64 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ಹೊಂದಿರುವ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಬಲಿಷ್ಠವಾದ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌, ಅತ್ಯುತ್ತಮ ಬ್ಯಾಟರಿ ಸೇರಿದಂತೆ ಅನೇಕ ಫೀಚರ್​​ಗಳು ಇದರಲ್ಲಿದೆ. ಆದರೆ, ಇದು ಸದ್ಯಕ್ಕೆ ಭಾರದಲ್ಲಿ ಲಭ್ಯವಿಲ್ಲ. ಬದಲಾಗಿ ಚೀನಾದಲ್ಲಿ ಬಿಡುಗಡೆ ಆಗಿದೆ. ಮುಂದಿನ ದಿನಗಳಲ್ಲಿ ಇದು ದೇಶಕ್ಕೂ ಕಾಲಿಡಲಿದೆಯಂತೆ.

ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟೋ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ.

ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್‌ನೊಂದಿಗೆ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೋ ಚಾಟ್‌ಗಳಿಗಾಗಿ 20-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ f/2.24 ಲೆನ್ಸ್‌ ಅನ್ನು ಹೊಂದಿದೆ.

ಈ ಸ್ಮಾರ್ಟ್​ಫೋನ್ 4,250mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ.

ಶಿಯೋಮಿ 11 ಯೂತ್‌ ವಿಟಾಲಿಟಿ ಆವೃತ್ತಿಯು 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 1,999 (ಸುಮಾರು 23,800ರೂ.) ಬೆಲೆ ನಿಗದಿಪಡಿಸಲಾಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ CNY 2,299 (ಸುಮಾರು 27,300ರೂ.) ಹೊಂದಿರುತ್ತದೆ. ಇದು ಕಪ್ಪು, ನೀಲಿ, ಗುಲಾಬಿ ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

Best Camera Phone 2021: ನೀವು ಬೆಸ್ಟ್ ಕ್ಯಾಮೆರಾ, ಬ್ಯಾಟರಿ ಸಾಮರ್ಥ್ಯವಿರುವ ಫೋನ್ ಹುಡುಕುತ್ತಿದ್ದೀರಾ?: ಹಾಗಾದ್ರೆ ಇಲ್ಲೊಮ್ಮೆ ನೋಡಿ

(Xiaomi 11 Youth Vitality Edition was launched as the latest model in the Xiaomi 11 series)

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು